ಕರ್ನಾಟಕ

karnataka

ETV Bharat / state

ಬೆಳಗಾವಿ ಲೋಕಸಭಾ ಕ್ಷೇತ್ರದಿಂದ ಜಗದೀಶ್ ಶೆಟ್ಟರ್ ಸ್ಪರ್ಧೆಗೆ ವಿರೋಧ - Belagavi BJP ticket issue

ಜಗದೀಶ ಶೆಟ್ಟರ್ ಹೆಸರು ಫೈನಲ್ ಬೆನ್ನೆಲ್ಲೆ ಬೆಳಗಾವಿ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟವಾಗಿದೆ.

ಜಗದೀಶ್ ಶೆಟ್ಟರ್ ಸ್ಪರ್ಧೆಗೆ ವಿರೋಧ
ಜಗದೀಶ್ ಶೆಟ್ಟರ್ ಸ್ಪರ್ಧೆಗೆ ವಿರೋಧ

By ETV Bharat Karnataka Team

Published : Mar 15, 2024, 8:59 PM IST

Updated : Mar 15, 2024, 10:22 PM IST

ಜಗದೀಶ್ ಶೆಟ್ಟರ್ ಸ್ಪರ್ಧೆಗೆ ವಿರೋಧ

ಬೆಳಗಾವಿ : ಬೆಳಗಾವಿ ಲೋಕಸಭಾ ಕ್ಷೇತ್ರದ ಸ್ಪರ್ಧೆಗೆ ಜಗದೀಶ್ ಶೆಟ್ಟರ್ ಹೆಸರು ಫೈನಲ್ ಮಾಡುವ ವಿಚಾರ ಮುನ್ನೆಲೆಗೆ ಬರುತ್ತಿದ್ದಂತೆ ವಿರೋಧ ವ್ಯಕ್ತವಾಗಿದೆ. ಜಿಲ್ಲೆಯ ಬಿಜೆಪಿ ನಾಯಕರು, ಆಕಾಂಕ್ಷಿಗಳು‌ ಜಾರಕಿಹೊಳಿ ಮತ್ತು ಅಂಗಡಿ ಕುಟುಂಬ ಹೊರಗಿಟ್ಟು ಮಹತ್ವದ ಸಭೆ‌ ನಡೆಸುವ ಮೂಲಕ ಶೆಟ್ಟರ್‌ಗೆ ಬಿಗ್ ಶಾಕ್ ನೀಡಿದ್ದಾರೆ.

ಕೆಎಲ್ಇ ಕಾರ್ಯಾಧ್ಯಕ್ಷ ಡಾ. ಪ್ರಭಾಕರ ಕೋರೆ ಅವರ ಬೆಳಗಾವಿ ಕ್ಯಾಂಪ್ ಪ್ರದೇಶದಲ್ಲಿರುವ ನಿವಾಸದಲ್ಲಿ ಬಿಜೆಪಿ ನಾಯಕರು ಸಭೆ ನಡೆಸಿದ್ದಾರೆ. ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅಭಯ ಪಾಟೀಲ, ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ, ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಮಾಜಿ ಶಾಸಕ ಡಾ.‌ವಿಶ್ವನಾಥ್ ಪಾಟೀಲ್, ಎಂಬಿ ಝಿರಲಿ, ವಿರೂಪಾಕ್ಷ ‌ಮಾಮನಿ, ಧನಂಜಯ್ ಜಾಧವ್ ಸೇರಿ ಮತ್ತಿತರರು ಸಭೆಯಲ್ಲಿ ಪಾಲ್ಗೊಂಡಿದ್ದರು.

ಜಗದೀಶ್ ಶೆಟ್ಟರ್ ಬದಲು ಸ್ಥಳೀಯರಿಗೆ ಟಿಕೆಟ್ ಕೊಡುವಂತೆ ವರಿಷ್ಠರ ಗಮನಕ್ಕೆ ತರಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ಈರಣ್ಣ ಕಡಾಡಿ ಮೂಲಕ ವರಿಷ್ಠರ ಮೇಲೆ ಒತ್ತಡಕ್ಕೆ ಹೇರಲು ಜವಾಬ್ದಾರಿ ನೀಡಲಾಗಿದೆ. ಇನ್ನು ರಾಜ್ಯ ನಾಯಕರ ಮನವರಿಕೆ ಮಾಡುವ ಜವಾಬ್ದಾರಿ ಅನಿಲ್ ಬೆನಕೆ ಹೆಗಲಿಗೆ‌ ವಹಿಸಲಾಗಿದೆ. ಟಿಕೆಟ್ ಹಂಚಿಕೆಯಲ್ಲಿ ಸ್ಥಳೀಯರಿಗೆ ಆದ್ಯತೆ ನೀಡಬೇಕು.‌ ಜಗದೀಶ್ ಶೆಟ್ಟರ್ ಹೊರತು ಪಡಿಸಿ ಸ್ಥಳೀಯರಿಗೆ ಟಿಕೆಟ್ ನೀಡಲು ಒತ್ತಡ ಹೇರಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ಸಭೆಯ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಈರಣ್ಣ ಕಡಾಡಿ, ಕೋರ್ ಕಮಿಟಿ ಸಭೆ ಪೂರ್ಣ ಆಗಿರಲಿಲ್ಲ. ಕೋರ್ ಕಮಿಟಿಗೆ ಸಂಬಂಧಿಸಿದಂತೆ ಸಭೆ ಆಗಿದೆ. ಸಭೆಯಲ್ಲಿ ಕೋರ್ ಕಮಿಟಿಗೆ ಸಂಬಂಧಿಸಿದಂತೆ ಹಲವು ವಿಚಾರಗಳನ್ನು ಚರ್ಚೆ ಮಾಡಿದ್ದೇವೆ. ಚುನಾವಣೆಗೆ ಸಂಬಂಧಿಸಿದಂತೆ ಸಲಹೆ ಸೂಚನೆಗಳು ಬಂದಿವೆ. ಅವುಗಳನ್ನು ರಾಷ್ಟ್ರೀಯ ನಾಯಕರ ಗಮನಕ್ಕೆ ತರುತ್ತೇನೆ. ಹಾಗೆ ರಾಜ್ಯ ನಾಯಕರಿಗೆ ಅನಿಲ್ ಬೆನಕೆ ತರುತ್ತಾರೆ ಎಂದರು.

ಬೆಳಗಾವಿ ಲೋಕಸಭೆಗೆ ಜಗದೀಶ್ ಶೆಟ್ಟರ್ ಹೆಸರು ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಬೆಳಗಾವಿ ಲೋಕಸಭೆಗೆ ಸಾಕಷ್ಟು ಹೆಸರುಗಳು ಬಂದಿವೆ. 20 ಅಭ್ಯರ್ಥಿಗಳ ಘೋಷಣೆ ನಂತರ ರಾಷ್ಟ್ರೀಯ ನಾಯಕರು, ರಾಜ್ಯ ನಾಯಕರು ಇವತ್ತಿನವರೆಗೂ ಅಧಿಕೃತ ಘೋಷಣೆ ಮಾಡಿಲ್ಲ. ಹಾಗಾಗಿ, ಊಹಾಪೋಹಗಳ ಬಗ್ಗೆ ನಿರ್ಣಯ ತೆಗೆದುಕೊಳ್ಳಲಾರದು. ಅಧಿಕೃತವಾಗಿ ರಾಷ್ಟ್ರೀಯ ನಾಯಕರು ಘೋಷಣೆ ಮಾಡಿಲ್ಲ. ಸಾಕಷ್ಟು ಜನರು ಅಭ್ಯರ್ಥಿಗಳಿದ್ದಾರೆ. ಊಹೆ ಮಾಡಿಕೊಂಡು ಯಾವುದನ್ನು ಮಾತನಾಡಲ್ಲ. ಅಧಿಕೃತವಾಗಿ ರಾಷ್ಟ್ರೀಯ ನಾಯಕರು ಬಿ ಫಾರ್ಮ್ ಕೊಡುತ್ತಾರೆ‌. ಅಲ್ಲಿಯವರೆಗೆ ಯಾವುದೇ ಪ್ರತಿಕ್ರಿಯೆ ಕೊಡುವುದು ಒಳ್ಳೆಯದಲ್ಲ. ಸ್ಥಳೀಯವಾಗಿ ಸಾಕಷ್ಟು ಮುಖಂಡರು ಟಿಕೆಟ್ ಆಕಾಂಕ್ಷಿಗಳಿದ್ದಾರೆ. ಅದನ್ನು ರಾಷ್ಟ್ರೀಯ ನಾಯಕರ ಗಮನಕ್ಕೆ ತರಲಾಗಿದೆ. ಜೆಡಿಎಸ್ ಜತೆಗೆ ಸ್ಥಳ ಹೊಂದಾಣಿಕೆ, ಸಾಮಾಜಿಕ ನ್ಯಾಯದಡಿ ಅವಕಾಶ ಕೊಡುವ ಚರ್ಚೆ ನಡೆದಿದೆ ಎಂದು ಹೇಳಿದರು.

ರಾಜ್ಯಸಭೆ ಮಾಜಿ ಸದಸ್ಯ ಡಾ. ಪ್ರಭಾಕರ್ ಕೋರೆ ಮಾತನಾಡಿ, ಬೆಳಗಾವಿ ಕ್ಷೇತ್ರದ ಅಧಿಕೃತ ಅಭ್ಯರ್ಥಿ ಘೋಷಣೆಯಾಗಿಲ್ಲ. ಆದರೆ ಈ ಕುರಿತಾದ ಕೆಲವು ಮಾಹಿತಿಗಳು ಮಾಧ್ಯಮಗಳಲ್ಲಿ ಪ್ರಸಾರವಾಗುತ್ತಿವೆ. ಆದರೆ ಇನ್ನೂ ಅಧಿಕೃತ ಅಭ್ಯರ್ಥಿ ಘೋಷಣೆಯಾಗಿಲ್ಲ. ಅಲ್ಲದೇ ಹೈಕಮಾಂಡ್ ಕೂಡ ಈ ಬಗ್ಗೆ ಮಾತುಕತೆ ನಡೆಸಿಲ್ಲ ಎಂದು ತಿಳಿಸಿದರು. ಶಾಸಕ ಅಭಯ ಪಾಟೀಲ ಮಾತನಾಡಿ, ಲೋಕಸಭೆಗೆ ಸ್ಪರ್ಧಿಸಲು ಬಹಳಷ್ಟು ಸ್ಥಳೀಯ ನಾಯಕರು ಸಮರ್ಥರಿದ್ದಾರೆ. ಜಿಲ್ಲೆಯ ಜನರ ಅಪೇಕ್ಷೆ ಕೂಡ ಅದೇ ಆಗಿದೆ. ಇಂದಿನ ಸಭೆಯಲ್ಲಿ ಚರ್ಚೆಯಾಗಿರುವ ಅನೇಕ ವಿಚಾರಗಳನ್ನು ಪಕ್ಷದ ಹಿರಿಯ ಗಮನಕ್ಕೆ ತರುತ್ತೇವೆ ಎಂದರು.

ಇದನ್ನೂ ಓದಿ :ಹಾವೇರಿ ಹೆಸರು ರಾಷ್ಟ್ರ ಮಟ್ಟದಲ್ಲಿ ಕೊಂಡೊಯ್ಯಲು ಸರ್ವ ಪ್ರಯತ್ನ: ಮಾಜಿ ಸಿಎಂ ಬೊಮ್ಮಾಯಿ

Last Updated : Mar 15, 2024, 10:22 PM IST

ABOUT THE AUTHOR

...view details