ಕರ್ನಾಟಕ

karnataka

ETV Bharat / state

ಮೈಸೂರು ಹೊರವಲಯದಲ್ಲಿ ರೇವ್ ಪಾರ್ಟಿ?; ತಡರಾತ್ರಿ ಪೊಲೀಸರ ದಾಳಿ, ಯುವಕ-ಯುವತಿಯರು ವಶಕ್ಕೆ - Mysuru Police Raid

ಮೈಸೂರಿನ ಹೊರವಲಯದಲ್ಲಿ ರೇವ್ ಪಾರ್ಟಿ ಆಯೋಜಿಸಿರುವ ಅನುಮಾನದ ಮೇರೆಗೆ ತಡರಾತ್ರಿ ಪೊಲೀಸರು ದಾಳಿ ನಡೆಸಿದರು.

ಮೈಸೂರಲ್ಲಿ ರೇವ್ ಪಾರ್ಟಿ ಆಯೋಜನೆ?
ಸಾಂದರ್ಭಿಕ ಚಿತ್ರ (ETV Bharat)

By ETV Bharat Karnataka Team

Published : Sep 29, 2024, 11:51 AM IST

ಮೈಸೂರು: ಕೆ.ಆರ್.ಎಸ್ ಹಿನ್ನೀರಿನ ಪ್ರದೇಶದ ಬಳಿ ಇರುವ ಖಾಸಗಿ ಜಮೀನಿನಲ್ಲಿ ಆಯೋಜಿಸಿದ್ದ ಪಾರ್ಟಿ ಮೇಲೆ ಪೊಲೀಸರು ತಡರಾತ್ರಿ ದಾಳಿ ಮಾಡಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದ ಯುವಕ, ಯುವತಿಯರು ಸೇರಿ 50ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದಿದ್ದಾರೆ.

ಮೈಸೂರು ಹೊರವಲಯದಲ್ಲಿನ ಹಿನ್ನೀರು ಪ್ರದೇಶದಲ್ಲಿ ಪಾರ್ಟಿ ಆಯೋಜಿಸಲಾಗಿತ್ತು. ಅಬ್ಬರದ ಡಿಜೆ ಸಂಗೀತ ಏರ್ಪಡಿಸಲಾಗಿತ್ತು. ಇಲ್ಲಿ ರೇವ್ ಪಾರ್ಟಿ ನಡೆಯುತ್ತಿದೆ ಎಂಬ ಅನುಮಾನದ ಮೇರೆಗೆ ಪೊಲೀಸರು ದಾಳಿ ಮಾಡಿದ್ದಾರೆ.

ಮೈಸೂರು ಜಿಲ್ಲಾ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಮಾರ್ಗದರ್ಶನದಲ್ಲಿ ಹೆಚ್ಚುವರಿ ಎಸ್​​ಪಿ ನಾಗೇಶ್, ಡಿವೈಎಸ್ಪಿ ಕರೀಂ ರಾವತರ್ ಹಾಗೂ ಸಿಬ್ಬಂದಿ ಕಾರ್ಯಾಚರಣೆ ನಡೆಸಿ, ವಶಕ್ಕೆ ಪಡೆದ ಯುವಕ-ಯುವತಿಯರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಲು ಮುಂದಾಗಿದ್ದಾರೆ. ಪಾರ್ಟಿಗಾಗಿ ಬಳಸಲಾದ ಸಂಗೀತ ಉಪಕರಣಗಳು ಹಾಗೂ 30ಕ್ಕೂ ಹೆಚ್ಚು ಕಾರುಗಳನ್ನೂ ಸಹ ವಶಪಡಿಸಿಕೊಂಡಿದ್ದಾರೆ. ಈ ಪಾರ್ಟಿಯಲ್ಲಿ ಭಾಗವಹಿಸಲು 25ಕ್ಕೂ ಹೆಚ್ಚು ಜೋಡಿಗಳು ಹೆಸರು ನೋಂದಾಯಿಸಿಕೊಂಡಿದ್ದರು ಎಂದು ಹೇಳಲಾಗುತ್ತಿದೆ.

ಮಾದಕ ದ್ರವ್ಯ ಕಂಡುಬಂದಿಲ್ಲ- ಎಸ್​ಪಿ:"ಇಲವಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ‌. ಈ ವಿಚಾರ ತಿಳಿದು ನಮ್ಮ ಎಎಸ್ಪಿ ದಾಳಿ ಮಾಡಿದ್ದಾರೆ. ಸ್ಥಳದಲ್ಲಿ ಯಾವುದೇ ಮಾದಕ ದ್ರವ್ಯ ಕಂಡುಬಂದಿಲ್ಲ. ವಶಕ್ಕೆ ಪಡೆದವರ ರಕ್ತದ ಸ್ಯಾಂಪಲ್ ಲ್ಯಾಬ್​​ಗೆ ಕಳುಹಿಸಲಾಗುತ್ತದೆ.‌ ವರದಿ ಬಂದ ಮೇಲೆ ಈ ಬಗ್ಗೆ ಕ್ರಮ ಕೈಗೊಳ್ತೀವಿ. ಯಾರು ಆಯೋಜನೆ ಮಾಡಿದ್ರು ಅನ್ನೋದು ತನಿಖೆಯಿಂದ ಗೊತ್ತಾಗಬೇಕಿದೆ" ಎಂದು ಎಸ್‌ಪಿ ವಿಷ್ಣುವರ್ಧನ್ ಹೇಳಿದರು.

ಇದನ್ನೂ ಓದಿ: ಬೆಂಗಳೂರು: 85 ಸಾವಿರ ರೂಪಾಯಿಗೆ ಸ್ನೇಹಿತನ ಹತ್ಯೆ - Nelamangala Murder Case

ABOUT THE AUTHOR

...view details