ಕರ್ನಾಟಕ

karnataka

ETV Bharat / state

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಅ.19ರವರೆಗೆ 7 ಜಿಲ್ಲೆಗಳಿಗೆ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ - KARNATAKA RAIN ALERT

ರಾಜ್ಯದಲ್ಲಿ ಇಂದಿನಿಂದ ಅ.19 ರವರೆಗೆ ಏಳು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಉಪಗ್ರಹ ಚಿತ್ರಗಳು
ಉಪಗ್ರಹ ಚಿತ್ರಗಳು (ETV Bharat)

By ETV Bharat Karnataka Team

Published : Oct 15, 2024, 7:13 PM IST

ಬೆಂಗಳೂರು: ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾದ ಪರಿಣಾಮ ಇಂದಿನಿಂದ ಏಳು ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಇಂದಿನಿಂದ ಅ.19ರವರೆಗೆ ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು, ಮಂಡ್ಯ, ಮೈಸೂರು, ಚಾಮರಾಜನಗರ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ ಹಾಗೂ ಹಾವೇರಿ ಜಿಲ್ಲೆಗಳ ಹಲವೆಡೆ ಭಾರಿಯಿಂದ ಅತಿ ಭಾರಿ ಮಳೆ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಈ ಜಿಲ್ಲೆಗಳಿಗೆ ಅಕ್ಟೋಬರ್ 19ರವರೆಗೆ ಯೆಲ್ಲೋ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರಿನಲ್ಲಿ ಅ.19ರವರೆಗೆ ಸಾಧಾರಣದಿಂದ ಭಾರಿ ಮಳೆ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಜ್ಞ, ಪ್ರಾದೇಶಿಕ ನಿರ್ದೇಶಕ ಸಿ.ಎಸ್.ಪಾಟೀಲ್ ತಿಳಿಸಿದ್ದಾರೆ.

ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್.ಪಾಟೀಲ್ (ETV Bharat)

ಇಂದು ದಕ್ಷಿಣ ಒಳ ಕರ್ನಾಟಕದ ಚಿಕ್ಕಮಗಳೂರು, ಹಾಸನ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಿಂದ ಅತಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆ, ದಕ್ಷಿಣ ಒಳ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಪ್ರತ್ಯೇಕ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆ ಮತ್ತು ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಅ.16ರಂದು ದಕ್ಷಿಣ ಒಳ ಕರ್ನಾಟಕದ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಚದುರಿದಂತೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರಿ ಮಳೆಯಿಂದ ಅತಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

ಕರಾವಳಿ ಕರ್ನಾಟಕದ ಉತ್ತರ ಕನ್ನಡ ಜಿಲ್ಲೆಯ ಮೇಲೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬಳ್ಳಾರಿ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೊಡಗು, ಮೈಸೂರು, ವಿಜಯನಗರ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಧಾರವಾಡ, ಗದಗದಲ್ಲಿ ಭಾರಿ ಮಳೆಯಿಂದ ಅತಿ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳ ಕರ್ನಾಟಕದ ಹಾವೇರಿ ಜಿಲ್ಲೆಗಳು. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಅ.17ರಂದು ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಪ್ರತ್ಯೇಕವಾದ ಭಾರಿ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.

ಉತ್ತರ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗುಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಅ.18 ರಂದು ಕರಾವಳಿ ಕರ್ನಾಟಕದ ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರ್ನಾಟಕದ ಒಳನಾಡಿನ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಇಲಾಖೆ ತಿಳಿಸಿದೆ.

ಅ.19ರಂದು ಉತ್ತರ ಒಳ ಕರ್ನಾಟಕದ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳ ಕರ್ನಾಟಕದ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅ. 20 ರಂದು ಕರ್ನಾಟಕದ ಒಳನಾಡಿನ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಕರಾವಳಿ ಕರ್ನಾಟಕದ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅ. 21 ರಂದು ರಾಜ್ಯದ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ, ಕೆಲವೊಮ್ಮೆ ಸಾಧಾರಣ ಮಳೆಯಾಗುವ ಸಾಧ್ಯತೆ ಹೆಚ್ಚು. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 25 ° C ಮತ್ತು 20 ° C ಆಗಿರಬಹುದು. ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ, ಕೆಲವೊಮ್ಮೆ ಸಾಧಾರಣ ಮಳೆಯಾಗುವ ಸಾಧ್ಯತೆ ತುಂಬಾ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 25 ° C ಮತ್ತು 20 ° C ಆಗಿರಬಹುದು ಎಂದು ಹವಾಮಾನ ಕೇಂದ್ರದ ವಿಜ್ಞಾನಿ ಡಾ.ಎನ್.ಪುವಿಯರಸನ್ ತಿಳಿಸಿದ್ದಾರೆ.

ಇದನ್ನೂ ಓದಿ:ಹವಾಮಾನ ಇಲಾಖೆಯ ಈ ಎಚ್ಚರಿಕೆಗಳ ಬಗ್ಗೆ ನಿಮಗೆ ತಿಳಿದಿದೆಯೇ?: ಏನಿವು ರೆಡ್​​​​​, ಯೆಲೋ, ಆರೇಂಜ್​​ ALERTಗಳು?

ABOUT THE AUTHOR

...view details