ಮಂಗಳೂರು : ನಗರದ ತೊಕ್ಕೊಟ್ಟುವಿನಲ್ಲಿ ನಡೆಸಲು ಉದ್ದೇಶಿಸಿರುವ ಡಿವೈಎಫ್ಐ ರಾಜ್ಯ ಸಮ್ಮೇಳನದ ಪ್ರಯುಕ್ತ ಹರೇಕಳ ಕಚೇರಿ ಬಳಿ ಹಾಕಲಾದ ಟಿಪ್ಪು ಸುಲ್ತಾನ್ ಕಟೌಟ್ ತೆರವಿಗೆ ಪೊಲೀಸರು ನೋಟಿಸ್ ನೀಡಿದ್ದಾರೆ.
ಡಿವೈಎಫ್ಐ ರಾಜ್ಯ ಸಮ್ಮೇಳನದ ಪ್ರಯುಕ್ತ ಅಲ್ಲಲ್ಲಿ ನಾಡಿನ ಆದರ್ಶ ಪುರುಷರ, ಸ್ವಾತಂತ್ರ್ಯ ಸೇನಾನಿಗಳ, ಸಮಾಜ ಸುಧಾರಕರ ಪ್ರತಿಮೆ, ಫ್ಲೆಕ್ಸ್ ಹಾಕಲಾಗಿದೆ. ಅದೇ ರೀತಿ ಹರೇಕಳದಲ್ಲಿ ಕಾರ್ಯಕರ್ತರು ಟಿಪ್ಪು ಸುಲ್ತಾನ್ ಪ್ರತಿಮೆ ಅಳವಡಿಸಿದ್ದಾರೆ. ಇದಕ್ಕೆ ಅನುಮತಿ ಪಡೆಯದಿರುವುದರಿಂದ ಕೊಣಾಜೆ ಪೊಲೀಸ್ ಠಾಣಾಧಿಕಾರಿ ಟಿಪ್ಪು ಪ್ರತಿಮೆ ತೆರವುಗೊಳಿಸಲು ನೋಟಿಸ್ ನೀಡಿದ್ದಾರೆ. ಕಾರ್ಡ್ ಬೋರ್ಡ್ನಿಂದ 6 ಅಡಿ ಉದ್ದದ ಟಿಪ್ಪು ಸುಲ್ತಾನ್ ಕಟೌಟ್ ನಿರ್ಮಿಸಲಾಗಿದೆ. ಈ ಕಟೌಟ್ ತೆರವಿಗೆ ಪೊಲೀಸರು ಸೂಚಿಸಿದ್ದಾರೆ.