ರಾಯಚೂರು: ಹಂದಿ ದಾಳಿಯಿಂದ ಬಾಲಕಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಯಚೂರಲ್ಲಿ ಭಾನುವಾರ ನಡೆದಿದೆ. ನಗರಸಭೆ ವ್ಯಾಪ್ತಿಯಲ್ಲಿ ಬರುವ ಹಾಜಿ ಕಾಲೊನಿಯ ಅರಬ್ ಮೊಹಲ್ಲಾ ಪ್ರದೇಶದಲ್ಲಿ ಘಟನೆ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡ ಬಾಲಕಿಯನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ಮನೆಯಿಂದ ಹೊರ ಹೋಗಿದ್ದಾಗ ಹಂದಿ ಮೈಮೇಲೆರಗಿದೆ. ಈ ಸಂದರ್ಭದಲ್ಲಿ ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಕೂಡಲೇ ಬಾಲಕಿಯನ್ನು ರಕ್ಷಿಸಿದ್ದಾರೆ. ಪೊಷಕರು ಹಾಗೂ ಕಾಲೊನಿ ನಿವಾಸಿಗಳು ಘಟನೆಯಿಂದ ಆತಂಕಗೊಂಡಿದ್ದಾರೆ.