ಮಂಗಳೂರು:ನಗರದ ಬಂಗ್ರ ಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ಏಪ್ರಿಲ್ 14ರಂದು ಆಯೋಜಿಸಲಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ ಸಮಾವೇಶ ಕೊನೆಯ ಕ್ಷಣದಲ್ಲಿ ರದ್ದಾಗಿದೆ. ಸಮಾವೇಶದ ಬದಲು ಬರೀ ರೋಡ್ ಶೋ ನಡೆಸಲು ನಿರ್ಧರಿಸಲಾಗಿದೆ.
ಈ ಬಗ್ಗೆ 'ಈಟಿವಿ ಭಾರತ'ಕ್ಕೆ ಮಾಹಿತಿ ನೀಡಿದ ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ, "ಮೋದಿ ಅವರ ಸಮಾವೇಶಕ್ಕೆ ಬಂಗ್ರ ಕೂಳೂರಿನ ಗೋಲ್ಡ್ ಪಿಂಚ್ ಸಿಟಿಯಲ್ಲಿ ಇಂದು ಚಪ್ಪರ ಮುಹೂರ್ತವೂ ನಡೆದಿತ್ತು. ಆದರೆ ಕೆಲವು ಕಾರಣಗಳಿಂದ ಸಮಾವೇಶ ರದ್ದುಗೊಂಡಿದೆ. ಕೇಂದ್ರ ನಾಯಕರ ಸೂಚನೆಯಂತೆ ಸಮಾವೇಶದ ಬದಲು ಸಂಜೆ ರೋಡ್ ಶೋ ನಡೆಸಲು ನಿರ್ಧಾರ ಕೈಗೊಳ್ಳಲಾಗಿದೆ" ಎಂದರು.