ಕರ್ನಾಟಕ

karnataka

ETV Bharat / state

ಗದಗ: ಬಾಲ್ಯ ವಿವಾಹ ತಡೆದ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು - Prevention Of Child Marriage - PREVENTION OF CHILD MARRIAGE

ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಹಾಗೂ ಪೊಲೀಸರು ಬಾಲ್ಯ ವಿವಾಹವನ್ನು ತಡೆದ ಘಟನೆ ಗದಗದಲ್ಲಿ ನಡೆದಿದೆ.

ಗದಗ: ಬಾಲ್ಯ ವಿವಾಹಕ್ಕೆ ಬ್ರೇಕ್ ಹಾಕಿದ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು
ಗದಗ: ಬಾಲ್ಯ ವಿವಾಹಕ್ಕೆ ಬ್ರೇಕ್ ಹಾಕಿದ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು

By ETV Bharat Karnataka Team

Published : Apr 26, 2024, 10:55 PM IST

ಗದಗ:ಬಾಲ್ಯ ವಿವಾಹವೊಂದನ್ನು ಅಧಿಕಾರಿಗಳು ತಡೆದ ಘಟನೆ ಗದಗದಲ್ಲಿ ನಡೆದಿದೆ. ನಗರದ ಕರ್ನಾಟಕ ಭವನದಲ್ಲಿ ಗದಗ ತಾಲೂಕಿನ ಕೊಟುಮಚಗಿ ಗ್ರಾಮದ ಇಬ್ಬರು ಸಹೋದರರ ಮದುವೆ ನಿಶ್ಚಯ ಮಾಡಲಾಗಿತ್ತು. ಆದರೆ, ಕಿರಿಯ ಸಹೋದರನ ಮದುವೆ ಆಗುತ್ತಿರುವ ಬಾಲಕಿಗೆ ಇನ್ನೂ 18 ವರ್ಷ ಆಗಿರಲಿಲ್ಲ. ಆದರೂ ಕೂಡ ಪೋಷಕರು ಮದುವೆ‌ ಮಾಡಲು ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದರು.

ಮುಂಜಾನೆಯಿಂದ ಮದುವೆ ಕಾರ್ಯಗಳನ್ನು ಮುಗಿಸಿ, ಇನ್ನೇನು ಮಾಂಗಲ್ಯಧಾರಣೆ ಆಗಬೇಕು ಎನ್ನುವ ಸಮಯದಲ್ಲಿ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಹಾಗೂ ಪೊಲೀಸರು ಕಲ್ಯಾಣ ಮಂಟಪಕ್ಕೆ ಧಾವಿಸಿದ್ದಾರೆ. ಈ ವೇಳೆ ಬಾಲಕಿಯ ವಯಸ್ಸು, ವಿವರ ನೋಡಿದಾಗ 18 ವರ್ಷ ತುಂಬಲು ಇನ್ನೂ 15 ದಿನಗಳು ಬಾಕಿ ಇದ್ದವು. ಹೀಗಾಗಿ ಅಧಿಕಾರಿಗಳು ಮದುವೆಯನ್ನು ತಡೆದಿದ್ದಾರೆ. ಪೋಷಕರ ಮನವೊಲಿಸಿ, ಪೋಷಕರಿಂದ ಮುಚ್ಚಳಿಕೆ ಪತ್ರ ಬರೆಸಿಕೊಂಡು ಮದುವೆ ತಡೆಯುವಲ್ಲಿ ಯಶಸ್ವಿಯಾಗಿದ್ದಾರೆ.

ಇದನ್ನೂ ಓದಿ:ಚಿಕ್ಕಬಳ್ಳಾಪುರ: ಒಂದೇ ಕುಟುಂಬದ 85ಕ್ಕೂ ಹೆಚ್ಚು ಮಂದಿಯಿಂದ ಏಕಕಾಲಕ್ಕೆ ಮತದಾನ - Lok Sabha Election

ABOUT THE AUTHOR

...view details