ಮಂಗಳೂರು:ಉಡುಪಿ ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಆತಂಕ ಸೃಷ್ಟಿಸಿದ್ದು, ಉಡುಪಿ ಗಡಿಭಾಗದಲ್ಲಿರುವ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ.
ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯಾಧಿಕಾರಿ ಡಾ. ಹೆಚ್.ಆರ್. ತಿಮ್ಮಯ್ಯ 'ಈಟಿವಿ ಭಾರತ'ಕ್ಕೆ ಮಾಹಿತಿ ನೀಡಿ, ''ದಕ್ಷಿಣ ಕನ್ನಡ ಜಿಲ್ಲೆಯ ಮೂಡಬಿದಿರೆ ತಾಲೂಕಿನ ನೆಲ್ಲಿಕಾರಿನಲ್ಲಿ ವ್ಯಕ್ತಿಯೊಬ್ಬರಿಗೆ ವಾಂತಿ, ಭೇದಿ ಪ್ರಕರಣ ಕಂಡು ಬಂದಿತ್ತು. ಆರೋಗ್ಯ ಇಲಾಖೆಯ ತಂಡ ಪರಿಶೀಲನೆ ನಡೆಸಿದಾಗ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಈದುವಿನಲ್ಲಿ ಕಾಲರಾ ಇರುವುದು ಪತ್ತೆಯಾಗಿತ್ತು. ವ್ಯಕ್ತಿಯ ಮಲದ ಮಾದರಿ ಪರೀಕ್ಷೆ ನಡೆಸಿದಾಗ ಕಾಲರಾ ಪತ್ತೆಯಾಗಿತ್ತು. ವ್ಯಕ್ತಿಗೆ ಚಿಕಿತ್ಸೆ ನೀಡಲಾಗಿದ್ದು, ಗುಣಮುಖರಾಗಿದ್ದಾರೆ'' ಎಂದು ತಿಳಿಸಿದರು.