ರಾಯಚೂರು:ಟಿಪ್ಪು ಸುಲ್ತಾನ್ ನಾಮಫಲಕಕ್ಕೆ ಅವಮಾನ ಮಾಡಿರುವುದನ್ನು ಖಂಡಿಸಿ ಸಿರವಾರದಲ್ಲಿ ಇಂದು ಯುವಕರು ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು. ಟಿಪ್ಪು ಸುಲ್ತಾನ್ ಸರ್ಕಲ್ನಲ್ಲಿ ಟಿಪ್ಪು ಭಾವಚಿತ್ರ ಹಾಗೂ ನಾಮಫಲಕ ಅಳವಡಿಸಲಾಗಿದೆ. ಈ ನಾಮಫಲಕಕ್ಕೆ ಕಿಡಿಗೇಡಿಗಳು ಅವಮಾನಿಸಿದ್ದಾರೆ. ತಡರಾತ್ರಿ ಈ ಕೃತ್ಯ ಎಸಗಿರುವ ಶಂಕೆ ಇದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಯಚೂರು: ಟಿಪ್ಪು ನಾಮಫಲಕಕ್ಕೆ ಅವಮಾನ; ರಸ್ತೆ ತಡೆದು ಪ್ರತಿಭಟನೆ - ರಾಯಚೂರು
ಟಿಪ್ಪು ಸುಲ್ತಾನ್ ನಾಮಫಲಕಕ್ಕೆ ಅವಮಾನ ಮಾಡಲಾಗಿದೆ ಎಂದು ರಾಯಚೂರಿನ ಸಿರವಾರದಲ್ಲಿ ಇಂದು ಯುವಕರು ರಸ್ತೆ ತಡೆದು ಪ್ರತಿಭಟಿಸಿದರು.
Etv Bharat
Published : Jan 31, 2024, 12:59 PM IST
|Updated : Jan 31, 2024, 1:10 PM IST
ಸುಮಾರು ಎರಡರಿಂದ ಮೂರು ಗಂಟೆಗಳ ಕಾಲ ಸಿರವಾರ ಮೂಲಕ ಹಾದು ಹೋಗುವ ರಾಯಚೂರು-ಲಿಂಗಸೂಗೂರು ಮುಖ್ಯ ರಾಜ್ಯ ಹೆದ್ದಾರಿ ಬಂದ್ ಮಾಡಿದರು. ಟೈರ್‌ಗೆ ಬೆಂಕಿ ಹಚ್ಚಲಾಯಿತು. ಕೃತ್ಯವೆಸಗಿದ ಆರೋಪಿಗಳನ್ನು ಕೂಡಲೇ ಬಂಧಿಸುವುದಾಗಿ ಪೊಲೀಸರು ಭರವಸೆ ನೀಡಿದ ನಂತರ, ಯುವಕರು ಪ್ರತಿಭಟನೆ ಹಿಂಪಡೆದರು. ರಾಜ್ಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಕೆಲಕಾಲ ಅಡಚಣೆ ಉಂಟಾಯಿತು.
ಇದನ್ನೂ ಓದಿ:ಮೈಸೂರು: ಇಬ್ಬರ ಮೇಲೆ ದಾಳಿ ನಡೆಸಿದ ಹುಲಿ ಕೆಲವೇ ಗಂಟೆಗಳಲ್ಲಿ ಸೆರೆ
Last Updated : Jan 31, 2024, 1:10 PM IST