ಬೆಂಗಳೂರು: ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಇಂದು ಬೆಳಿಗ್ಗೆ ದಕ್ಷಿಣ ವಿಭಾಗದ ಪೊಲೀಸರು ರೌಡಿಗಳ ಮನೆಗಳ ಮೇಲೆ ದಿಢೀರ್ ದಾಳಿ ನಡೆಸಿ ಬಿಸಿ ಮುಟ್ಟಿಸಿದ್ದಾರೆ. ಸುಮಾರು 230 ಮಂದಿ ರೌಡಿಗಳ ಮನೆ ಮೇಲೆ ದಾಳಿ ನಡೆದಿದೆ.
ಜಯನಗರ, ಬನಶಂಕರಿ, ಚೆನ್ನಮ್ಮನ ಅಚ್ಚುಕಟ್ಟು, ಕುಮಾರಸ್ವಾಮಿ ಲೇಔಟ್ ಸೇರಿದಂತೆ ದಕ್ಷಿಣ ವಲಯದ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಗಳ ರೌಡಿಶೀಟರ್ ಮನೆಗಳನ್ನು ಪೊಲೀಸರು ಜಾಲಾಡಿದ್ದಾರೆ. ಪರಿಶೀಲನೆಯ ವೇಳೆ ಕೆಲವು ರೌಡಿಗಳ ಮನೆಗಳಲ್ಲಿ ಮಾರಕಾಸ್ತ್ರಗಳು, ವಿವಿಧ ಆಯುಧಗಳು ಸಿಕ್ಕಿವೆ ಎಂದು ಮೂಲಗಳಿಂದ ತಿಳಿದು ಬಂದಿದೆ.