ಕರ್ನಾಟಕ

karnataka

ETV Bharat / state

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಉತ್ತರ ಕನ್ನಡಕ್ಕೆ ರೆಡ್, ಇತರ 6 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್​ - Karnataka Rain Forecast

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಆಗಿರುವ ಹಿನ್ನೆಲೆಯಲ್ಲಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

rain
ಮಳೆ (IANS)

By ETV Bharat Karnataka Team

Published : Sep 23, 2024, 9:55 PM IST

ಬೆಂಗಳೂರು:ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ವಿವಿಧೆಡೆ ಸುರಿಯುತ್ತಿರುವ ಮಳೆ ಇನ್ನಷ್ಟು ಬಿರುಸುಗೊಂಡಿದೆ. ಈ ಹಿನ್ನೆಲೆಯಲ್ಲಿ ನಾಳೆ ರಾಜ್ಯದ 6 ಜಿಲ್ಲೆಗಳಿಗೆ ಆರೆಂಜ್​ ಅಲರ್ಟ್ ಮತ್ತು ಉತ್ತರ ಕನ್ನಡ ಜಿಲ್ಲೆಗೆ ರೆಡ್​ ಅಲರ್ಟ್​ ಘೋಷಿಸಲಾಗಿದೆ.

ಸೆಪ್ಟೆಂಬರ್ 24ರಂದು ಉತ್ತರ ಕನ್ನಡ ಜಿಲ್ಲೆಯಲ್ಲಿ ಅತಿ ಹೆಚ್ಚು ಮಳೆ ಬೀಳುವ ಸಾಧ್ಯತೆ ಇರುವುದರಿಂದ ರೆಡ್​ ಅಲರ್ಟ್​ ನೀಡಲಾಗಿದೆ. ಇನ್ನು ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಬೀದರ್​, ಕಲಬುರಗಿ, ಯಾದಗಿರಿಯಲ್ಲಿ ಕೂಡ ಭಾರಿ ಮಳೆ ಸುರಿಯುವ ಸಂಭವ ಇರುವುದರಿಂದ ಆರೆಂಜ್​ ಅಲರ್ಟ್​ ಕೊಡಲಾಗಿದೆ. ವಿಜಯಪುರ, ರಾಯಚೂರು, ಗದಗ, ಧಾರವಾಡ, ಹಾವೇರಿ, ಬಳ್ಳಾರಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರಿನಲ್ಲಿ ಯೆಲ್ಲೋ ಅಲರ್ಟ್​ ಇರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಹಾಸನ, ಮೈಸೂರು, ಮಂಡ್ಯ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಚಾಮರಾಜನಗರದಲ್ಲಿ ಮುಂದಿನ 2 ದಿನ ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ. ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆದಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನೂ ಓದಿ:ಬರದ ನಾಡು ಜಗಳೂರು ಕೆರೆಗೆ ಹರಿದ ತುಂಗಭದ್ರಾ ‌ನದಿ ನೀರು; ಕುಣಿದು ಕುಪ್ಪಳಿಸಿದ ಜನ - Jagalur lake filled

ABOUT THE AUTHOR

...view details