ಕರ್ನಾಟಕ

karnataka

ETV Bharat / state

ಪ್ರಜ್ವಲ್ ರೇವಣ್ಣ ವಿಡಿಯೋ ಹಂಚಿಕೆ ಆರೋಪ: ಹೈಕೋರ್ಟ್​ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ - Prajwal Revanna Videos Case - PRAJWAL REVANNA VIDEOS CASE

ಪೆನ್ ಡ್ರೈವ್ ಹಂಚಿಕೆ ಪ್ರಕರಣದಲ್ಲಿ ಬಂಧನ ಭೀತಿಯಲ್ಲಿದ್ದ ಆರೋಪಿಗಳು ಹೈಕೋರ್ಟ್​ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದಾರೆ.

ಹೈಕೋರ್ಟ್
ಹೈಕೋರ್ಟ್ (ETV Bharat)

By ETV Bharat Karnataka Team

Published : May 24, 2024, 9:04 PM IST

Updated : May 24, 2024, 9:22 PM IST

ಬೆಂಗಳೂರು: ಪ್ರಜ್ವಲ್ ರೇವಣ್ಣ ಅವರದು ಎನ್ನಲಾದ ಅಶ್ಲೀಲ ಫೋಟೋ ಹಾಗೂ ವಿಡಿಯೋಗಳನ್ನು ಹಂಚಿಕೆ ಮಾಡಿದ ಪ್ರಕರಣದಲ್ಲಿ ಬಂಧನ ಭೀತಿ ಎದುರಿಸುತ್ತಿರುವ ನಾಲ್ವರು ಆರೋಪಿಗಳು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ.

ಪ್ರಕರಣದ ಆರೋಪಿಗಳಾದ ನವೀನ್ ಗೌಡ ಅಲಿಯಾಸ್ ಎನ್.ಆರ್.ನವೀನ್ ಕುಮಾರ್, ಎನ್.ಕಾರ್ತಿಕ್, ಬಿ.ಸಿ.ಚೇತನ್ ಕುಮಾರ್ ಮತ್ತು ಹೆಚ್.ವಿ. ಪುಟ್ಟರಾಜು ನಿರೀಕ್ಷಣಾ ಜಾಮೀನು ಕೋರಿ ಹೈಕೋರ್ಟ್​​ಗೆ ಪ್ರತ್ಯೇಕ ಕ್ರಿಮಿನಲ್ ಅರ್ಜಿ ಸಲ್ಲಿಸಿದ್ದಾರೆ. ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ರಾಚಯ್ಯ ಅವರ ರಜಾಕಾಲದ ಪೀಠ, ಪ್ರತಿವಾದಿಯಾಗಿರುವ ಹಾಸನದ ಸಿಇಎನ್ ಠಾಣಾ (ರಾಜ್ಯ ಸರ್ಕಾರ) ಪೊಲೀಸರಿಗೆ ನೋಟಿಸ್ ಜಾರಿ ಮಾಡಿದೆ. ಅಲ್ಲದೇ, ಅರ್ಜಿಗೆ ಆಕ್ಷೇಪಣೆ ಸಲ್ಲಿಸುವಂತೆ ಪೊಲೀಸರಿಗೆ ನಿರ್ದೇಶಿಸಿ ವಿಚಾರಣೆ ಮುಂದೂಡಿದೆ.

ಪ್ರಕರಣದ ಹಿನ್ನೆಲೆ:ಪ್ರಕರಣ ಸಂಬಂಧ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಹಾಗೂ ಬಿಜೆಪಿ ಚುನಾವಣಾ ಏಜೆಂಟ್ ಆಗಿದ್ದ ಎಂ.ಜಿ. ಪೂರ್ಣಚಂದ್ರ ತೇಜಸ್ವಿ ಅವರು ಹಾಸನ ಸಿಇಎನ್ ಪೊಲೀಸ್ ಠಾಣೆಗೆ 2024ರ ಏ.23ರಂದು ದೂರು ನೀಡಿದ್ದರು. ಹಾಸನ ಲೋಕಸಭೆ ಕ್ಷೇತ್ರದ ಚುನಾವಣೆ ಏ.26ರಂದು ನಿಗದಿಯಾಗಿತ್ತು. ಆರೋಪಿಗಳಾದ ನವೀನ್‌ಗೌಡ ಹಾಗೂ ಇತರರು ಏ.21ರಂದು ಸಂಜೆ 6.30ರಿಂದ ಹಾಸನ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿರುವ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರ ನಕಲಿ ಅಶ್ಲೀಲ ಭಾವಚಿತ್ರ ಮತ್ತು ವಿಡಿಯೋಗಳನ್ನು ಒಳಗೊಂಡ ಸಿಡಿ ಹಾಗೂ ಪೆನ್​ಡ್ರೈವ್ ಸಿದ್ಧಪಡಿಸಿಕೊಂಡಿದ್ದಾರೆ. ಬಳಿಕ ಕ್ಷೇತ್ರ ವ್ಯಾಪ್ತಿಯ ಮನೆ ಮನೆಗೆ ತೆರಳಿ ಮತದಾರರಿಗೆ ಹಂಚಿದ್ದಾರೆ. ವಾಟ್ಸ್​ಆ್ಯಪ್/ಮೊಬೈಲ್​ಗಳಲ್ಲಿ ತೋರಿಸಿ ಜನರಿಗೆ ದಿಕ್ಕು ತಪ್ಪಿಸಿ ಪ್ರಜ್ವಲ್ ರೇವಣ್ಣಗೆ ಮತ ಹಾಕದಂತೆ ಪ್ರಚೋದಿಸುತ್ತಿದ್ದಾರೆ. ಆ ಮೂಲಕ ಚುನಾವಣೆಯಲ್ಲಿ ನ್ಯಾಯಯುತ ಮತದಾನ ನಡೆಯುವುದನ್ನು ತಪ್ಪಿಸುವ ದುಷ್ಕೃತ್ಯ ಎಸಗಿದ್ದಾರೆ ಎಂದು ದೂರುದಾರರು ಆರೋಪಿಸಿದ್ದರು.

ಇದನ್ನೂ ಓದಿ: ಪೊಲೀಸರಿಗೆ ಶರಣಾಗದಿದ್ದಲ್ಲಿ ಏಕಾಂಗಿಯಾಗುವೆ: ಕುಟುಂಬದಿಂದಲೇ ಹೊರಹಾಕುವುದಾಗಿ ಪ್ರಜ್ವಲ್​​ಗೆ ಎಚ್ಚರಿಕೆ ನೀಡಿದ ದೇವೇಗೌಡ - DEVEGOWDA wrote letter to Prajwal

ಈ ದೂರಿನ ಮೇರೆಗೆ ಅರ್ಜಿದಾರ ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 171 (ಜಿ) ಮತ್ತು ಮಾಹಿತಿ ತಂತ್ರಜ್ಞಾನ ಕಾಯ್ದೆಯ ಸೆಕ್ಷನ್ 67(ಎ) ಅಡಿಯಲ್ಲಿ ಚುನಾವಣಾ ಫಲಿತಾಂಶದ ಮೇಲೆ ಪರಿಣಾಮ ಬೀರಲು ಸುಳ್ಳು ಹೇಳಿಕೆ ಪ್ರಕಟಿಸಿದ, ವಿದ್ಯುನ್ಮಾನ ರೂಪದಲ್ಲಿ ಅಶ್ಲೀಲ ಫೋಟೋ ಹಾಗೂ ವಿಡಿಯೋ ಪ್ರಕಟಿಸಿದ ಮತ್ತು ರವಾನಿಸಿದ ಆರೋಪ ಸಂಬಂಧ ಪೊಲೀಸರು ಎಫ್‌ಐಆರ್ ದಾಖಲಿಸಿದ್ದರು. ಇದರಿಂದ ಬಂಧನ ಭೀತಿ ಎದುರಾದ ಹಿನ್ನೆಲೆಯಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಗಳು ನಿರೀಕ್ಷಣಾ ಜಾಮೀನು ಕೋರಿ ಹಾಸನದ 5ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅದನ್ನು ವಿಚಾರಣಾ ನ್ಯಾಯಾಲಯ ವಜಾಗೊಳಿಸಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಇದನ್ನೂ ಓದಿ: ಪ್ರಜ್ವಲ್​ಗೆ ನಿಜವಾದ ಸಂಕಷ್ಟ ಶುರು: ರಾಜತಾಂತ್ರಿಕ ಪಾಸ್‌ಪೋರ್ಟ್ ಏಕೆ ರದ್ದುಗೊಳಿಸಬಾರದು ಎಂದು MEA ಶೋಕಾಸ್ ನೋಟಿಸ್ ಜಾರಿ! - MEA Showcause To Prajwal Revanna

Last Updated : May 24, 2024, 9:22 PM IST

ABOUT THE AUTHOR

...view details