ಕರ್ನಾಟಕ

karnataka

ETV Bharat / state

ಬೆಳಗಾವಿಯಲ್ಲಿ ಕಾಲೇಜು ಬಸ್​ಗೆ ಟಿಪ್ಪರ್ ಲಾರಿ ಡಿಕ್ಕಿ: 40ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯ - Belagavi Road Accident - BELAGAVI ROAD ACCIDENT

ಟಿಪ್ಪರ್ ಹಾಗೂ ಕಾಲೇಜು ಬಸ್ ಡಿಕ್ಕಿಯಾಗಿ ಪ್ರವಾಸಕ್ಕೆ ಬಂದಿದ್ದ ಸುಮಾರು 40ಕ್ಕೂ ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.

ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಗಳಿಗೆ ಗಾಯ
ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿಗಳಿಗೆ ಗಾಯ (ETV Bharat)

By ETV Bharat Karnataka Team

Published : Jun 14, 2024, 9:05 PM IST

ಬೆಳಗಾವಿ: ಟಿಪ್ಪರ್ ಹಾಗೂ ಕಾಲೇಜು ಬಸ್ ನಡುವೆ ಅಪಘಾತ ಸಂಭವಿಸಿ 40ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಾಯಗೊಂಡಿರುವ ಘಟನೆ ಬೆಳಗಾವಿ ತಾಲೂಕಿನ ಭೂತರಾಮನಹಟ್ಟಿ ಬಳಿ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ನಡೆದಿದೆ.

ಮಹಾರಾಷ್ಟ್ರದ ಕೊಲ್ಹಾಪುರದಿಂದ ಪ್ರವಾಸಕ್ಕೆಂದು ಬಂದಿದ್ದ ವಿದ್ಯಾರ್ಥಿಗಳ ಕಾಲೇಜು ಬಸ್ ಅಪಘಾತಕ್ಕೀಡಾಗಿದೆ. ರಾಣಿ ಚನ್ನಮ್ಮ ಮೃಗಾಲಯ ವೀಕ್ಷಿಸಲು ಪ್ರವಾಸಕ್ಕೆಂದು ಈ ವಿದ್ಯಾರ್ಥಿಗಳು ಆಗಮಿಸಿದ್ದರು.

ಮೃಗಾಲಯ ನೋಡಿ ವಾಪಸಾಗುವ ವೇಳೆ ಯುಟರ್ನ್ ತೆಗೆದುಕೊಳ್ಳುವಾಗ ಬಸ್​ಗೆ ಟಿಪ್ಪರ್ ವಾಹನ ಡಿಕ್ಕಿ ಹೊಡೆದಿದೆ. ಗಾಯಾಳು ವಿದ್ಯಾರ್ಥಿಗಳನ್ನು ಬೆಳಗಾವಿ ‌ಬೀಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ. ಕಾಕತಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಇದನ್ನೂ ಓದಿ:ಬೆಂಗಳೂರು - ಮೈಸೂರು ಎಕ್ಸ್​ಪ್ರೇಸ್ ವೇನಲ್ಲಿ ಅಪಘಾತದ ಪ್ರಮಾಣ ಇಳಿಕೆ: ಡೆತ್ ಫ್ರೀ ಝೋನ್ ಆಗಿಸಲು ಕಟ್ಟುನಿಟ್ಟಿನ ಕ್ರಮ - Decline in accidents

ABOUT THE AUTHOR

...view details