ಕರ್ನಾಟಕ

karnataka

ETV Bharat / state

ಬೆಳಗಾವಿ: ಬುದ್ಧಿಮಾಂದ್ಯ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದವ ಅರೆಸ್ಟ್​ - Rape Attempt Case - RAPE ATTEMPT CASE

ಬುದ್ಧಿಮಾಂದ್ಯ ಯುವತಿ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿದ ಘಟನೆ ಬೆಳಗಾವಿ ಜಿಲ್ಲೆಯಲ್ಲಿ ನಡೆದಿದೆ.

belagavi
ಕಾಕತಿ ಪೊಲೀಸ್​ ಠಾಣೆ (ETV Bharat)

By ETV Bharat Karnataka Team

Published : Jul 17, 2024, 10:24 PM IST

ಬೆಳಗಾವಿ: ತಾಲೂಕಿನ ಗ್ರಾಮವೊಂದರ ಬುದ್ಧಿಮಾಂದ್ಯ ಯುವತಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿಯನ್ನು ಕಾಕತಿ ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ. ಯುವತಿ ಪಾಲಕರು ಹೊಲಕ್ಕೆ ಹೋಗಿದ್ದಾಗ, ಮನೆಯಲ್ಲಿ ಯಾರೂ ಇಲ್ಲದ ಸಮಯ ನೋಡಿಕೊಂಡು ಆರೋಪಿ ಕೃತ್ಯಕ್ಕೆ ಯತ್ನಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಮನೆಗೆ ನುಗ್ಗಿದ್ದ ಆರೋಪಿ, ಯುವತಿಯ ಬಟ್ಟೆ ಬಿಚ್ಚಿ ಅತ್ಯಾಚಾರ ಎಸಗಲು ಯತ್ನಿಸಿದ್ದಾನೆ. ಆಗ ಬೆಚ್ಚಿಬಿದ್ದ ಯುವತಿ ಜೋರಾಗಿ ಕೂಗಿಕೊಂಡಿದ್ದಾಳೆ. ಅದನ್ನು ಕೇಳಿಸಿಕೊಂಡ ಯುವತಿಯ ಚಿಕ್ಕಪ್ಪ ಓಡಿ ಬಂದಿದ್ದು, ಆರೋಪಿಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ. ನಂತರ ಆರೋಪಿ ಅಲ್ಲಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದ ಎಂಬುದು ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.

ಇದಾದ ಬಳಿಕ ಯುವತಿಯನ್ನು ಕರೆದುಕೊಂಡು ನೇರವಾಗಿ ಕಾಕತಿ ಠಾಣೆಗೆ ಬಂದ ಚಿಕ್ಕಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು, ವಿಶೇಷ ತಂಡ ರಚಿಸಿ ಕೆಲವೇ ಗಂಟೆಗಳಲ್ಲಿ ಆರೋಪಿ ಬಂಧಿಸಿದ್ದಾರೆ. ಸದ್ಯ ಯುವತಿಯನ್ನು ವೈದ್ಯಕೀಯ ತಪಾಸಣೆಗೆ ಕಳುಹಿಸಲಾಗಿದೆ ಎಂದು ‍ಪೊಲೀಸರು ತಿಳಿಸಿದ್ದಾರೆ.

ಕಾಕತಿ ಪೊಲೀಸ್ ಠಾಣೆಗೆ ದೌಡಾಯಿಸಿದ ಡಿಸಿಪಿ ಪಿ.ವ್ಹಿ.ಸ್ನೇಹಾ, ಡಿಸಿಪಿ ರೋಹನ್​ ಜಗದೀಶ ಘಟನೆ ಕುರಿತು ಮಾಹಿತಿ ಪಡೆದಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆ ಠಾಣೆ ಮುಂದೆ ನೂರಾರು ಸಂಖ್ಯೆಯಲ್ಲಿ ಜನ‌ರು ಜಮಾಯಿಸಿದ್ದರು. ಮುಂಜಾಗ್ರತಾ ಕ್ರಮವಾಗಿ ಆರೋಪಿಯ ಊರಿನಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

ಇದನ್ನೂ ಓದಿ:ಬೆಂಗಳೂರು: 20 ವರ್ಷಗಳ ಬಳಿಕ ಕೊಲೆ ಕೇಸ್​ನಲ್ಲಿ ಬಂಧಿತನಾದ ಚಿತ್ರ ನಿರ್ದೇಶಕ - Film director arrested

ABOUT THE AUTHOR

...view details