ಕರ್ನಾಟಕ

karnataka

ETV Bharat / state

ಹೈಕೋರ್ಟ್​ನಲ್ಲಿ ಸಿಎಂ ಸಿದ್ದರಾಮಯ್ಯ ಅರ್ಜಿ ವಜಾ: ರಾಜಭವನ ಬಳಿ ಹೆಚ್ಚಿನ ಭದ್ರತೆ - Tight Security At Raj Bhavan

ಸಿಎಂ ಸಿದ್ದರಾಮಯ್ಯ ಅವರು ಪ್ರಾಸಿಕ್ಯೂಷನ್ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ ಹೈಕೋರ್ಟ್​ನಲ್ಲಿಂದು ವಜಾಗೊಂಡಿದ್ದು, ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.

ರಾಜಭವನ ಬಳಿ ಹೆಚ್ಚಿನ ಭದ್ರತೆ
ರಾಜಭವನ ಬಳಿ ಹೆಚ್ಚಿನ ಭದ್ರತೆ (ETV Bharat)

By ETV Bharat Karnataka Team

Published : Sep 24, 2024, 11:38 AM IST

Updated : Sep 24, 2024, 1:59 PM IST

ಬೆಂಗಳೂರು:ಮುಡಾ ಹಗರಣದ ಕುರಿತು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ರಾಜ್ಯಪಾಲರ ಕ್ರಮವನ್ನು ಹೈಕೋರ್ಟ್‌ ಎತ್ತಿ ಹಿಡಿದು, ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿತು. ಈ ತೀರ್ಪಿನ ನಂತರ ರಾಜಭವನದ ಬಳಿ ಹೆಚ್ಚಿನ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿರೀಕ್ಷೆಗೆ ವ್ಯತಿರಿಕ್ತವಾಗಿ ಹೈಕೋರ್ಟ್ ತೀರ್ಪು ಪ್ರಕಟವಾಗಿರುವ ಹಿನ್ನೆಲೆಯಲ್ಲಿ ಬೆಂಬಲಿಗರು, ಕಾಂಗ್ರೆಸ್ ಕಾರ್ಯಕರ್ತರು ರಾಜಭವನದ ಬಳಿ ಪ್ರತಿಭಟನೆ ಮಾಡುವ ಸಾಧ್ಯತೆ ಇದೆ. ಆದ್ದರಿಂದ ಮುಂಜಾಗೃತಾ ಕ್ರಮವಾಗಿ ಕೆಎಸ್ಆರ್​ಪಿ ತುಕಡಿಗಳನ್ನು ನಿಯೋಜಿಸಲಾಗಿದೆ.

ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ರಾಜ್ಯದ ಎಲ್ಲ ಜಿಲ್ಲೆಗಳು ಹಾಗೂ ಕಮಿಷನರೇಟ್ ವ್ಯಾಪ್ತಿಗಳಲ್ಲಿ ವಿಶೇಷ ಭದ್ರತೆ ವಹಿಸುವಂತೆ ಎಸ್​​ಪಿ ಹಾಗೂ ಡಿಸಿಪಿಗಳಿಗೆ ಡಿಜಿ ಮತ್ತು ಐಜಿಪಿ ಅಲೋಕ್ ಮೋಹನ್ ಸೂಚಿಸಿದ್ದಾರೆ.

ಇದನ್ನೂ ಓದಿ: ಮುಡಾ ಹಗರಣ: ರಾಜ್ಯಪಾಲರ ಕ್ರಮ ಎತ್ತಿಹಿಡಿದ ಹೈಕೋರ್ಟ್, ಸಿಎಂಗೆ ಹಿನ್ನಡೆ - MUDA SCAM

Last Updated : Sep 24, 2024, 1:59 PM IST

ABOUT THE AUTHOR

...view details