ಕರ್ನಾಟಕ

karnataka

ETV Bharat / state

ಬಂಟ್ವಾಳ: ಇ.ಡಿ ಅಧಿಕಾರಿಗಳೆಂದು ನಂಬಿಸಿ ಉದ್ಯಮಿ ಮನೆ ದರೋಡೆ: ಕೇರಳದಲ್ಲಿ ಆರೋಪಿ ಸೆರೆ - BUSINESSMAN HOUSE ROBBERY CASE

ಬಂಟ್ವಾಳ ತಾಲೂಕಿನ ಬೋಳಂತೂರು ಉದ್ಯಮಿ ಮನೆಯಲ್ಲಿ ನಡೆದ ದರೋಡೆ ಪ್ರಕರಣ ಸಂಬಂಧ ಓರ್ವ ಆರೋಪಿಯನ್ನು ಬಂಧನ ಮಾಡಲಾಗಿದೆ.

robbery case
ದರೋಡೆ ಆರೋಪಿ (ETV Bharat)

By ETV Bharat Karnataka Team

Published : Jan 23, 2025, 10:50 PM IST

ಬಂಟ್ವಾಳ (ದಕ್ಷಿಣ ಕನ್ನಡ):ಬಂಟ್ವಾಳ ತಾಲೂಕಿನ ಬೋಳಂತೂರು ಉದ್ಯಮಿ ಮನೆಗೆ ಇ.ಡಿ ಅಧಿಕಾರಿಗಳೆಂದು ನಂಬಿಸಿ ಹಣ ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆರೋಪಿಯನ್ನು ಕೇರಳದ ಅನಿಲ್ ಫರ್ನಾಂಡೀಸ್ (49) ಎಂದು ಗುರುತಿಸಲಾಗಿದೆ.

03-01-2025ರಂದು ರಾತ್ರಿ, ಬಂಟ್ವಾಳ ತಾಲೂಕು, ವಿಟ್ಲ ಪೊಲೀಸ್‌ ಠಾಣಾ ವ್ಯಾಪ್ತಿಯ ಬೋಳಂತೂರು ನಾರ್ಶ ಎಂಬಲ್ಲಿ ಉದ್ಯಮಿಯೊಬ್ಬರ ಮನೆಗೆ 06 ಜನ ಅಪರಿಚಿತರು ಇ.ಡಿ ಅಧಿಕಾರಿಗಳೆಂದು ನಂಬಿಸಿ, ಮನೆಯ ಶೋಧ ನಡೆಸಿದ್ದರು. ಬಳಿಕ ಸುಮಾರು 30 ಲಕ್ಷ ರೂ. ನಗದನ್ನು ದರೋಡೆ ಮಾಡಿಕೊಂಡು ಪರಾರಿಯಾಗಿದ್ದರು. ಈ ಸಂಬಂಧ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಆರೋಪಿಗಳ ಪತ್ತೆಗಾಗಿ ಪೊಲೀಸರು ನಾಲ್ಕು ವಿಶೇಷ ತನಿಖಾ ತಂಡಗಳನ್ನು ರಚಿಸಿ ಕಾರ್ಯಾಚರಣೆ ನಡೆಸಿದ್ದಾರೆ. ಆರೋಪಿ ಅನಿಲ್‌ ಫರ್ನಾಂಡಿಸ್‌ ಎಂಬಾತನನ್ನು ಕೇರಳದ ಕೊಲ್ಲಂ ಜಿಲ್ಲೆಯ ಪೆರಿನಾಡ್‌ ಎಂಬಲ್ಲಿ ಬಂಧನ ಮಾಡಲಾಗಿದೆ. ಅಲ್ಲದೇ, ಕೃತ್ಯಕ್ಕೆ ಉಪಯೋಗಿಸಿದ ಕೇರಳ ನೋಂದಣಿಯ ಕಾರು, 5 ಲಕ್ಷ ರೂ. ನಗದು ಹಾಗೂ ನಕಲಿ ಕೃತ್ಯ ನಡೆಸುವಾಗ ಕಾರಿಗೆ ಅಳವಡಿಸಿದ್ದ ನಕಲಿ ನಂಬರ್​​ ಪ್ಲೇಟ್‌ ವಶಪಡಿಸಿಕೊಳ್ಳಲಾಗಿದೆ. ವಶಕ್ಕೆ ಪಡೆದ ನಗದು ಹಾಗೂ ವಾಹನದ ಒಟ್ಟು ಮೌಲ್ಯ 11 ಲಕ್ಷ ರೂ. ಆಗಬಹುದು ಎಂದು ಪೊಲೀಸ್​ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಪ್ರಕರಣದಲ್ಲಿ ಉಳಿದ ಆರೋಪಿಗಳ ಬಂಧನಕ್ಕೆ ನಾಲ್ಕು ವಿಶೇಷ ತನಿಖಾ ತಂಡಗಳಿಂದ ಕಾರ್ಯಾಚರಣೆ ಮುಂದುವರೆಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ:ಮಂಗಳೂರು ಸೆಲೂನ್ ಮೇಲೆ ರಾಮಸೇನೆ ದಾಳಿ ಪ್ರಕರಣ: ಟಿವಿ ಕ್ಯಾಮರಾಮ್ಯಾನ್ ಸಹಿತ 14 ಮಂದಿ ಬಂಧನ

ABOUT THE AUTHOR

...view details