ಕರ್ನಾಟಕ

karnataka

ETV Bharat / state

ಗಂಗಾವತಿ: ಮಳೆಗೆ ಮನೆ ಮೇಲ್ಛಾವಣಿ ಕುಸಿತ; ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ - House collapse - HOUSE COLLAPSE

ಭಾರಿ ಮಳೆಗೆ ಮನೆ ಮೇಲ್ಛಾವಣಿ ಕುಸಿದಿದ್ದು, ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯೋರ್ವನನ್ನು ಗ್ರಾಮಸ್ಥರು ರಕ್ಷಿಸಿದ್ದಾರೆ.

House collapsed due to rain rescue of person stuck under mud in Gangavathi
ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ (ETV Bharat)

By ETV Bharat Karnataka Team

Published : Oct 5, 2024, 10:22 AM IST

ಗಂಗಾವತಿ:ಕಳೆದ ರಾತ್ರಿ ವ್ಯಾಪಕ ಮಳೆ ಸುರಿದಿದ್ದು, ಮನೆಯ ಮೇಲ್ಛಾವಣಿ ಕುಸಿದು ಅದರ ಅಡಿಯಲ್ಲಿ ಸಿಲುಕಿದ್ದ ವ್ಯಕ್ತಿಯೋರ್ವನನ್ನು ಗ್ರಾಮಸ್ಥರು ಪ್ರಾಣಾಪಾಯದಿಂದ ಪಾರು ಮಾಡಿದ ಘಟನೆ ತಾಲೂಕಿನ ಢಾಣಾಪುರ ಗ್ರಾಮದಲ್ಲಿ ನಡೆದಿದೆ.

ಪ್ರಕಾಶ್ ಪ್ರಾಣಾಪಾಯದಿಂದ ಪಾರಾದ ವ್ಯಕ್ತಿ. ಮಣ್ಣಿನ ಮನೆ ಇದಾಗಿದ್ದರಿಂದ ಅಬ್ಬರದ ಮಳೆಗೆ ಮೇಲ್ಛಾವಣಿ ಏಕಾಏಕಿ ಕುಸಿದು ಬಿದ್ದಿದೆ. ಶನಿವಾರ ಬೆಳಗಿನ ಜಾವ ಈ ಘಟನೆ ನಡೆದಿದೆ.

ಮಣ್ಣಿನಡಿ ಸಿಲುಕಿದ್ದ ವ್ಯಕ್ತಿಯ ರಕ್ಷಣೆ (ETV Bharat)

ವ್ಯಕ್ತಿಯ ಪರದಾಟ ಕಂಡು ತಕ್ಷಣವೇ ಅಕ್ಕಪಕ್ಕದವರು ಬಂದು ರಕ್ಷಿಸಿ, ಗಂಗಾವತಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೇಲ್ಛಾವಣಿ ಕುಸಿದು ಅವರ ಮೇಲೆ ಬಿದ್ದಿದ್ದರಿಂದ ದೇಹದ ಮುಕ್ಕಾಲು ಭಾಗ ಮಣ್ಣಿನಲ್ಲಿ ಹೂತು ಹೋಗಿತ್ತು. ಹರಸಾಹಸದ ಬಳಿಕ ಗ್ರಾಮಸ್ಥರು ಪ್ರಕಾಶ್ ಅವರನ್ನು ಅಪಾಯದಿಂದ ಪಾರು ಮಾಡಿದ್ದಾರೆ.

ಇದನ್ನೂ ಓದಿ:ಗಂಗಾವತಿ: ಬಿರುಗಾಳಿ, ಆಲಿಕಲ್ಲು ಮಳೆಗೆ ಭತ್ತ ನಾಶ; ಮನೆಗಳಿಗೆ ಹಾನಿ - Gangavathi Heavy Rain

ABOUT THE AUTHOR

...view details