ಕರ್ನಾಟಕ

karnataka

ETV Bharat / state

ನಾಳೆಯಿಂದ ಲಾಲ್‌ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ: ಈ ರಸ್ತೆಗಳಲ್ಲಿ ವಾಹನ ನಿಲುಗಡೆ ನಿಷೇಧ - Lalbagh Flower Show - LALBAGH FLOWER SHOW

ಸ್ವಾತಂತ್ರ್ಯ ದಿನಾಚರಣೆಯ ಹಿನ್ನೆಲೆಯಲ್ಲಿ ನಾಳೆಯಿಂದ 12 ದಿನಗಳವರೆಗೆ ಬೆಂಗಳೂರಿನ ಲಾಲ್‌ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ.

lalbagh
ಲಾಲ್‌ಬಾಗ್​ (ETV Bharat)

By ETV Bharat Karnataka Team

Published : Aug 7, 2024, 7:39 PM IST

ಬೆಂಗಳೂರು:ಸ್ವಾತಂತ್ರ್ಯ ದಿನಾಚರಣೆಗೆ ಪ್ರತಿವರ್ಷದಂತೆ ಈ ಬಾರಿಯೂ ಲಾಲ್‌ಬಾಗ್​ನಲ್ಲಿ ಫಲಪುಷ್ಪ ಪ್ರದರ್ಶನ ನಡೆಯಲಿದೆ. ನಾಳೆಯಿಂದ 12 ದಿನಗಳ ಕಾಲ ಪ್ರದರ್ಶನ ಆಯೋಜಿಸಲಾಗಿದೆ. ಈ ವೇಳೆ ಸಂಚಾರ ದಟ್ಟಣೆ ಉಂಟಾಗುವುದರಿಂದ ಲಾಲ್​ಬಾಗ್ ಸುತ್ತಮುತ್ತ ವಾಹನ ನಿಲುಗಡೆ ನಿಷೇಧಿಸಲಾಗಿದೆ.

ಆಗಸ್ಟ್ 8ರಿಂದ 19ರ ವರೆಗೆ ಪ್ರದರ್ಶನ ನಡೆಯಲಿದೆ. ಗಣ್ಯ ವ್ಯಕ್ತಿಗಳು, ಪ್ರವಾಸಿಗರು ಹಾಗೂ ಸಾರ್ವಜನಿಕರು ಒಳಗೊಂಡಂತೆ ಲಕ್ಷಾಂತರ ಜನ ಆಗಮಿಸಲಿದ್ದಾರೆ.

ಇಲ್ಲೆಲ್ಲಾ ವಾಹನ ನಿಲುಗಡೆ ನಿಷೇಧ: ಡಾ.ಮರಿಗೌಡ ರಸ್ತೆ, ಲಾಲ್ ಬಾಗ್ ಮುಖ್ಯದ್ವಾರದಿಂದ ನಿಮ್ಹಾನ್ಸ್ ವರೆಗಿನ ರಸ್ತೆಯ ಎರಡು ಬದಿಗಳಲ್ಲಿ ಕೆ.ಹೆಚ್.ರಸ್ತೆ ಹಾಗೂ ಕೆ.ಹೆಚ್.ವೃತ್ತದಿಂದ ಶಾಂತಿನಗರ ಜಂಕ್ಷನ್​ವರೆಗಿನ ಎರಡು ಬದಿಗಳಲ್ಲಿ ಲಾಲ್‌ಬಾಗ್ ರಸ್ತೆ, ಸುಬ್ಬಯ್ಯ ವೃತ್ತದಿಂದ ಲಾಲ್​ಬಾಗ್​ನ ಮುಖ್ಯದ್ವಾರದವರೆಗೆ ಸಿದ್ದಯ್ಯ ರಸ್ತೆ, ಊರ್ವಶಿ ಥಿಯೇಟರ್ ಜಂಕ್ಷನ್​ನಿಂದ ವಿಲ್ಸನ್ ಗಾರ್ಡನ್ 12ನೇ ಕ್ರಾಸ್​ವರೆಗೆ, ಬಿಎಂಟಿಸಿ ಬಸ್ ನಿಲ್ದಾಣದ ಜಂಕ್ಷನ್​ನಿಂದ ರಸ್ತೆಯ ಎರಡು ಬದಿಗಳಲ್ಲಿ, ಕೃಂಬಿಗಲ್ ರಸ್ತೆ, ಲಾಲ್ ಬಾಗ್ ವೆಸ್ಟ್ ಗೇಟ್​ನಿಂದ ಟೀಚರ್ಸ್ ಕಾಲೇಜುವರೆಗೆ, ಆರ್.ವಿ.ಟೀಚರ್ಸ್ ಕಾಲೇಜಿನಿಂದ ಅಶೋಕ ಪಿಲ್ಲರ್​ವರೆಗೆ, ಅಶೋಕ ಪಿಲ್ಲರ್​ನಿಂದ ಸಿದ್ದಾಪುರ ಜಂಕ್ಷನ್​ವರೆಗೆ ವಾಹನ ನಿಲುಗಡೆಗೆ ನಿಷೇಧ.

ಇಲ್ಲಿ ವಾಹನ ನಿಲುಗಡೆಗೆ ಅವಕಾಶ:ಡಾ.ಮರಿಗೌಡ ರಸ್ತೆ, ಅಲ್ ಅಮೀನ್ ಕಾಲೇಜು ಆವರಣ, ಕೆ.ಹೆಚ್.ರಸ್ತೆ, ಶಾಂತಿನಗರ, ಬಿಎಂಟಿಸಿ ಬಸ್ ನಿಲ್ದಾಣದ ಮೇಲೆ ನಾಲ್ಕು ಚಕ್ರದ ವಾಹನ ನಿಲುಗಡೆ, ಡಾ.ಮರೀಗೌಡ ರಸ್ತೆ-ಹಾಪ್ ಕಾಮ್ಸ್ ಹಾಗೂ ಜೆ.ಸಿ.ರಸ್ತೆ, ಕಾರ್ಪೋರೇಷನ್ ಪಾರ್ಕಿಂಗ್ ಸ್ಥಳಗಳಲ್ಲಿ ದ್ವಿಚಕ್ರ ಹಾಗೂ ನಾಲ್ಕು ಚಕ್ರದ ವಾಹನಗಳ ಪಾರ್ಕಿಂಗ್ ಮಾಡಬಹುದು.

ಇದನ್ನೂ ಓದಿ:ಆಗಸ್ಟ್ 8ರಿಂದ ಲಾಲ್‌ಬಾಗ್‌ನಲ್ಲಿ ಅಂಬೇಡ್ಕರ್‌ ಬದುಕಿನ ಥೀಮ್‌ನಡಿ ಫಲಪುಷ್ಪ ಪ್ರದರ್ಶನ - Lalbagh Flower Show

ABOUT THE AUTHOR

...view details