ಕರ್ನಾಟಕ

karnataka

ETV Bharat / state

ಕೇರಳದ ಸಿಎಂ ಪುತ್ರಿಯ ಕಂಪನಿ ವಿರುದ್ಧ ತನಿಖೆಗೆ ಆದೇಶಿಸಿದ್ದ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ

ಎಕ್ಸಾಲಜಿಕ್ ಸಲ್ಯೂಷನ್ಸ್ ಕಂಪನಿ ವಿರುದ್ಧ ಗಂಭೀರ ವಂಚನೆ ತನಿಖಾ ವಿಭಾಗದ ತನಿಖಾ ಕ್ರಮ ಪ್ರಶ್ನಿಸಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಕೇರಳ ಸಿಎಂ ಪಿಣರಾಯಿ ವಿಜಯನ್ ಅವರ ಪುತ್ರಿ, ವೀಣಾ ವಿಜಯನ್ ಅವರ ಮಾಲೀಕತ್ವದ ಕಂಪನಿ ಇದಾಗಿದೆ.

By ETV Bharat Karnataka Team

Published : Feb 9, 2024, 2:05 PM IST

ಹೈಕೋರ್ಟ್‌
ಹೈಕೋರ್ಟ್‌

ಬೆಂಗಳೂರು:ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಮಗಳು ವೀಣಾ ಪಿಣರಾಯಿ ವಿಜಯನ್ ನಿರ್ದೇಶಕರಾಗಿರುವ ಎಕ್ಸಾಲಜಿಕ್ ಸಲ್ಯೂಷನ್ಸ್ ಎಂಬ ಐಟಿ ಕಂಪೆನಿಯ ವಿರುದ್ಧ ತನಿಖೆ ನಡೆಸುವಂತೆ 'ಗಂಭೀರ ವಂಚನೆ ತನಿಖಾ ವಿಭಾಗ'ದ ಅಧಿಕಾರಿಗಳಿಗೆ(ಎಸ್‌ಎಫ್‌ಐಒ) ಸೂಚನೆ ನೀಡಿದ್ದ ಕೇಂದ್ರ ಸರ್ಕಾರದ ಕ್ರಮ ಪ್ರಶ್ನಿಸಿ ಕರ್ನಾಟಕ ಹೈಕೋರ್ಟ್​ಗೆ ಅರ್ಜಿ ಸಲ್ಲಿಕೆಯಾಗಿದೆ. ಇನ್ನಷ್ಟೇ ಅರ್ಜಿ ವಿಚಾರಣೆಗೆ ಬರಬೇಕಾಗಿದೆ.

ಕಂಪನಿಯ ವಿರುದ್ಧ ಕೇಂದ್ರ ಕಾರ್ಪೋರೇಟ್ ವ್ಯವಹಾರಗಳ ಸಚಿವಾಲಯ ಕಂಪನಿ ಕಾಯಿದೆಯ ವಿವಿಧ ಸೆಕ್ಷನ್‌ಗಳ ಅಡಿ ತನಿಖೆ ನಡೆಸುವಂತೆ ಜನವರಿ 31 ರಂದು ಕೇಂದ್ರ ಸರ್ಕಾರ ಆದೇಶಿಸಿತ್ತು. ಕೇಂದ್ರ ಸರ್ಕಾರ ಈ ಆದೇಶವು ದೋಷಪೂರಿತವಾಗಿದೆ. ಸೂಕ್ತ ಕಾರಣವಿಲ್ಲದೇ ತನಿಖೆಗೆ ಆದೇಶಿಸಿದ್ದು ನೈಸರ್ಗಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಜತೆಗೆ ಸಂವಿಧಾನದ ಪರಿಚ್ಛೇದ 14 ಮತ್ತು 21ಕ್ಕೆ ವಿರುದ್ಧವಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

ಕೊಚ್ಚಿನ್ ಮಿನರಲ್ಸ್ ರುಟೈಲ್ ಲಿಮಿಟೆಡ್​​ (ಸಿಎಂಆರ್‌ಎಲ್) ಮತ್ತು ಅರ್ಜಿದಾರರ ನಡುವಿನ ವ್ಯವಹಾರಗಳಿಗೆ ಸಂಬಂಧಿಸಿದ 2021ರಲ್ಲಿ ಪರಿಶೀಲಿಸಿದ ಸಂದರ್ಭದಲ್ಲಿ ಕಂಪನಿ ಕಾಯಿದೆಯ ವಿವಿಧ ನಿಬಂಧನೆಗಳ ಅಡಿ ತನಿಖೆ ನಡೆಸಬೇಕು ಎಂದು ಬೆಂಗಳೂರಿನ ರಿಜಿಸ್ಟ್ರಾರ್ ಅವರಿಂದ ಅರ್ಜಿದಾರರಿಗೆ ಪತ್ರ ಬರೆಯಲಾಗಿತ್ತು. ಈ ಸಂಬಂಧ ಪ್ರತಿಕ್ರಿಯಿಸಿದ್ದ ಅರ್ಜಿದಾರರು, ಕಂಪನಿ ರಿಜಿಸ್ಟ್ರಾರ್ ಕೇಳಿದ್ದ ಎಲ್ಲ ಮಾಹಿತಿಗಳನ್ನು ದಾಖಲೆಗಳೊಂದಿಗೆ ಸಲ್ಲಿಸಿದ್ದರು.

ಆದಾಗ್ಯೂ ಕಂಪನಿಗಳ ರಿಜಿಸ್ಟ್ರಾರ್ ಅವರು 2021ರ ಅಕ್ಟೋಬರ್ 1 ರಂದು ಮತ್ತೊಂದು ಪತ್ರ ಬರೆದು, ಈವರೆಗೂ ಸಲ್ಲಿಸಿರುವ ದಾಖಲೆಗಳಲ್ಲಿ ಸರಿಯಾಗಿಲ್ಲ. ಆದ ಕಾರಣ ಮುಂದಿನ 7 ದಿನಗಳಲ್ಲಿ ಎಲ್ಲ ಸರಿಯಾದ ದಾಖಲೆಗಳನ್ನು ಸಲ್ಲಿಸಬೇಕು ಎಂದು ನಿರ್ದೇಶನ ನೀಡಿದ್ದರು. ಜತೆಗೆ, ತಮ್ಮ ವಾದ ಮಂಡಿಸುವುದಕ್ಕೆ ಅವಕಾಶ ಕಲ್ಪಿಸುವಂತೆ ಕೋರಿದ್ದರು. ಜತೆಗೆ, 2022ರ ಜೂನ್ 24ರಂದು ಅರ್ಜಿದಾರರು ತಮ್ಮ ಪ್ರತಿನಿಧಿಗಳೊಂದಿಗೆ ಖುದ್ದು ಹಾಜರಾಗಿ ಅಗತ್ಯವಿರುವ ದಾಖಲೆಗಳೊಂದಿಗೆ ಎಲ್ಲ ವಿವರಣೆ ಮತ್ತು ಸ್ಪಷ್ಟೀಕರಣಗಳನ್ನು ನೀಡಿದ್ದರು. ಆದರೆ, ಅರ್ಜಿದಾರ ಕಂಪನಿಯ ನಿರ್ದೇಶಕರ ತಂದೆಯ ಅಧೀನದಲ್ಲಿರುವ ಕೇರಳ ರಾಜ್ಯ ಕೈಗಾರಿಕಾ ಅಭಿವೃದ್ಧಿ ನಿಗಮ(ಕೆಎಸ್‌ಐಡಿಸಿ)ವು ಕೊಚ್ಚಿನ್ ಮಿನರಲ್ಸ್ ಮತ್ತು ರುಟೈಲ್ ಲಿಮಿಟೆಡ್‌ಯಲ್ಲಿ ಶೇ. 13.4 ರಷ್ಟು ಷೇರುಗಳನ್ನು ಹೊಂದಿದೆ ಎಂದು ಆರೋಪಿಸಿ ರಿಜಿಸ್ಟ್ರಾರ್ ಅವರು 2023ರ ಆಗಸ್ಟ್ ತಿಂಗಳಲ್ಲಿ ಶೋಕಾಸ್ ನೋಟೀಸ್ ಜಾರಿ ಮಾಡಿದ್ದರು.

ನೋಟಿಸ್‌ಗೆ ಸಂಬಂಧಿಸಿದಂತೆ ಅರ್ಜಿದಾರ ಕಂಪನಿ ವಿವರಣೆ ನೀಡಿತ್ತು. ಆದರೆ, ಕೈಗಾರಿಕಾ ಅಭಿವೃದ್ಧಿ ನಿಗಮ(ಕೆಎಸ್‌ಐಡಿಸಿ) ವು ಕೊಚ್ಚಿನ್ ಮಿನರಲ್ಸ್ ಮತ್ತು ರುಟೈಲ್ ಲಿಮಿಟೆಡ್ ವ್ಯವಹಾರಗಳ ಕುರಿತಂತೆ ತನಿಖೆಯನ್ನು ಪ್ರಾರಂಭಿಸಲು ಆದೇಶ ಹೊರಡಿಸಲಾಗಿತ್ತು. ಜತೆಗೆ, ಈ ಸಂಬಂಧ ದಾಖಲೆಗಳನ್ನು ಸಲ್ಲಿಸುವಂತೆ ತನಿಖಾಧಿಕಾರಿ ಕೆ.ಪ್ರಭು ಎಂಬುವರು ನೋಟಿಸ್ ನೀಡಿದ್ದರು. ಈ ಸಂಬಂಧ ಅರ್ಜಿದಾರರು ದಾಖಲೆಗಳನ್ನು ಒದಗಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದ್ದರು. ಈ ನಡುವೆ ಕಂಪೆನಿ ರಿಜಿಸ್ಟ್ರಾರ್ ತನಿಖೆ ಹೊರಡಿಸಿರುವ ಆದೇಶ ಮತ್ತು ಅದರ ಮುಂದಿನ ಪ್ರಕ್ರಿಯೆಗೆ ತಡೆಯಾಜ್ಞೆ ನೀಡಬೇಕು ಎಂದು ಅರ್ಜಿದಾರರು ಕೋರಿದ್ದಾರೆ.

ಇದನ್ನೂ ಓದಿ:ನಿವೃತ್ತ ನ್ಯಾ.ನಾಗಮೋಹನ್​ ದಾಸ್​ ಆಯೋಗದ ಪ್ರಕ್ರಿಯೆ ಪ್ರಾರಂಭವಾಗದಿರಲು ಕಾರಣವೇನು?: ಹೈಕೋರ್ಟ್ ಪ್ರಶ್ನೆ

ABOUT THE AUTHOR

...view details