ಕರ್ನಾಟಕ

karnataka

ETV Bharat / state

ಆರ್‌ಎಸ್‌ಎಸ್‌ ಬಗ್ಗೆ ತಿಳಿದುಕೊಳ್ಳದೆ ಮಾತನಾಡಿರುವುದಕ್ಕೆ ಕ್ಷಮಿಸಿ: ಪ್ರಜ್ವಲ್ ರೇವಣ್ಣ - Prajwal Revanna - PRAJWAL REVANNA

ಆರ್‌ಎಸ್‌ಎಸ್‌ ಬಗ್ಗೆ ತಿಳಿದುಕೊಳ್ಳದೆ ಮಾತನಾಡಿದ್ದೇನೆ ಎಂದು ಹಾಸನ ಲೋಕಸಭೆ ಕ್ಷೇತ್ರದ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಕ್ಷಮೆಯಾಚಿಸಿದರು.

ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ
ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ

By ETV Bharat Karnataka Team

Published : Apr 7, 2024, 5:50 PM IST

ಆರ್​ಎಸ್​ಎಸ್ ಸಂಘಟನೆಗೆ ಕ್ಷಮೆಯಾಚಿಸಿದ ಪ್ರಜ್ವಲ್ ರೇವಣ್ಣ

ಹಾಸನ:ರಾಷ್ಟ್ರೀಯ ಸ್ವಯಂ ಸಂಘದ(ಆರ್‌ಎಸ್‌ಎಸ್‌) ಬಗ್ಗೆ ತಿಳಿದುಕೊಳ್ಳದೆ ಮಾತನಾಡಿದ್ದೇನೆ. ಈ ಸಭೆಯಲ್ಲಿ ಆರ್​ಎಸ್​ಎಸ್ ಮುಖಂಡರು, ಕಾರ್ಯಕರ್ತರಿದ್ದರೆ ನನ್ನನ್ನು ಕ್ಷಮಿಸಿ ಎಂದು ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹೇಳಿದರು.

ಸಕಲೇಶಪುರದಲ್ಲಿಂದು ಜೆಡಿಎಸ್ ಮತ್ತು ಬಿಜೆಪಿ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ನನ್ನ ಗಮನಕ್ಕೆ ಬಾರದೆ ಆರ್‌ಎಸ್‌ಎಸ್ ಬಗ್ಗೆ ಮಾತನಾಡಿದ್ದೇನೆ. ಹಾಗಾಗಿ ನಿಮ್ಮೆಲ್ಲರ ಕ್ಷಮೆ ಕೇಳುತ್ತೇನೆ ಎಂದರು.

ನಾನು ಆಯ್ಕೆಯಾದ ಸಂದರ್ಭದಲ್ಲಿ ನನಗೆ 27 ವರ್ಷ ವಯಸ್ಸು. ಐದು ವರ್ಷ ಸಂಸದನಾಗಿ ಕೆಲಸ ಮಾಡಿದ್ದೇನೆ. ಐದು ವರ್ಷ ಮಾಡಿದ ಕೆಲಸ, ಪ್ರಗತಿ ಬಗ್ಗೆ ಯಾರೂ ಪ್ರಶ್ನೆ ಮಾಡಿಲ್ಲ. ಪ್ರಜ್ವಲ್‌ ರೇವಣ್ಣ ಗೆದ್ದರೆ ಬಿಜೆಪಿ ಕಾರ್ಯಕರ್ತರನ್ನು ತೆಗೆದುಕೊಂಡು ಹೋಗುವ ಕೆಲಸ ಮಾಡ್ತಾನಾ ಎಂಬ ಪ್ರಶ್ನೆ ನಿಮ್ಮಲ್ಲಿದೆ. ನಮ್ಮದು ಕಾಂಟ್ರಾಕ್ಟ್ ಮದುವೆ ಅಲ್ಲ. ಐವತ್ತು, ಅರವತ್ತು ವರ್ಷ ಕೊಂಡೊಯ್ಯುವ ಸಂಬಂಧ ಎಂದು ರಾಧಾ ಮೋಹನ್ ದಾಸ್ ಹೇಳಿದ್ದಾರೆ. ಜೆಡಿಎಸ್-ಬಿಜೆಪಿಯ ಪ್ರತಿಯೊಬ್ಬ ಕಾರ್ಯಕರ್ತರನ್ನೂ ಗೌರವಿಸಿ, ಒಗ್ಗಟ್ಟಾಗಿ ಕರೆದುಕೊಂಡು ಹೋಗುವ ಕೆಲಸ ಮಾಡುತ್ತೇನೆ. ನಿಮ್ಮೆಲ್ಲರ ಆಶೀರ್ವಾದ ನನ್ನ ಮೇಲಿರಲಿ ಎಂದು ಮನವಿ ಮಾಡಿದರು.

ನಾನು ಐದು ವರ್ಷದಲ್ಲಿ ಸಣ್ಣಪುಟ್ಟ ತಪ್ಪುಗಳನ್ನು ಮಾಡಿದ್ದರೆ ಕ್ಷಮಿಸಿ. ಒಬ್ಬ ಯುವಕ ನಡೆಯುವಾಗ ಎಡವುತ್ತಾನೆ, ಈಗ ಸಣ್ಣಪುಟ್ಟ ವಿಚಾರಗಳಲ್ಲಿ ಎಡವಿದ್ರೆ, ತಪ್ಪು ತಿದ್ದಿಕೋ‌ ಎಂದು ಸಂದೇಶ ಕೊಟ್ಟರೆ ಕೈ ಮುಗಿದು ನಮಸ್ಕಾರ ಮಾಡುತ್ತೇನೆ. ದಯವಿಟ್ಟು ನನ್ನ ಮೇಲೆ ವಿಶ್ವಾಸವಿಡಿ. ತಪ್ಪುಗಳನ್ನು ಸರಿ ಮಾಡಿಕೊಂಡು ಯಾರಿಗೂ ಕೆಟ್ಟ ಹೆಸರು ಬಾರದೆ ಕೆಲಸ ಮಾಡುತ್ತೇನೆ. ಒಬ್ಬ ಸಂಸದನಾಗಿ ಅಲ್ಲ, ಒಬ್ಬ ಕಾರ್ಯಕರ್ತನಾಗಿ ಕೆಲಸ ಮಾಡುತ್ತೇನೆ ಎಂದು ತಿಳಿಸಿದರು.

400 ಸೀಟ್ ಗೆಲ್ಲಿಸುವ ಮೂಲಕ ಮತ್ತೊಮ್ಮೆ ನರೇಂದ್ರ ಮೋದಿ ಅವರು ಪ್ರಧಾನ ಮಂತ್ರಿಯಾಗಬೇಕು. ಅದರಲ್ಲಿ ನಾನೊಬ್ಬ ಕೂಡಾ ಇರಲು ಅವಕಾಶ ಮಾಡಿ ಕೊಡಿ‌ ಎಂದು ಪ್ರಜ್ವಲ್ ರೇವಣ್ಣ ಮನವಿ ಮಾಡಿದರು.

ಇದನ್ನೂ ಓದಿ:'ಸೊಕ್ಕಿನಿಂದ ಮೆರೆಯುವ ಬಿಎಸ್​ವೈ ಮಕ್ಕಳನ್ನು ಸೋಲಿಸಲು ನನಗೆ ಮತ ನೀಡುತ್ತೇವೆ ಅಂತಿದ್ದಾರೆ ಜನ' - K S Eshwarappa

ABOUT THE AUTHOR

...view details