ಹುಬ್ಬಳ್ಳಿ:ಮಹಿಳೆಯೊಂದಿಗೆಪೊಲೀಸ್ ಕಾನ್ಸ್ಟೇಬಲ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ನವನಗರ ಪೊಲೀಸ್ ಠಾಣಾ ವ್ಯಾಪ್ತಿಯ ಗಾಮನಗಟ್ಟಿಯಲ್ಲಿ ನಡೆದಿದೆ. ಧಾರವಾಡ ಸಂಚಾರಿ ಪೊಲೀಸ್ ಠಾಣೆಯ ಕಾನ್ಸ್ಟೇಬಲ್ ಮಹೇಶ ಹೆಸರೂರು ಮತ್ತು ವಿಜಯಲಕ್ಷ್ಮೀ (30) ಎಂಬುವರು ಹುಬ್ಬಳ್ಳಿಯ ಗಾಮನಗಟ್ಟಿಯಲ್ಲಿರುವ ಮನೆಯೊಂದರಲ್ಲಿ ನೇಣಿಗೆ ಶರಣಾಗಿದ್ದಾರೆ.
ಮನೆಯಿಂದ ದುರ್ವಾಸನೆ ಬಂದ ಹಿನ್ನೆಲೆಯಲ್ಲಿ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದರು. ವಿಷಯ ತಿಳಿದು ಸ್ಥಳಕ್ಕೆ ನವನಗರ ಠಾಣೆ ಪೊಲೀಸರು ಆಗಮಿಸಿ ಬಾಗಿಲು ಒಡೆದು ನೋಡಿದಾಗ ಮಹಿಳೆ ಮತ್ತು ಕಾನ್ಸ್ಟೇಬಲ್ ಮಹೇಶ್ ನೇಣಿಗೆ ಶರಣಾಗಿರುವುದು ಕಂಡು ಬಂದಿದೆ. ಎರಡು ಮೂರು ದಿನಗಳ ಹಿಂದೆ ಗಾಮನಗಟ್ಟಿಯ ಮನೆಯೊಂದರಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕಿ ವ್ಯಕ್ತವಾಗಿದೆ.