ಕರ್ನಾಟಕ

karnataka

ETV Bharat / state

ಪೆನ್​​​​ಡ್ರೈವ್ ಪ್ರಕರಣದಲ್ಲಿ ಘಟಾನುಘಟಿಗಳ ಹೆಸರಿರುವ ಕಾರಣ ಸಿಬಿಐ ತನಿಖೆಗೆ ವಹಿಸಬೇಕು: ಬಿ ವೈ ವಿಜಯೇಂದ್ರ - Prajwal Revanna video case - PRAJWAL REVANNA VIDEO CASE

ಎಸ್‍ಐಟಿಯಿಂದ ಪಾರದರ್ಶಕ ತನಿಖೆ ಮಾಡಲು ಸಾಧ್ಯವಿಲ್ಲ. ಪೆನ್‌ಡ್ರೈವ್ ಘಟನೆ ಅಕ್ಷಮ್ಯ ಅಪರಾಧ. ಪೆನ್‌ಡ್ರೈವ್ ಹಾದಿ ಬೀದೀಲಿ ಸಿಗುವಂತೆ ಯಾರು ಮಾಡಿದಾರೋ ಅವರಿಗೆ ಶಿಕ್ಷೆ ಆಗಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ತಿಳಿಸಿದರು.

B Y Vijayendra spoke to the media.
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಮಾಧ್ಯಮದವರೊಂದಿಗೆ ಮಾತನಾಡಿದರು. (ETV Bharat)

By ETV Bharat Karnataka Team

Published : May 18, 2024, 6:45 PM IST

Updated : May 18, 2024, 11:05 PM IST

ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ (ETV Bharat)

ಬೆಂಗಳೂರು:ಹಾಸನದ ಪೆನ್​​​​ಡ್ರೈವ್ ಪ್ರಕರಣವನ್ನು ಸರಕಾರ ಗಂಭೀರವಾಗಿ ಪರಿಗಣಿಸಿ ಸಿಬಿಐ ತನಿಖೆಗೆ ಕೊಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಒತ್ತಾಯಿಸಿದರು. ಮಲ್ಲೇಶ್ವರಂ ಬಿಜೆಪಿ ಕಚೇರಿಯಲ್ಲಿ ಮಾತನಾಡಿದ ಅವರು, ನಿತ್ಯ ಹೊಸ ಹೊಸ ವಿಚಾರಗಳು ಬೆಳಕಿಗೆ ಬರುತ್ತಿವೆ. ತಡ ಮಾಡದೇ ಈ ಪೆನ್ ಡ್ರೈವ್, ಪ್ರಜ್ವಲ್ ರೇವಣ್ಣ ಪ್ರಕರಣವನ್ನು ಸಿಬಿಐ ತನಿಖೆಗೆ ಕೊಡಬೇಕು. ಸರ್ಕಾರ ಯಾಕೆ ಹಿಂದೆ ಮುಂದೆ ನೋಡ್ತಿದೆ?. ಸರ್ಕಾರದ ಘಟಾನುಘಟಿಗಳ ಹೆಸರು ಕೇಳಿ ಬರ್ತಿದೆ. ಸರ್ಕಾರ ರಾಜಕೀಯ ಮಾಡದೇ ಸಿಬಿಐಗೆ ಕೊಡಲಿ ಎಂದು ಆಗ್ರಹಿಸಿದರು.

ಇದರಲ್ಲಿ ಸರಕಾರದ ಘಟಾನುಘಟಿಗಳ ಹೆಸರುಗಳು ಕೇಳಿ ಬರುತ್ತಿವೆ. ಎಸ್‍ಐಟಿಯಿಂದ ಪಾರದರ್ಶಕ ತನಿಖೆ ಮಾಡಲು ಸಾಧ್ಯವಿಲ್ಲ. ಹೆಣ್ಣು ಮಕ್ಕಳಿಗೆ ನ್ಯಾಯ ಸಿಗಬೇಕು. ಪೆನ್‌ಡ್ರೈವ್ ಘಟನೆ ಅಕ್ಷಮ್ಯ ಅಪರಾಧ. ಪೆನ್‌ಡ್ರೈವ್ ಹಾದಿ ಬೀದೀಲಿ ಸಿಗುವಂತೆ ಯಾರು ಮಾಡಿದಾರೋ ಅವರಿಗೂ ಕಠಿಣ ಶಿಕ್ಷೆ ಆಗಬೇಕು. ನಾವು ಯಾರನ್ನೂ ರಕ್ಷಣೆ ಮಾಡ್ತಿಲ್ಲ. ದೇವರಾಜೇಗೌಡ ಆರೋಪ ಮಾಡ್ತಿದಾರೆ. ಹೊಸ ಹೊಸ ವಿಚಾರ ಬೆಳಕಿಗೆ ಬರ್ತಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದಾಗಿನಿಂದ ಕಾನೂನು- ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಎಲ್ಲಿ ನೋಡಿದರೆ ಅಲ್ಲಿ ಕೊಲೆ, ಸುಲಿಗೆಗಳು ನಡೆಯುತ್ತಿವೆ. ಅತ್ಯಾಚಾರ ಪ್ರಕರಣ, ಲವ್ ಜಿಹಾದ್ ಪ್ರಕರಣಗಳು ಜಾಸ್ತಿ ಆಗುತ್ತಿವೆ. ಮಹಿಳೆಯರಿಗೆ ಸುರಕ್ಷತೆ ಪ್ರಶ್ನೆ ಕಾಡುತ್ತಿದೆ ಎಂದು ವಿವರಿಸಿದರು. ಈ ಅಂಶಗಳನ್ನು ಮುಂದಿಟ್ಟು ಇವತ್ತು ಮಹಿಳಾ ಮೋರ್ಚಾ ವತಿಯಿಂದ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗಿದೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದೇವೆ. ಅಪರಾಧ ಪ್ರಮಾಣ ಹೆಚ್ಚಳದಿಂದ ರಾಜ್ಯಕ್ಕೆ ಕೆಟ್ಟ ಹೆಸರು ಬರುವಂತಾಗಿದೆ ಎಂದು ಕಳವಳ ವ್ಯಕ್ತಪಡಿಸಿದರು.

ಪರಿಷತ್ ಚುನಾವಣೆ ಬಂಡಾಯ ಪರಿಹರಿಸುತ್ತೇವೆ: ವಿಧಾನ ಪರಿಷತ್ತಿನ ವಿವಿಧ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ವಿಚಾರದಲ್ಲಿ ಚಿಕ್ಕಪುಟ್ಟ ಸಮಸ್ಯೆ ಇದ್ದು ಶೀಘ್ರ ಪರಿಹಾರ ಆಗಲಿವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸ ವ್ಯಕ್ತಪಡಿಸಿದರು.

ರಾಜ್ಯದ ವಿಧಾನಪರಿಷತ್ತಿನ ಪದವೀಧರ- ಶಿಕ್ಷಕರ ಕ್ಷೇತ್ರದ 6 ಸ್ಥಾನಗಳಿಗೆ ಚುನಾವಣೆ ನಡೆಯುತ್ತಿದೆ. ಬಿಜೆಪಿ 4 ಸ್ಥಾನಗಳಲ್ಲಿ ಸ್ಪರ್ಧಿಸುತ್ತಿದ್ದು, ಎರಡು ಸ್ಥಾನಗಳನ್ನು ಜೆಡಿಎಸ್ ಪಕ್ಷಕ್ಕೆ ಬಿಟ್ಟು ಕೊಟ್ಟಿದ್ದೇವೆ. ನಿನ್ನೆ 6 ಕ್ಷೇತ್ರಗಳಿಗೆ ಬಿಜೆಪಿಯಿಂದ ಉಸ್ತುವಾರಿಗಳನ್ನು ನೇಮಿಸಿದ್ದೇವೆ. ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಅಮರನಾಥ ಪಾಟೀಲ್ ಅವರು ಮೊನ್ನೆ ನಾಮಪತ್ರ ಸಲ್ಲಿಸಿದ್ದಾರೆ.

ನಮ್ಮ ಪಕ್ಷದ ಹಿರಿಯ ಮುಖಂಡ ಸುರೇಶ್ ಸಜ್ಜನ್ ಅವರು ಕಳೆದೆರಡು ವರ್ಷಗಳಿಂದ ನಿರಂತರವಾಗಿ ಈ ಕ್ಷೇತ್ರದಲ್ಲಿ ಪ್ರವಾಸ ಮಾಡಿ, ಸಂಘಟನೆ ಮಾಡಿ ಆಕಾಂಕ್ಷಿಯಾಗಿದ್ದು, ನಾಮಪತ್ರ ಸಲ್ಲಿಸಿದ್ದರು. ಸುರೇಶ್ ಸಜ್ಜನ್ ಅವರು ಪಕ್ಷದ ಹಿರಿಯ ನಾಯಕ ಮಾನ್ಯ ಯಡಿಯೂರಪ್ಪರನ್ನು ಭೇಟಿ ಮಾಡಿ, ಚುನಾವಣಾ ಅಖಾಡದಿಂದ ಹಿಂದೆ ಸರಿದು ಬಿಜೆಪಿ ಬೆಂಬಲಿಸಲು ಮುಂದಾಗಿರುವುದು ಸಂತಸದ ವಿಚಾರ ಎಂದು ತಿಳಿಸಿದರು.

ಇದರ ಪರಿಣಾಮವಾಗಿ ಈಶಾನ್ಯ ಪದವೀಧರ ಕ್ಷೇತ್ರದಲ್ಲಿ ನಮ್ಮ ಅಭ್ಯರ್ಥಿ ಗೆಲ್ಲಲು ಅನುಕೂಲವಾಗಿದೆ. ಅದೇ ರೀತಿ ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಲಿಂಗರಾಜ್ ಅವರ ಹೆಸರನ್ನು ಘೋಷಿಸಲಾಗಿತ್ತು. ನಂತರ ಜೆಡಿಎಸ್ ಪಕ್ಷಕ್ಕೆ ಕ್ಷೇತ್ರ ಬಿಟ್ಟು ಕೊಡಲಾಗಿತ್ತು. ನಾಮಪತ್ರ ಸಲ್ಲಿಸಿದ್ದ ಲಿಂಗರಾಜ್ ಅವರ ಮನವೊಲಿಕೆ ಮಾಡಿ ನಾಮಪತ್ರ ಹಿಂದಕ್ಕೆ ಪಡೆಯುವುದಾಗಿ ಅವರೇ ಬಹಿರಂಗವಾಗಿ ಹೇಳಿದ್ದಾರೆ. ಎರಡೂ ಕ್ಷೇತ್ರದಲ್ಲೂ ಕೂಡ ಸಮಸ್ಯೆಗಳು ಇತ್ಯರ್ಥವಾಗಿವೆ. ಬೇರೆ ಕ್ಷೇತ್ರಗಳ ಸಮಸ್ಯೆ ಬಗೆಹರಿಸುವ ಕೆಲಸವನ್ನು ಇವತ್ತು ಮತ್ತು ನಾಳೆ ಮಾಡಲಿದ್ದು, ಅವು ಪರಿಹಾರ ಕಾಣಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಇದನ್ನೂಓದಿ:ಗೂಬೆ ಕೂರಿಸೋದು ಬಿಟ್ಟು ಜಡ್ಜ್ ಮುಂದೆ ಸಾಕ್ಷಿ ಕೊಡಲಿ: ದೇವರಾಜೇಗೌಡ ಆರೋಪಕ್ಕೆ ಪ್ರಿಯಾಂಕ್ ಖರ್ಗೆ ಟಾಂಗ್ - PRIYANKA KHARGE ATTACK ON BJP JDS

Last Updated : May 18, 2024, 11:05 PM IST

ABOUT THE AUTHOR

...view details