ಕರ್ನಾಟಕ

karnataka

ETV Bharat / state

ಪ್ರಜ್ವಲ್ ದೇವರಾಜ್ ಅಭಿನಯದ ಮಾಫಿಯಾ ಚಿತ್ರ ಬಿಡುಗಡೆಗೆ ಮುಹೂರ್ತ ಫಿಕ್ಸ್ - Mafia Movie Release Date Fix - MAFIA MOVIE RELEASE DATE FIX

ಪ್ರಜ್ವಲ್ ದೇವರಾಜ್ ಅಭಿನಯದ ಮಾಫಿಯಾ ಚಿತ್ರ ಬಿಡುಗಡೆಗೆ ಮುಹೂರ್ತ ಫಿಕ್ಸ್ ಆಗಿದೆ. ಲೋಹಿತ್ ಹೆಚ್. ಅವರು ಮಾಫಿಯಾ ಚಿತ್ರಕ್ಕೆ ಆ್ಯಕ್ಷನ್ ಕಟ್​ ಹೇಳಿದ್ದಾರೆ.

Mafia Movie  Prajwal Devaraj  Mafia film  Movie Release Date Fix
ಪ್ರಜ್ವಲ್ ದೇವರಾಜ್ ಅಭಿನಯದ ಮಾಫಿಯಾ ಚಿತ್ರ ಬಿಡುಗಡೆಗೆ ಮುಹೂರ್ತ ಫಿಕ್ಸ್ (ETV Bharat)

By ETV Bharat Karnataka Team

Published : Jun 19, 2024, 11:17 AM IST

ಮಾಫಿಯಾ ಶೀರ್ಷಿಕೆಯಿಂದಲೇ ಸದ್ದು ಮಾಡುತ್ತಿರುವ ಸಿನಿಮಾ. ಡೈನಾಮಿಕ್ ಪ್ರಿನ್ಸ್ ಪ್ರಜ್ವಲ್ ದೇವರಾಜ್ ಇನ್ಸ್​ಪೆಕ್ಟರ್ ವಿಕ್ರಂ ಚಿತ್ರದ ನಂತರ ಮತ್ತೆ ಖಾಕಿ ಖದರ್​ನಲ್ಲಿ ಸಿನಿಮಾ ಪ್ರೇಮಿಗಳನ್ನು ರಂಜಿಸೋಕ್ಕೆ ಸಜ್ಜಾಗಿದ್ದಾರೆ. ಬಹುತೇಕ ಚಿತ್ರೀಕರಣ ಮುಗಿಸಿರುವ ಮಾಫಿಯಾ ಚಿತ್ರತಂಡ ಈಗ ಬಿಡುಗಡೆ ಡೇಟ್ ​ಅನ್ನು ಅನೌನ್ಸ್​​​​​ ಮಾಡಿದೆ. ಇದೊಂದು ಕಂಟೆಂಟ್ ಆಧಾರಿತ ಚಿತ್ರವಾಗಿದ್ದು, ಲೋಹಿತ್ ಹೆಚ್. ಅವರು ಮಾಫಿಯಾ ಚಿತ್ರಕ್ಕೆ ಆ್ಯಕ್ಷನ್ ಕಟ್​ ಹೇಳಿದ್ದಾರೆ. ಆರಂಭದಿಂದಲೂ ಸಾಕಷ್ಟು ಕುತೂಹಲ ಹುಟ್ಟಿಸಿರುವ ಈ ಚಿತ್ರದ ಬಿಡುಗಡೆಗೆ ಪ್ರಜ್ವಲ್ ದೇವರಾಜ್ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದರು.

ಪ್ರಜ್ವಲ್ ದೇವರಾಜ್ ಜೊತೆಯಾಗಿ ಅದಿತಿ ಪ್ರಭುದೇವ ಅಭಿನಯಿಸಿದ್ದಾರೆ. ಇವರ ಜೊತೆಗೆ ದೇವರಾಜ್, ಸಾಧುಕೋಕಿಲ, ಶೈನ್ ಶೆಟ್ಟಿ, ವಿಜಯ್ ಚೆಂಡೂರ್, ವಾಸುಕಿ ವೈಭವ್ ಮುಂತಾದವರಿದ್ದಾರೆ. ಆ್ಯಕ್ಷನ್ ಜಾನರ್ ಕಥಾ ಹಂದರ ಹೊಂದಿರುವ ಈ ಚಿತ್ರಕ್ಕೆ ಬೆಂಗಳೂರು, ಮೈಸೂರು ಹಾಗೂ ಹೈದರಾಬಾದ್​ನಲ್ಲಿ ಚಿತ್ರೀಕರಣ ನಡೆದಿದೆ.

ಅದ್ದೂರಿಯಾಗಿ ನಿರ್ಮಾಣವಾಗಿರುವ ಈ ಚಿತ್ರದಲ್ಲಿ ಮೈನವಿರೇಳಿಸುವ ಐದು ಸಾಹಸ ಸನ್ನಿವೇಶಗಳಿದೆ. ಈ ಚಿತ್ರಕ್ಕಾಗಿ ಪ್ರಜ್ವಲ್ ದೇವರಾಜ್ ಒಂದಿಷ್ಟು ಮೇಕ್ ಓವರ್ ಮಾಡಿಕೊಂಡು ಈ ಚಿತ್ರದಲ್ಲಿ ಅಭಿನಯಿಸಿದ್ದಾರೆ.

ಈ ಚಿತ್ರದಲ್ಲಿ ನಾಲ್ಕು ಹಾಡುಗಳಿವೆ. ಅನೂಪ್ ಸೀಳಿನ್ ಸಂಗೀತ ನೀಡಿದ್ದಾರೆ. ಎಸ್. ಪಾಂಡಿಕುಮಾರ್ ಛಾಯಾಗ್ರಹಣವಿದೆ. ಬೆಂಗಳೂರು ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ. ಈ ಚಿತ್ರವನ್ನ ನಿರ್ಮಾಣ ಮಾಡಿದ್ದಾರೆ‌. ಸದ್ಯ ಟೀಸರ್​ನಿಂದಲೇ ಗಮನ‌ ಸೆಳೆಯುತ್ತಿರುವ ಮಾಫಿಯಾ ಚಿತ್ರವನ್ನು ಜುಲೈ 26 ರಂದು ಬಿಡುಗಡೆ ಮಾಡಲು ಚಿತ್ರ ತಂಡ ಪ್ಲಾನ್ ಮಾಡಿದೆ.

ಇದನ್ನೂ ಓದಿ:ಬಿಗ್ ಬಾಸ್ ಖ್ಯಾತಿಯ ಕಾರ್ತಿಕ್ ಹೊಸ ಸಿನಿಮಾಗೆ ಸಿಕ್ತು ಅಭಿನಯ ಚಕ್ರವರ್ತಿ ಸಾಥ್​ - Ramarasa Movie

ABOUT THE AUTHOR

...view details