ಕರ್ನಾಟಕ

karnataka

ETV Bharat / state

ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ: 6 ಜನರಿಗೆ 20 ವರ್ಷ ಕಾರಾಗೃಹ ಶಿಕ್ಷೆ - 6 people sentenced 20 years Jail - 6 PEOPLE SENTENCED 20 YEARS JAIL

ಬಾಲಕಿ ಮೇಲೆ ಅತ್ಯಾಚಾರ ಹಾಗೂ ಅದಕ್ಕೆ ನೆರವು ನೀಡಿದ ಆರು ಮಂದಿಗೆ ಬೆಳಗಾವಿ ಜಿಲ್ಲಾ ಪೋಕ್ಸೊ ನ್ಯಾಯಾಲಯ 20 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

pocso-case-6-people-sentenced-to-20-years-in-prison
ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ: 6 ಜನರಿಗೆ 20 ವರ್ಷ ಕಾರಾಗೃಹ ಶಿಕ್ಷೆಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪ: 6 ಜನರಿಗೆ 20 ವರ್ಷ ಕಾರಾಗೃಹ ಶಿಕ್ಷೆ (File photo)

By ETV Bharat Karnataka Team

Published : Sep 19, 2024, 9:37 PM IST

ಬೆಳಗಾವಿ: ಬಾಲಕಿಯನ್ನು ಮದುವೆ ಆಗುತ್ತೇನೆ ಎಂದು ಪುಸಲಾಯಿಸಿ ಅತ್ಯಾಚಾರ ಎಸಗಿದ ಹಾಗೂ ಪ್ರಚೋದನೆ ನೀಡಿದ ಆರೋಪದಡಿ 6 ಜನರಿಗೆ 20 ವರ್ಷಗಳ ಕಠಿಣ ಶಿಕ್ಷೆ ಹಾಗೂ ತಲಾ 10 ಸಾವಿರ ದಂಡ ವಿಧಿಸಿ ಜಿಲ್ಲಾ ಪೋಕ್ಸೊ ನ್ಯಾಯಾಲಯ ಗುರುವಾರ ಮಹತ್ವದ ತೀರ್ಪು ನೀಡಿದೆ.

ಪ್ರಕರಣದ ಹಿನ್ನೆಲೆ:2025, ಜೂನ್ 21ರಂದು ಆರೋಪಿ ಬಾಲಕಿಯನ್ನು ಮದುವೆ ಆಗುತ್ತೇನೆ ಎಂದು ನಂಬಿಸಿ ಮಹಾರಾಷ್ಟ್ರದ ಕೊಲ್ಹಾಪುರ ಜಿಲ್ಲೆಯ ಗಗನಬಾವಡಾ ತಾಲೂಕಿನ ಗ್ರಾಮವೊಂದರ ಬಳಿ ನಿರ್ಜ‌ನ ಪ್ರದೇಶಕ್ಕೆ ಕರೆದೊಯ್ದಿದ್ದ. ಕೂಲಿ ಕೆಲಸಕ್ಕೆ ಬಂದಿದ್ದೇವೆ ಎಂದು ಹೇಳಿ ಅಲ್ಲಿ ಮನೆಯೊಂದರ ಶೆಡ್ ಪಡೆದುಕೊಂಡಿದ್ದ. ಶೆಡ್ ನಲ್ಲಿ ಬಾಲಕಿ ಮೇಲೆ ಆರೋಪಿ‌ ಅತ್ಯಾಚಾರ ಎಸಗಿದ್ದ. ಇನ್ನುಳಿದ ಆರೋಪಿಗಳು ಆತನಿಗೆ ಪ್ರಚೋದನೆ ನೀಡಿದ್ದರು. ಅಪ್ರಾಪ್ತ ಬಾಲಕಿ ಶೆಡ್‌ನಿಂದ ಹೊರಗೆ ಬರದಂತೆ ಕೂಡಿಟ್ಟಿದ್ದರು. ಅಲ್ಲದೇ 3 ಲಕ್ಷ ಹಣ ಕೊಟ್ಟರೆ ಮಾತ್ರ ನಿಮ್ಮ ಮಗಳನ್ನು ಇಲ್ಲಿಂದ ವಾಪಸ್‌ ಕಳಿಸುವುದಾಗಿ ಬಾಲಕಿ ತಂದೆಗೆ ಬೆದರಿಕೆಯೊಡ್ಡಿದ್ದರು.

ಈ ಸಂಬಂಧ ಬಾಲಕಿ ತಂದೆ ನೀಡಿದ ದೂರು ಆಧರಿಸಿ ತನಿಖೆ ಕೈಗೊಂಡಿದ್ದ ಚಿಕ್ಕೋಡಿಯ ತನಿಖಾಧಿಕಾರಿ ಎಂ.ಎಸ್‌.ನಾಯ್ಕರ ಜಿಲ್ಲಾ ಪೋಕ್ಸೋ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಸುದೀರ್ಘವಾಗಿ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅವರು, ಆರೋಪಿತರ ಮೇಲಿನ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇಂದು ತೀರ್ಪು ಪ್ರಕಟಿಸಿದ್ದಾರೆ. ಅದೇ ರೀತಿ ಜಿಲ್ಲಾ ಕಾನೂನು ಪ್ರಾಧಿಕಾರದಿಂದ ಪರಿಹಾರಧನ ಪಡೆಯುವಂತೆ ಸಂತ್ರಸ್ತ ಬಾಲಕಿ ತಂದೆಗೆ ನ್ಯಾಯಾಲಯ ಆದೇಶಿಸಿದೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್‌.ವಿ.ಪಾಟೀಲ ವಾದ ಮಂಡಿಸಿದ್ದರು.

ಇದನ್ನು ಓದಿ:ಐತಿಹಾಸಿಕ ಬೆಳಗಾವಿ ಗಣೇಶೋತ್ಸವದಲ್ಲಿ ರೈತ ಗಲ್ಲಿ ಹವಾ; ಮನೆ ಮುಂದೆ ಸರತಿ ಸಾಲಿನಲ್ಲಿ ಬೆನಕನ ದರ್ಶನ - Raitha Galli Ganeshotsava

ABOUT THE AUTHOR

...view details