ಕರ್ನಾಟಕ

karnataka

ETV Bharat / state

ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಜನ ಸಂಕಲ್ಪ ಮಾಡಿದ್ದಾರೆ: ವಿಜಯೇಂದ್ರ - Lok Sabha Election - LOK SABHA ELECTION

ಕಲ್ಯಾಣ ಕರ್ನಾಟಕದಲ್ಲಿ ಜನಸ್ಪಂದನೆ ಸಿಗುತ್ತಿದ್ದು, ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಜನ ಸಂಕಲ್ಪ ಮಾಡಿದ್ದಾರೆ ಎಂದು ಬಿಜೆಪಿ ನಾಯಕ ವಿಜಯೇಂದ್ರ ಹೇಳಿದರು.

DETERMINED  MODI PM AGAIN  BJP LEADER VIJAYENDRA  DHARWAD
ವಿಜಯೇಂದ್ರ (Etv Bharat)

By ETV Bharat Karnataka Team

Published : May 4, 2024, 2:22 PM IST

ಹುಬ್ಬಳ್ಳಿ:ರಾಜ್ಯದಲ್ಲಿ ಎರಡನೇ ಹಂತದ ಮತದಾನ ಏಳನೇ ತಾರೀಖು ನಡೆಯಲಿದೆ.‌ ಕಳೆದ ಒಂದು ವಾರದಿಂದ ಕಲ್ಯಾಣ ಕರ್ನಾಟಕದಲ್ಲಿ ಪ್ರವಾಸ ಮಾಡಿದ್ದೇನೆ.‌ ನಮ್ಮ ನಿರೀಕ್ಷೆಗೆ ಮೀರಿದ ಜನಸ್ಪಂದನೆ ದೊರೆತಿದೆ. ಮೋದಿ ಮತ್ತೊಮ್ಮೆ ಪ್ರಧಾನಿಯಾಗಲು ಜನ ಸಂಕಲ್ಪ ಮಾಡಿದ್ದಾರೆ. ಬಿಜೆಪಿ ನೇತೃತ್ವದ ಎನ್​ಡಿಎ ದಿಂದ ದೇಶಕ್ಕೆ ಒಳಿತಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಹೇಳಿದರು.

ನಗರದಲ್ಲಿಂದು ಸುದ್ಧಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಮ್ಮ ಕಾರ್ಯಕರ್ತರು, ಎಲ್ಲ ಕ್ಷೇತ್ರಗಳಲ್ಲಿ ಉತ್ಸಾಹದಿಂದ ದುಡಿಯುತ್ತಿದ್ದಾರೆ. ಎರಡನೇ ಹಂತದಲ್ಲಿಯೂ ಎಲ್ಲ ಕ್ಷೇತ್ರದಲ್ಲಿ ಬಿಜೆಪಿ ಗೆದ್ದೆ ಗೆಲ್ಲುತ್ತದೆ. ಆದರೆ ಕಾಂಗ್ರೆಸ್ ಸರ್ಕಾರ ಒಂದು ವಾರದ ವಿದ್ಯಮಾನದಲ್ಲಿ ಸಿಎಂ, ಡಿಸಿಎಂ ಗ್ಯಾರಂಟಿ ಬಗ್ಗೆ ಮರೆತಿದ್ದಾರೆ. ಪೆನ್​ಡ್ರೈವ್ ಹಿಂದೆಯೇ ಬಿದ್ದಿದ್ದಾರೆ ಎಂದರು.

ಹಾಸನ ಪೆನ್​ಡ್ರೈವ್​ ಪ್ರಕರಣವನ್ನು ನಾವು ಯಾವತ್ತೂ ಬೆಂಬಲಿಸುವುದಿಲ್ಲ. ಕಾಂಗ್ರೆಸ್​​ಗೆ ತಮ್ಮ ಮೇಲೇಯೇ ತಮಗೆ ನಂಬಿಕೆ ಹೊರಟುಹೋಗಿದೆ. ದಿನದಿಂದ ದಿನಕ್ಕೆ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ.‌ ಆತ್ಮಹತ್ಯೆ, ಲವ್ ಜಿಹಾದ್ ಪ್ರಕರಣ ಹೆಚ್ಚುತ್ತಿವೆ. ದಲಿತ ಹೆಣ್ಣುಮಗಳ ಮೇಲೆ ಸದ್ದಾಂ ಹುಸೇನ ಎಂಬುವವನು ನೀಚ ಕೃತ್ಯ ಎಸಗಿದ್ದಾನೆ. ಹೀಗಿದ್ದರೂ ರಾಜ್ಯ ಸರ್ಕಾರ ಕಣ್ಣು ಮುಚ್ಚಿಕುಳಿತಿದೆ. ವಿಧಾನಸೌಧದಲ್ಲಿ ಪಾಕ್ ಪರ ಘೋಷಣೆ ಕೂಗಿದಾಗಲೂ ಮೀನಮೇಷ ಎಣಿಸುತ್ತಿದೆ. ಕೊಲೆಗಡುಕರ ವಿರುದ್ಧ ಕ್ರಮಕ್ಕೆ ಹಿಂದೇಟು ಹಾಕುತ್ತಿದ್ದಾರೆ. ಕಾಂಗ್ರೆಸ್ ಅಲ್ಪಸಂಖ್ಯಾತರ ತುಷ್ಟೀಕರಣದ ರಾಜಕಾರಣ ಮಾಡುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ನಿರಾತಂಕವಾಗಿ ಲವ್ ಜಿಹಾದ್ ನಡೆಯುತ್ತಿವೆ. ಕೊಲೆಗಡಕರಿಗೆ ರಾಜ್ಯ ಸರ್ಕಾರವೇ ರಕ್ಷಣೆ ನೀಡುತ್ತಿದೆ. ತುಷ್ಟಿಕರಣದ ರಾಜಕಾರಣಕ್ಕೆ ಜನರೇ ತಕ್ಕ ಉತ್ತರ ಕೊಡ್ತಾರೆ. ಕಾಂಗ್ರೆಸ್ ಹಿಂದೂ ವಿರೋಧಿ ಸರ್ಕಾರ ಎಂದು ಜನರಿಗೆ ಗೊತ್ತಾಗಿದೆ ಎಂದರು. ಅಮಿತ್ ಶಾ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಪ್ರಜ್ವಲ್ ಪ್ರಕರಣದಂತಹ ಪ್ರಕರಣದಲ್ಲಿ ಬಿಜೆಪಿ ಯಾವುದೇ ಬೆಂಬಲ ನೀಡುವುದಿಲ್ಲ.‌ ಬಿಜೆಪಿ ನಾಯಕರಿಗೆ ಯಾವುದೇ ಪತ್ರ ಬಂದಿಲ್ಲ.‌ ಯಾವ ಪುಣ್ಯಾತ್ಮ‌ ಹೇಳಿದ್ದಾನೋ ಅವರಿಗೆ ಕೇಳಿ ಎಂದರು. ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ನನಗೆ ಗೊತ್ತಿಲ್ಲ. ರಾಜ್ಯಾಧ್ಯಕ್ಷರಿಗೆ ಯಾವುದೇ ಪತ್ರ ಬಂದಿಲ್ಲ ಎಂದು ಬಿ.ವೈ.ವಿಜಯೇಂದ್ರ ಹೇಳಿದರು.

ನೇಹಾ ಪ್ರಕರಣದ ಬಗ್ಗೆ ಸಿಟಿ ರವಿ ಪ್ರತಿಕ್ರಿಯೆ: ರಾಜ್ಯದಲ್ಲಿ ದಿನದಿಂದ‌ ದಿನಕ್ಕೆ ಲವ್ ಜಿಹಾದ್ ಪ್ರಕರಣಗಳು ಹೆಚ್ಚಾಗುತ್ತಿವೆ. ಈ ಎಲ್ಲ ಲವ್ ಜಿಹಾದ್​ಗಳ ಬಗ್ಗೆ ತನಿಖೆ ಮಾಡಲು ವಿಶೇಷ ಎಸ್​ಐಟಿ ರಚನೆ ಮಾಡಬೇಕು ಎಂದು ಮಾಜಿ ಸಚಿವ ಸಿಟಿ ರವಿ ಒತ್ತಾಯ ಮಾಡಿದರು. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲವ್ ಜಿಹಾದ್ ಆರೋಪಿಯ ಕಾಲಿಗೆ ಪೊಲೀಸರು ಗುಂಡು ಹಾರಿಸಿದ್ದಾರೆ. ಒಂದೇ ವಾರದಲ್ಲಿ ಐದು ಪ್ರಕರಣಗಳಾಗಿವೆ. ಹಿಂದೂ ಯುವತಿಯನ್ನು ಡಿ.ಕೆ.ಶಿವಕುಮಾರ್ ಬ್ರದರ್ ಪರಿವಾರದವರು ಕಿಡ್ನ್ಯಾಪ್ ಮಾಡಿದ್ದಾರೆ ಎಂದು ಗಂಭೀರವಾಗಿ ಆರೋಪಿಸಿದರು.

ಆ ಸಮುದಾಯದ ಹುಡಗಿಯರು ಏಕೆ ಹಿಂದೂ ಯುವಕರನ್ನು ಪ್ರೀತಿಸುತ್ತಿಲ್ಲ. ಕೇವಲ ಹಿಂದೂ ಹುಡುಗಿಯರನ್ನು ಆ ಸಮುದಾಯದ ಯುವಕರು ಪ್ರೀತಿಸಿ ಲವ್ ಜಿಹಾದ್ ಮಾಡುತ್ತಿದ್ದಾರೆ. ನಮ್ಮ ಹೆಣ್ಣುಮಕ್ಕಳ ಜೀವನ ಹಾಳು ಮಾಡಿ, ಕುಟುಂಬದ ನೆಮ್ಮದಿ ಕೆಡಿಸುತ್ತಿದ್ದಾರೆ ಎಂದು ಕಿಡಿಕಾರಿದರು. ಪ್ರೀತಿಯ ನೆಪದಲ್ಲಿ ಮೋಸ ಮಾಡುತ್ತಿದ್ದಾರೆ. ಮುಖ್ಯಮಂತ್ರಿಗಳು ಇದನ್ನು ವೈಯಕ್ತಿಕ ಪ್ರಕರಣ ಎಂದು ಪರಿಗಣಿಸಬಾರದು. ಈ ಕುರಿತು ತನಿಖೆ ಮಾಡಬೇಕು ಎಂದು ಆಗ್ರಹಿಸಿದರು.

ಓದಿ:ಎಚ್‌.ಡಿ.ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ಮಧ್ಯಾಹ್ನಕ್ಕೆ ಮುಂದೂಡಿಕೆ - REVANNA ANTICIPATORY BAIL PLEA

ABOUT THE AUTHOR

...view details