ಕರ್ನಾಟಕ

karnataka

ETV Bharat / state

ಅತ್ಯಾಚಾರ ಆರೋಪ ಪ್ರಕರಣ: ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಜಾ - Prajwal Revanna - PRAJWAL REVANNA

ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿ ವಜಾಗೊಳಿಸಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.

prajwal-revanna
ಪ್ರಜ್ವಲ್ ರೇವಣ್ಣ (ETV Bharat)

By ETV Bharat Karnataka Team

Published : Jun 26, 2024, 4:03 PM IST

Updated : Jun 26, 2024, 5:29 PM IST

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ಹಾಸನದ ಮಾಜಿ ಜೆಡಿಎಸ್‌ ಸಂಸದ ಪ್ರಜ್ವಲ್ ರೇವಣ್ಣ ಅವರು ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ನ್ಯಾಯಾಲಯ ವಜಾಗೊಳಿಸಿದೆ. ನಗರದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ(ಸೆಷನ್ಸ್ ಕೋರ್ಟ್) ನ್ಯಾಯಾಧೀಶ ಗಜಾನನ ಭಟ್, ಈ ಕುರಿತು ಆದೇಶ ಪ್ರಕಟಿಸಿದರು.

ಇದೇ ಪ್ರಕರಣದಲ್ಲಿ ಎರಡನೇ ಆರೋಪಿಯಾಗಿರುವ ಹೊಳೆನರಸೀಪುರ ಜೆಡಿಎಸ್ ಶಾಸಕ ಹಾಗು ಪ್ರಜ್ವಲ್ ರೇವಣ್ಣನವರ ತಂದೆ ಹೆಚ್.ಡಿ.ರೇವಣ್ಣ ಜಾಮೀನು ಪಡೆದುಕೊಂಡಿದ್ದರು. ಈ ಜಾಮೀನು ರದ್ದತಿ ಕೋರಿ ರಾಜ್ಯ ಸರ್ಕಾರ ಹೈಕೋರ್ಟ್ ಮೆಟ್ಟಿಲೇರಿದೆ.

ಪ್ರಜ್ವಲ್ ರೇವಣ್ಣ ಪ್ರಕರಣದ ವಿವರ:ಅತ್ಯಾಚಾರ ಆರೋಪದಲ್ಲಿ ಪ್ರಜ್ವಲ್ ರೇವಣ್ಣ ಹಾಗೂ ಹೆಚ್‌.ಡಿ.ರೇವಣ್ಣ ವಿರುದ್ಧ ಹೊಳೆನರಸೀಪುರ ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿತ್ತು. ಈ ಎಫ್ಐಆರ್‌ನಲ್ಲಿ ಹೆಚ್‌.ಡಿ.ರೇವಣ್ಣ ಮೊದಲ ಆರೋಪಿಯಾದರೆ, ಪ್ರಜ್ವಲ್ ರೇವಣ್ಣ 2ನೇ ಆರೋಪಿಯಾಗಿದ್ದಾರೆ. ಈ ಹಿಂದೆ ರೇವಣ್ಣನವರ ಮನೆಯಲ್ಲಿ ಕೆಲಸ ಮಾಡುತ್ತಿದ್ದ ಮಹಿಳೆ, ತನ್ನ ಮೇಲೆ ಲೈಂಗಿಕ ದೌರ್ಜನ್ಯ ನಡೆದಿರುವ ಬಗ್ಗೆ ಪೊಲೀಸರಿಗೆ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಮಹಿಳೆಯ ಘನತೆಗೆ ಧಕ್ಕೆ ತಂದ ಆರೋಪ ಸೇರಿದಂತೆ ಐಪಿಸಿ ಸೆಕ್ಷನ್‌ಗಳಾದ 354ಎ, 354ಡಿ ಹಾಗೂ 509ರ ಅಡಿಯಲ್ಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ್ದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ (ಮ್ಯಾಜಿಸ್ಟ್ರೇಟ್) ಪ್ರಜ್ವಲ್​ರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತ್ತು.

ಇದನ್ನೂ ಓದಿ:ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ: ಪ್ರಜ್ವಲ್ ರೇವಣ್ಣಗೆ 14 ದಿನಗಳ ನ್ಯಾಯಾಂಗ ಬಂಧನ - Prajwal Revanna

Last Updated : Jun 26, 2024, 5:29 PM IST

ABOUT THE AUTHOR

...view details