ಕರ್ನಾಟಕ

karnataka

ETV Bharat / state

ಏ.28ಕ್ಕೆ ಬೆಳಗಾವಿಗೆ ಪ್ರಧಾನಿ ಮೋದಿ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ ಮಾಹಿತಿ - anil benake - ANIL BENAKE

ಏ.28ಕ್ಕೆ ಚುನಾವಣಾ ಪ್ರಚಾರಕ್ಕಾಗಿ ಪ್ರಧಾನಿ ಮೋದಿ ಬೆಳಗಾವಿಗೆ ಆಗಮಿಸಲಿದ್ದಾರೆ ಎಂದು ರಾಜ್ಯ ಬಿಜೆಪಿ ಉಪಾಧ್ಯಕ್ಷ ತಿಳಿಸಿದ್ದಾರೆ.

ಏ.28ಕ್ಕೆ ಬೆಳಗಾವಿಗೆ ಪ್ರಧಾನಿ ಮೋದಿ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ ಮಾಹಿತಿ
ಏ.28ಕ್ಕೆ ಬೆಳಗಾವಿಗೆ ಪ್ರಧಾನಿ ಮೋದಿ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ ಮಾಹಿತಿ

By ETV Bharat Karnataka Team

Published : Apr 23, 2024, 5:03 PM IST

Updated : Apr 23, 2024, 7:50 PM IST

ಬಿಜೆಪಿ ರಾಜ್ಯ ಉಪಾಧ್ಯಕ್ಷ ಅನಿಲ್ ಬೆನಕೆ ಮಾಹಿತಿ

ಬೆಳಗಾವಿ: ಜಿಲ್ಲೆಯಲ್ಲಿ ಚುನಾವಣಾ ಕಣ ರಂಗೇರಿದ್ದು, ಪ್ರಧಾನಿ ಮೋದಿ ಆಗಮನಕ್ಕೆ ಮುಹೂರ್ತ ಫಿಕ್ಸ್ ಆಗಿದೆ. ಇದೇ 28ರಂದು ಚುನಾವಣಾ ಪ್ರಚಾರಕ್ಕೆ ನಮೋ ಜಿಲ್ಲೆಗೆ ಆಗಮಿಸುತ್ತಿದ್ದಾರೆಂದು ಈಟಿವಿ ಭಾರತಕ್ಕೆ ರಾಜ್ಯ ಬಿಜೆಪಿ ಉಪಾಧ್ಯಕ್ಷ ಅನಿಲ್ ಬೆನಕೆ ಮಾಹಿತಿ ನೀಡಿದ್ದಾರೆ.

ಭಾನುವಾರ ಬೆಳಗಾವಿ ಮತ್ತು ಚಿಕ್ಕೋಡಿ ಲೋಕಸಭೆ ಕ್ಷೇತ್ರಗಳ ಚುನಾವಣಾ ಪ್ರಚಾರಾರ್ಥವಾಗಿ ಬೆಳಗಾವಿಗೆ ಮೋದಿ ಬರುತ್ತಿದ್ದಾರೆ. ಅಂದು 11.30ಕ್ಕೆ ಬೆಳಗಾವಿಗೆ ಬರಲಿರುವ ಮೋದಿ ಮಾಲಿನಿ ಸಿಟಿ ಮೈದಾನದಲ್ಲಿ 12 ಗಂಟೆಗೆ ನಡೆಯಲಿರುವ ಬಹಿರಂಗ ಪ್ರಚಾರ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಮಾಜಿ ಸಿಎಂ ಯಡಿಯೂರಪ್ಪ, ರಾಜ್ಯ ಚುನಾವಣಾ ಉಸ್ತುವಾರಿ ರಾಧಾಮೋಹನದಾಸ್ ಅಗರವಾಲ್ ಹಾಗೂ ಎರಡೂ ಕ್ಷೇತ್ರದ ಅಭ್ಯರ್ಥಿಗಳು, ಶಾಸಕರು, ಮಾಜಿ ಶಾಸಕರು, ಕಾರ್ಯಕರ್ತರು ಸೇರಿ 2.5 ಲಕ್ಷಕ್ಕೂ ಅಧಿಕ ಜನ ಭಾಗವಹಿಸಲಿದ್ದಾರೆ ಎಂದು ಬೆನಕೆ ತಿಳಿಸಿದರು.

ಪ್ರಧಾನಿ ಮೋದಿ ಜಿಲ್ಲೆಗೆ ಆಗಮಿಸುವುದರಿಂದ ಕೇವಲ ಬದಲಾವಣೆ ಅಲ್ಲ ಪರಿವರ್ತನೆ ಆಗುತ್ತದೆ. ಜಾತ್ಯತೀತ, ಭಾಷಾತೀತ ಹಾಗೂ ಬೇರೆ ಪಕ್ಷದವರು ಕೂಡ ಕಾರ್ಯಕ್ರಮಕ್ಕೆ ಬರುತ್ತಾರೆ. ಅಲ್ಲದೇ ದೇಶದ ಸಲುವಾಗಿ ಬಿಜೆಪಿಗೆ ವೋಟ್ ಹಾಕುತ್ತಾರೆ. ಹಿಂದಿನ ಚುನಾವಣೆಗಿಂತ ಈ ಬಾರಿ ಅತೀ ಹೆಚ್ಚು ಲೀಡ್ ಕೊಡುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಮೋದಿ ಆಗಮನದಿಂದ ಜಿಲ್ಲಾ ಬಿಜೆಪಿಯಲ್ಲಿನ ಅಸಮಾಧಾನ ಶಮನ ಆಗುತ್ತದೆಯೇ ಎಂಬ ಪ್ರಶ್ನೆಗೆ, ನಮ್ಮಲ್ಲಿ ಯಾವುದೇ ರೀತಿ ಭಿನ್ನಾಭಿಪ್ರಾಯ ಇಲ್ಲ. ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ. ಮೋದಿ ಬಂದು ಹೋದ ಮೇಲೆ ಇನ್ನೂ ಹೆಚ್ಚಿನ ಉತ್ಸಾಹದಿಂದ ನಾವೆಲ್ಲರೂ ಕೆಲಸ ಮಾಡುತ್ತೇವೆ ಎಂದು ಸಮಜಾಯಿಷಿ ನೀಡಿದರು. ಮೋದಿಯವರು ಬಂದಾಗ ಕ್ಷೇತ್ರದ ಜನರಲ್ಲಿ ಉತ್ಸಾಹ ತುಂಬಿರುತ್ತದೆ. ಹಿಂದೆ ಅವರು ಬಂದಾಗ ಅಪೇಕ್ಷೆಗಿಂತ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರಿದ್ದರು. ಈ ಸಲವೂ ಅದಕ್ಕಿಂತ ಅಧಿಕ ಜನ ಆಗಮಿಸಲಿದ್ದಾರೆ ಎಂದರು.

ಇದನ್ನೂ ಓದಿ:ಪಕ್ಷದಿಂದ ಉಚ್ಚಾಟಿಸಿದ್ದಕ್ಕೆ ಈಶ್ವರಪ್ಪ ಸಹ ಸಂತೋಷ ವ್ಯಕ್ತಪಡಿಸಿದ್ದಾರೆ: ಬಿ.ವೈ. ವಿಜಯೇಂದ್ರ - vijayendra statement

Last Updated : Apr 23, 2024, 7:50 PM IST

ABOUT THE AUTHOR

...view details