ಮೈಸೂರು:ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಚಿರತೆ ಇರುವಿಕೆ ಬಗ್ಗೆ ಯಾವುದೇ ರೀತಿಯ ಪ್ರತ್ಯಕ್ಷ ಅಥವಾ ಪರೋಕ್ಷ ಕುರುಹುಗಳು ಕಂಡು ಬಾರದೇ ಇರುವುದರಿಂದ ಕಾರ್ಯಾಚರಣೆ ಸ್ಥಗಿತಗೊಳಿಸಲಾಗಿದೆ ಮೈಸೂರು ಪ್ರಾದೇಶಿಕ ಅರಣ್ಯ ವಿಭಾಗದ ಬಿ ಬಸವರಾಜ್ ಹೇಳಿದ್ದಾರೆ. ರಾತ್ರಿ ವೇಳೆ ಥರ್ಮಲ್ ಡ್ರೋನ್ ಬಳಸಿ ಕ್ಯಾಂಪಸ್ ನಲ್ಲಿ ನಿರಂತರ ನಿಗಾ ವಹಿಸಲು ಸೂಚಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ನಡೆಯುತ್ತಿದ್ದ ಆಪರೇಷನ್ ಚಿರತೆ ಸ್ಟಾಪ್: ಉಪ ಅರಣ್ಯ ಸಂರಕ್ಷಣಾಧಿಕಾರಿ ಸ್ಪಷ್ಟನೆ - OPERATION CHEETAH STOP
ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ನಡೆಯುತ್ತಿದ್ದ ಆಪರೇಷನ್ ಚಿರತೆ ಕೆಲಸವನ್ನು ಸ್ಥಗಿತಗೊಳಿಸಲಾಗಿದೆ.
ಇನ್ಫೋಸಿಸ್ ಕ್ಯಾಂಪಸ್ ನಲ್ಲಿ ನಡೆಯುತ್ತಿದ ಆಪರೇಷನ್ ಚಿರತೆ ಸ್ಟಾಪ್: ಉಪ ಅರಣ್ಯ ಸಂರಕ್ಷಣಾಧಿಕಾರಿ (ETV Bharat)
Published : Jan 15, 2025, 7:26 PM IST
ಕಳೆದ 10 ದಿನಗಳಿಂದ ಇಲ್ಲಿಯವರೆಗೂ ಕ್ಯಾಮೆರಾ ಟ್ರ್ಯಾಪ್ಗಳಲ್ಲಿ ಆಗಲಿ, ಡ್ರೋನ್ ಕ್ಯಾಮೆರಾ, ಕ್ಯಾಂಪಸ್ ನಲ್ಲಿರುವ ಸಿಸಿಟಿವಿ ಕ್ಯಾಮರಾಗಳಲ್ಲಿ ಆಗಲಿ ,ಕೊಂಬಿಂಗ್ ಕಮ್ ಸರ್ಚ್ ನಲ್ಲಿಯಾಗಲಿ, ಯಾವುದೇ ಚಲನವಲನಗಲಾಗಲೀ, ಹೆಜ್ಜೆ ಗುರುತು ಅಥವಾ ಯಾವುದೇ ರೀತಿಯ ಚಿರತೆ ಇರುವಿಕೆಯ ಕುರುಹುಗಳಾಗಲಿ ಕಂಡು ಬಂದಿರುವುದಿಲ್ಲ ಎಂದು ಅವರು ಇದೇ ವೇಳೆ ಸ್ಪಷ್ಟಪಡಿಸಿದ್ದಾರೆ.
ಇದನ್ನು ಓದಿ:ಮೈಸೂರು: ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಊರು ತೊರೆಯುತ್ತಿರುವ ಗ್ರಾಮಸ್ಥರು