ಕರ್ನಾಟಕ

karnataka

ETV Bharat / state

ಸಿಎಂ ತವರಲ್ಲಿ ಅಸ್ಪೃಶ್ಯತೆ ಆಚರಣೆ: ಗ್ರಾಮಸ್ಥರಿಗೆ ಅಧಿಕಾರಿಗಳ ಎಚ್ಚರಿಕೆ - Untouchability

ಮೈಸೂರು ಜಿಲ್ಲೆಯ ಕಿರಾಳು ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆಯ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಸಭೆ ನಡೆಸಿದ ಅಧಿಕಾರಿಗಳು, ಅನಿಷ್ಠ ಪದ್ಧತಿಯ ಆಚರಣೆಗೆ ಕಡಿವಾಣ ಹಾಕಿದ್ದಾರೆ.

Mysuru untouchability issues
ಗ್ರಾಮಸ್ಥರೊಂದಿಗೆ ಅಧಿಕಾರಿಗಳ ಸಭೆ (ETV Bharat)

By ETV Bharat Karnataka Team

Published : Jun 23, 2024, 10:27 AM IST

ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ತವರು ಜಿಲ್ಲೆಯ ವರುಣಾದ ಕಿರಾಳು ಗ್ರಾಮದಲ್ಲಿ ಅಸ್ಪೃಶ್ಯತೆ ಆಚರಣೆ ಬೆಳಕಿಗೆ ಬಂದಿದೆ. ವಿಷಯ ತಿಳಿದು ತಹಶೀಲ್ದಾರ್ ಸ್ಥಳಕ್ಕೆ ಭೇಟಿ ನೀಡಿ, ಗ್ರಾಮದ ಮುಖಂಡರೊಂದಿಗೆ ಮಾತುಕತೆ ನಡೆಸಿ ಅಸ್ಪೃಶ್ಯತೆ ಆಚರಿಸದಂತೆ ಎಚ್ಚರಿಕೆ ನೀಡಿದ್ದಾರೆ.

ಈ ಘಟನೆಯ ಬಗ್ಗೆ ನವೀನ್ ಎಂಬವರು ತಹಶೀಲ್ದಾರ್​ಗೆ ದೂರು ನೀಡಿದ್ದರು. ವಿದ್ಯಾವಂತ ನಾಗರೀಕನಾದ ನನಗೆ ಗ್ರಾಮದ ಶಂಭುಮಹಾಲಿಂಗೇಶ್ವರ ದೇವಸ್ಥಾನಕ್ಕೆ ಪ್ರವೇಶಿಸಲು ಅರ್ಚಕರು ಹಾಗೂ ಗ್ರಾಮಸ್ಥರು ಅವಕಾಶ ನೀಡದೇ ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ. ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದರು.

ಕೂಡಲೇ ಎಚ್ಚೆತ್ತ ತಹಶೀಲ್ದಾರ್, ವರುಣಾ ಠಾಣೆಯ ಪಿಎಸ್ಸೈ ಚೇತನ್ ಹಾಗೂ ಇತರೆ ಅಧಿಕಾರಿಗಳೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ ಗ್ರಾಮಸ್ಥರ ಮನವೊಲಿಸಿ ನಿರ್ಬಂಧ ಹೇರಿದ್ದ ನವೀನ್ ಅವರಿಗೆ ದೇವಸ್ಥಾನಕ್ಕೆ ಪ್ರವೇಶ ಕಲ್ಪಿಸಿದರು. ಅಧಿಕಾರಿಗಳ ಸಮ್ಮುಖದಲ್ಲೇ ನವೀನ್ ದೇವಸ್ಥಾನ ಪ್ರವೇಶಿಸಿ ಪೂಜೆ ಸಲ್ಲಿಸಿದರು. ದೇವಸ್ಥಾನದ ಆವರಣದಲ್ಲೇ ಸಭೆ ಕರೆದು ಅಸ್ಪೃಶ್ಯತೆ ಆಚರಿಸದಂತೆ ಜಾಗೃತಿ ಮೂಡಿಸುವ ಮೂಲಕ ಖಡಕ್ ವಾರ್ನಿಂಗ್ ನೀಡಿದ್ದಾರೆ.

ಇದನ್ನೂ ಓದಿ:ಯುವಕನ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ಸೂರಜ್ ರೇವಣ್ಣ ಬಂಧನ - Suraj Revanna Arrest

21ನೇ ಶತಮಾನಕ್ಕೆ ಕಾಲಿಟ್ಟರೂ ಇಂಥ ಹೀನ ಪದ್ಧತಿ ಜೀವಂತವಾಗಿರುವುದು ಶೋಚನೀಯ. ಅದರಲ್ಲೂ ಮೌಢ್ಯಾಚರಣೆ, ಅನಿಷ್ಠ ಪದ್ಧತಿಗಳ ವಿರುದ್ದ ಮಾತನಾಡುತ್ತಿರುವ ಸಿಎಂ ತವರಿನಲ್ಲಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಡಾ.ಹೆಚ್.ಡಿ.ಮಹದೇವಪ್ಪನವರ ತಾಲೂಕಿನಲ್ಲಿ ಅಸ್ಪೃಶ್ಯತೆ ಜೀವಂತವಾಗಿರುವುದು ಖಂಡನೀಯ ಎಂದು ಸಾರ್ವಜನಿಕರು ತಿಳಿಸಿದ್ದಾರೆ.

ತಹಶೀಲ್ದಾರ್ ಮಹೇಶ್ ಕುಮಾರ್‌, ಉಪ ತಹಶೀಲ್ದಾರ್ ಲತಾ ಶರಣಮ್ಮ, ಗ್ರಾಮ ಆಡಳಿತಾಧಿಕಾರಿಗಳಾದ ಕೀರ್ತಿ ಕುಮಾರ್ ಮತ್ತು ಅಬ್ದುಲ್ ರಶೀದ್ ಗ್ರಾಮಕ್ಕೆ ತೆರಳಿ ಅಸ್ಪೃಶ್ಯತೆಗೆ ಕಡಿವಾಣ ಹಾಕಿದ್ದಾರೆ.

ಇದನ್ನೂ ಓದಿ:ಹು-ಧಾ ಪಾಲಿಕೆ ಮೇಯರ್, ಉಪಮೇಯರ್ ಸ್ಥಾನಕ್ಕೆ ಬಿಜೆಪಿಯೊಳಗೇ ಪೈಪೋಟಿ - Hubballi Dharwad Mayor Election

ABOUT THE AUTHOR

...view details