ಕರ್ನಾಟಕ

karnataka

ETV Bharat / state

ರಾಜ್ಯ ಆವರಿಸಿದ ಹಿಂಗಾರು ಮಾರುತಗಳು: ಈ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ - Post Monsoon in Karnataka

ರಾಜ್ಯಕ್ಕೆ ಹಿಂಗಾರು ಮಾರುತಗಳು ಪೂರ್ಣಪ್ರಮಾಣದಲ್ಲಿ ಪ್ರವೇಶ ಮಾಡಿವೆ. ಮುಂದಿನ 24 ಗಂಟೆಗಳ ಕಾಲ ಕೆಲ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

By ETV Bharat Karnataka Team

Published : 4 hours ago

ರಾಜ್ಯ ಆವರಿಸಿದ ಹಿಂಗಾರು ಮಾರುತಗಳು
ರಾಜ್ಯ ಆವರಿಸಿದ ಹಿಂಗಾರು ಮಾರುತಗಳು (ಹವಾಮಾನ ಇಲಾಖೆ)

ಬೆಂಗಳೂರು:ಹಿಂಗಾರು ಮಾರುತಗಳು ರಾಜ್ಯಕ್ಕೆ ಪೂರ್ಣ ಪ್ರಮಾಣದಲ್ಲಿ ಎಂಟ್ರಿ ಕೊಟ್ಟಿದ್ದು, ಮುಖ್ಯವಾಗಿ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಈ ಹಿನ್ನೆಲೆಯಲ್ಲಿ 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

ಎಲ್ಲೆಲ್ಲಿ ಯೆಲ್ಲೋ ಅಲರ್ಟ್: ಮುಂದಿನ 24 ಗಂಟೆಗಳ ಕಾಲ ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಲಿದೆ. ನಾಳೆಗೆ ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಹವಾಮಾನ ಇಲಾಖೆ ಕೇಂದ್ರದ ನಿರ್ದೇಶಕ ಸಿ.ಎಸ್ ಪಾಟೀಲ್ (ETV Bharat)

ಬಳ್ಳಾರಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಕೋಲಾರ, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಹಾಸನ, ಮಂಡ್ಯ, ರಾಮನಗರ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಮಳೆಯಾಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಸಾಧಾರಣ ಮಳೆಯಾಗುವ ಸಂಭವವಿದೆ. ಇನ್ನು ಉತ್ತರ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲಿ ಹಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಸಿಲಿಕಾನ್ ಸಿಟಿಯಲ್ಲಿ ಸಾಧಾರಣ ಮಳೆ:ಬೆಂಗಳೂರು ನಗರ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ಆಕಾಶ ಇರಲಿದೆ. ಸಾಧಾರಣ ಮಳೆಯಾಗುವ ಸಂಭವವಿದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 29 ಮತ್ತು 20 ಡಿಗ್ರಿ ದಾಖಲಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ದಕ್ಷಿಣ ಬಂಗಾಳ ಕೊಲ್ಲಿಯ ಮೇಲಿನ ವಾಯು ಚಂಡಮಾರುತದ ಪರಿಚಲನೆಯಿದ್ದು, ಮುಂದೆ ಪಶ್ಚಿಮ ಬಂಗಾಳ ಕೊಲ್ಲಿಯ ಮೇಲಿನಿಂದ ಆಂಧ್ರಪ್ರದೇಶದ ಕರಾವಳಿಯ ಹತ್ತಿರ 1.5 ಕಿ.ಮೀ. ನಿಂದ 4.5 ಕಿ.ಮೀ. ಎತ್ತರದಲ್ಲಿ ಹಾದು ಹೋಗಲಿದೆ. ಇನ್ನು ಆಗ್ನೇಯ ಅರೇಬಿಯನ್ ಸಮುದ್ರದ ಮೇಲೆ ಚಂಡಮಾರುತದ ಪರಿಚಲನೆಯು ಸರಾಸರಿ ಸಮುದ್ರ ಮಟ್ಟದಿಂದ 1.5 ಕಿ.ಮೀ. ಎತ್ತರದಲ್ಲಿದೆ. ಈ ಹಿನ್ನೆಲೆಯಲ್ಲಿ ನಿನ್ನೆಯಿಂದ ದಕ್ಷಿಣ ಒಳನಾಡಿನ ಬಹುತೇಕ ಸ್ಥಳಗಳಲ್ಲಿ ಮಳೆಯಾಗಿದೆ. ಕರಾವಳಿ ಮತ್ತು ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಮಾತ್ರ ಮಳೆಯಾಗಿದೆ. ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ರಾಜ್ಯದಲ್ಲಿ ಅತೀ ಹೆಚ್ಚು ಅಂದರೆ 17 ಸೆಂ.ಮೀ. ಮಳೆ ದಾಖಲಾಗಿದೆ. ಇನ್ನು ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ 15 ಸೆಂ. ಮೀ, ಚಿತ್ರದುರ್ಗ ಜಿಲ್ಲೆಯ ನಾಯಕನಹಟ್ಟಿಯಲ್ಲಿ 13 ಸೆಂ.ಮೀ ಮಳೆ ಸುರಿದಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ಕೇಂದ್ರದ ನಿರ್ದೇಶಕ ಸಿ.ಎಸ್ ಪಾಟೀಲ್ ಹೇಳಿದ್ದಾರೆ.

ಇದನ್ನೂ ಓದಿ: ಎರಡು ದಿನ ಅವತಾರ್ ವೇಷ ಧರಿಸಿ 5 ಲಕ್ಷ ರೂ. ಸಂಗ್ರಹ; ನಾಲ್ವರು ಮಕ್ಕಳ ಚಿಕಿತ್ಸೆಗೆ ನೆರವು ನೀಡಿದ ರವಿ ಕಟಪಾಡಿ - Ravi Katpadi

ABOUT THE AUTHOR

...view details