ಬೆಂಗಳೂರು:ಮಹಿಳೆಯರ ಮೇಲಿನಲೈಂಗಿಕ ದೌರ್ಜನ್ಯ ಆರೋಪದಡಿ ನ್ಯಾಯಾಂಗ ಬಂಧನದಲ್ಲಿರುವ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ವಜಾಗೊಂಡಿದೆ.
ಎರಡನೇ ಎಫ್‌ಐಆರ್ ಕುರಿತಾಗಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ವಜಾಗೊಳಿಸಿದ್ದಾರೆ. ಜಾಮೀನು ಸಿಗುವ ನಿರೀಕ್ಷೆಯಲ್ಲಿದ್ದ ಪ್ರಜ್ವಲ್‌ಗೆ ಸೆರೆವಾಸ ಮುಂದುವರೆದಿದ್ದು, ಹೈಕೋರ್ಟ್ ಮೊರೆ ಹೋಗುವುದು ಅನಿವಾರ್ಯವಾಗಿದೆ.
ಲೈಂಗಿಕ ದೌರ್ಜನ್ಯ ಆರೋಪದಡಿ ಹಲವು ಪ್ರಕರಣಗಳು ದಾಖಲಾಗಿದ್ದವು. ಈ ಪೈಕಿ ಎರಡನೇ ಪ್ರಕರಣದಲ್ಲಿ ಪ್ರಜ್ವಲ್ ಅವರನ್ನು ಈವರೆಗೂ ಬಂಧನ ಎಂದು ತೋರಿಸಲಾಗಿಲ್ಲ. ಹೀಗಾಗಿ ನಿರೀಕ್ಷಣಾ ಜಾಮೀನು ಕೋರಿದ್ದರು.