ಕರ್ನಾಟಕ

karnataka

ETV Bharat / state

ರಾಜ್ಯ ಸರ್ಕಾರ ದಿವಾಳಿಯಾಗಿದೆ, ಜನ ಜಾಗೃತಿ ಮೂಡಿಸುತ್ತೇವೆ: ಪ್ರಹ್ಲಾದ್​ ಜೋಶಿ - ಪ್ರಹ್ಲಾದ್​ ಜೋಶಿ ಆರೋಪ

ರಾಜ್ಯ ಸರ್ಕಾರ ದಿವಾಳಿಯಾಗಿದೆ ಎಂದು ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಆರೋಪಿಸಿದ್ದಾರೆ.

Etv Bharat
Etv Bharat

By ETV Bharat Karnataka Team

Published : Feb 23, 2024, 5:18 PM IST

ರಾಜ್ಯ ಸರ್ಕಾರದ ವಿರುದ್ಧ ಜೋಶಿ ವಾಗ್ದಾಳಿ

ಹುಬ್ಬಳ್ಳಿ:ರಾಜ್ಯ ಸರ್ಕಾರ ಸಂಪೂರ್ಣವಾಗಿ ದಿವಾಳಿಯಾಗಿದೆ. ಈ ನಿಟ್ಟಿನಲ್ಲಿ ಎಲ್ಲದರ ಮೇಲೂ ಕಣ್ಣು ಹಾಕುತ್ತಿದೆ. ಇದನ್ನು ಬಿಜೆಪಿ ತೀವ್ರವಾಗಿ ವಿರೋಧಿಸುತ್ತದೆ, ಈ ಬಗ್ಗೆ ಜನಜಾಗೃತಿ ಮಾಡುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿ ಎಂಬುದನ್ನು ಹೆಜ್ಜೆ ಹೆಜ್ಜೆಗೆ ರುಜುವಾತು ಮಾಡುತ್ತಿದೆ. ತಮ್ಮ ವಿಫಲತೆಯನ್ನು ಮುಚ್ಚಿಕೊಳ್ಳಲು ಕೇಂದ್ರ ಸರ್ಕಾರದ ಕಡೆಗೆ ಬೊಟ್ಟು ತೋರಿಸಿ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ಹರಿಹಾಯ್ದರು. ಕಾಂಗ್ರೆಸ್ ಯಾವ ರಾಜ್ಯದಲ್ಲಿ ಅಧಿಕಾರದಲ್ಲಿದೆ. ಅಲ್ಲೆಲ್ಲ ತುಷ್ಟೀಕರಣ ರಾಜಕಾರಣ ಮಾಡುತ್ತದೆ. ಮತಬ್ಯಾಂಕ ರಾಜಕೀಯಕ್ಕೆ ಉತ್ತೇಜನ ಕೊಡುತ್ತದೆ. ಆದರೆ ನಾವು ಅದನ್ನು ವಿರೋಧಿಸುತ್ತೇವೆ ಎಂದರು.

ಈ ಹಿಂದೆ ಕೆಲವು ಕಿಡಿಗೇಡಿಗಳು ಹಳೇ ಹುಬ್ಬಳ್ಳಿ ಪೋಲಿಸ್ ಠಾಣೆಗೆ ಮುತ್ತಿಗೆ ಹಾಕಿ ಅಧಿಕಾರಿಗಳನ್ನು ಕೊಲೆ ಮಾಡಲು ಮುಂದಾಗಿದ್ದರು. ಆದರೆ ಜನಪ್ರತಿನಿಧಿಗಳು ಪತ್ರ ಬರೆದು ಅವರನ್ನು ಬಿಡುಗಡೆಗೊಳಿಸುವ ಕೆಲಸ ಮಾಡಿದ್ದಾರೆ. ಇದರಿಂದ ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಇದೆ. ಏನೂ ಬೇಕಾದರೂ ಮಾಡಿದರು ನಡೆಯುತ್ತದೆ ಎಂಬ ಭಾವನೆಗೆ ಬಂದಿದ್ದಾರೆ. ಇದು ದುರಂತವಾಗಿದೆ ಎಂದಿದ್ದಾರೆ.

ರಾಹುಲ್ ಗಾಂಧಿ ಅಪ್ರಬುದ್ಧ ರಾಜಕಾರಣಿ. ಹೀಗಾಗಿ ಯಾರು ಕಾಂಗ್ರೆಸ್ ಸೇರ್ಪಡೆಯಾಗಲು ಮುಂದಾಗುತ್ತಿಲ್ಲ. ಇಂಡಿಯಾ ಅವಕಾಶವಾದಿಗಳ ಕೂಟ, ಈ ಹಿಂದೆ ಒಗ್ಗಟ್ಟು ಫೋಟೋ ಶೂಟ್​​ಗೆ ಅಷ್ಟೇ ಸೀಮಿತವಾಗುತ್ತದೆ ಎಂದು ಹೇಳಿದ್ದೆ, ಹಾಗೇ ಆಗಲಿದೆ ಎಂದರು. ಇನ್ನು ಮಂಡ್ಯ ಸಂಸದೆ ಸುಮಲತಾ ಅಂಬರೀಶ್ ಬಿಜೆಪಿಯಲ್ಲಿ ಮುಂದುವರೆಯಲಿದ್ದಾರೆ ಎಂದು ತಿಳಿಸಿದರು.

ಇದನ್ನೂ ಓದಿ:ರಾಜ್ಯ ಸರ್ಕಾರದ ವಿರುದ್ಧ ವಿಧಾನಸಭೆಯಲ್ಲೇ ನಿರ್ಣಯ ಮಂಡಿಸಿ ಬಿಜೆಪಿ - ಜೆಡಿಎಸ್ ತಿರುಗೇಟು

ABOUT THE AUTHOR

...view details