ಕೋಲಾರ:ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಬಗ್ಗೆ ಅವಹೇಳನಕಾರಿಯಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಮಾತನಾಡಿದ್ದಾರೆ ಆರೋಪಿಸಿರುವ ಪ್ರಗತಿಪರ ಸಂಘಟನೆಗಳು ಸಮಿತಿ ಜನವರಿ 03 ರಂದು ಕೋಲಾರ ಬಂದ್‌ಗೆ ಕರೆ ನೀಡಿರುವುದಾಗಿ ತಿಳಿಸಿವೆ.
ಕೋಲಾರ ನಗರದ ಪತ್ರಕರ್ತರ ಭವನದಲ್ಲಿ ಸಭೆ ಸೇರಿದ ಮುಖಂಡರು ಮಾಧ್ಯಮದವರೊಂದಿಗೆ ಮಾತನಾಡಿ, "ಕೋಲಾರದ ಎಲ್ಲಾ ಪ್ರಗತಿ ಪರ ಸಂಘಟನೆಗಳು ಒಗ್ಗೂಡಿ ಜ.3 ರಂದು ಕೋಲಾರ ಬಂದ್‌ಗೆ ಕೆರೆ ನೀಡಲಾಗಿದ್ದು, ಬಂದ್‌ಗೆ ಎಲ್ಲರೂ ಸಹಕರಿಸುವಂತೆ" ಮನವಿ ಮಾಡಿದರು.
ಮುಂದುವರೆದ ಅವರು ಅಂಬೇಡ್ಕರ್ ಅವರ ಬಗ್ಗೆ ಅವಹೇಳನಕಾರಿಯಾಗಿ ಅಮಿತ್ ಶಾ ಮಾತನಾಡಿದ್ದಾರೆ ಎಂದು ಆರೋಪಿಸಿ, ಅವರನ್ನು ಕೂಡಲೇ ಸಚಿವ ಸಂಪುಟದಿಂದ ಕೈ ಬಿಡುವಂತೆ ಒತ್ತಾಯ ಮಾಡಿದರು. ದಲಿತ ಸಂಘಟನೆಗಳು, ಕಾರ್ಮಿಕ ಸಂಘಟನೆಗಳು, ರೈತ ಸಂಘ, ಮುಸ್ಲಿಂ ಸಮುದಾಯ ಸೇರಿದಂತೆ ಅನೇಕ ಸಂಘಟನೆಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿವೆ. ಜ.3ರಂದು ಬೆಳಗ್ಗೆ ಕೋಲಾರದ ನಚಿಕೇತ ನಿಲಯದಲ್ಲಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ರಸ್ತೆಗಿಳಿದು ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.
ಬಂದ್‌ಗೆ ಬೆಂಬಲ ನೀಡುವಂತೆ ಕೆಎಸ್‌ಆರ್‌ಟಿಸಿ, ಆಟೋ ಚಾಲಕರಿಗೆ ಮನವಿ ಮಾಡಲಾಗುವುದು. ಇನ್ನು ಜ.2ರಂದು ಕೋಲಾರ ನಗರದಲ್ಲಿ ಬೈಕ್ ರ‍್ಯಾಲಿ ನಡೆಸಿ ಎಲ್ಲ ಅಂಗಡಿ ಮುಂಗಟ್ಟುಗಳ ಮಾಲೀಕರನ್ನು ಬಂದ್‌ಗೆ ಸಹಕರಿಸುವಂತೆ ಮನವಿ ಮಾಡಲಾಗುವುದೆಂದು ತಿಳಿಸಿದರು.