ಅಥಣಿಯಲ್ಲಿ ಕಾರ್ಖಾನೆ ಬಾಯ್ಲರ್ ಬ್ಲಾಸ್ಟ್ (ETV Bharat) ಚಿಕ್ಕೋಡಿ (ಬೆಳಗಾವಿ) : ಅಥಣಿ ಸಣ್ಣ ಕೈಗಾರಿಕಾ ಪ್ರದೇಶದ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟಗೊಂಡು ಓರ್ವ ಮಹಿಳಾ ಕಾರ್ಮಿಕಳು ಸಾವನ್ನಪ್ಪಿದ್ದರೆ, ಇಬ್ಬರು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.
ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಚಿಕ್ಕಟ್ಟಿ ಗ್ರಾಮದ ಹೊರವಲಯದ ಕೈಗಾರಿಕಾ ಪ್ರದೇಶದ ಪ್ರಿಯಾ ಎಕ್ಸ್ಪೋರ್ಟ್ ಕೈಗಾರಿಕಾ ಘಟಕದ ಬಾಯ್ಲರ್ (ಉಪ್ಪಿನಕಾಯಿ ತಯಾರಿಕೆ) ಸ್ಪೋಟಗೊಂಡು, ಅಥಣಿ ತಾಲೂಕಿನ ಸತ್ತಿ ಗ್ರಾಮದ ಮಹಿಳೆ ಸುನಂದಾ ಸಿದಪ್ಪ ತೇಲಿ (36) ಸಾವು ಸಂಭವಿಸಿದೆ.
ಬಾಯ್ಲರ್ ಬ್ಲಾಸ್ಟ್ನಿಂದ ಗಾಯಗೊಂಡ ಇಬ್ಬರು ಕಾರ್ಮಿಕರನ್ನು ಅಥಣಿ ಪಟ್ಟಣದ ಹಾಗೂ ಮಹಾರಾಷ್ಟ್ರದ ಮಿರಜ್ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬ್ಲಾಸ್ಟ್ ಆದ ಸ್ಥಳದಲ್ಲಿ ಬೆಂಕಿ ಆವರಿಸಿದ್ದರಿಂದ ಕೆಲಕಾಲ ಕೈಗಾರಿಕಾ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳಕ್ಕೆ ಅಥಣಿ ಅಗ್ನಿಶಾಮಕ ದಳದ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಅಥಣಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ :ಬಳ್ಳಾರಿ: ಬಿಸ್ಕೆಟ್ ಕಾರ್ಖಾನೆಯಲ್ಲಿ ಬಾಯ್ಲರ್ ಸ್ಫೋಟ, ಕಾರ್ಮಿಕ ಸಾವು