ಚಾಮರಾಜನಗರ:ವೇಶ್ಯಾವಾಟಿಕೆ ದಂಧೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಕೊಳ್ಳೇಗಾಲ ಪೊಲೀಸರು ಶನಿವಾರ ರಾತ್ರಿ ಇಲ್ಲಿನ ಲಾಡ್ಜ್‌ವೊಂದರ ಮೇಲೆ ಮಾಡಿದ್ದು ನಾಲ್ವರು ಮಹಿಳೆಯರು, ನಾಲ್ವರು ಪುರುಷರು ಹಾಗೂ ಲಾಡ್ಜ್ ಸಿಬ್ಬಂದಿಯನ್ನು ಬಂಧಿಸಿದ್ದಾರೆ.
ಕೊಳ್ಳೇಗಾಲ ಪಟ್ಟಣದ ಹೃದಯಭಾಗದಲ್ಲಿರುವ ಶೆಟ್ಟೀಸ್ ಫೋರಂನ ಜಶ್ವಂತ್ ರೆಸಿಡೆನ್ಸಿ ಲಾಡ್ಜ್ ಮೇಲೆ ಪೊಲೀಸ್ ವೃತ್ತ ನಿರೀಕ್ಷಕ ಶಿವಮಾದಯ್ಯ ಹಾಗೂ ಸಿಬ್ಬಂದಿ ದಾಳಿ ನಡೆಸಿದ್ದಾರೆ.