ಹುಬ್ಬಳ್ಳಿ:ಹುಬ್ಬಳ್ಳಿ - ಪುಣೆ ನಡುವೆ 'ವಂದೇ ಭಾರತ್' ರೈಲು ಸಂಚಾರಕ್ಕೆ ಎಲ್ಲ ಸಿದ್ಧತೆ ಪೂರ್ಣಗೊಂಡಿದೆ. ಸೆಪ್ಟೆಂಬರ್ 15ರಂದು ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಮೂಲಕ ರೈಲಿಗೆ ಚಾಲನೆ ನೀಡಲಿದ್ದಾರೆ.
ಸೆಪ್ಟೆಂಬರ್ 13 ಅಥವಾ 14ರಂದು ಪ್ರಾಯೋಗಿಕ ಸಂಚಾರ ನಡೆಯಲಿದೆ. ರೈಲು 558 ಕಿ.ಮೀ ದೂರವನ್ನು 9 ಗಂಟೆ 15 ನಿಮಿಷಗಳಲ್ಲಿ ಕ್ರಮಿಸಲಿದೆ. ಬೆಳಗ್ಗೆ 5ಕ್ಕೆ ಹುಬ್ಬಳ್ಳಿಯಿಂದ ಹೊರಟು, ಮಧ್ಯಾಹ್ನ 2.10ಕ್ಕೆ ಪುಣೆ ತಲುಪಲಿದೆ. ಅದೇ ರೀತಿ ಮಧ್ಯಾಹ್ನ 2.40ಕ್ಕೆ ಅಲ್ಲಿಂದ ಹೊರಡುವ ರೈಲು ರಾತ್ರಿ 11.50ಕ್ಕೆ ಹುಬ್ಬಳ್ಳಿಗೆ ಆಗಮಿಸಲಿದೆ.
''8 ಬೋಗಿಗಳನ್ನು ಹೊಂದಿರುವ ರೈಲು, ಧಾರವಾಡ, ಬೆಳಗಾವಿ, ಮೀರಜ್ ನಿಲ್ದಾಣಗಳಲ್ಲಿ ನಿಲುಗಡೆ
ಇರಲಿದೆ. ಸೋಮವಾರ ಹೊರತುಪಡಿಸಿ ಉಳಿದ ಎಲ್ಲ ದಿನಗಳಲ್ಲೂ ರೈಲು ಸಂಚರಿಸಲಿದೆ. ರೈಲು ಗಂಟೆಗೆ 60 ಕಿ.ಮೀ ವೇಗದಲ್ಲಿ ಸಾಗಲಿದೆ'' ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ. ಮಂಜುನಾಥ ಕನಮಡಿ ಮಾಹಿತಿ ನೀಡಿದರು.