ಕರ್ನಾಟಕ

karnataka

ETV Bharat / state

ಚತುರ್ಥಿ ಪ್ರಸಾದಕ್ಕೆ ಪರವಾನಗಿ: 'ರಾಜ್ಯ ಸರ್ಕಾರದ್ದು ಹುಚ್ಚು ಆದೇಶ, ಅಗತ್ಯ ಬಿದ್ದರೆ ಧಿಕ್ಕರಿಸಿ': ಪ್ರಹ್ಲಾದ್ ಜೋಶಿ ಕರೆ - license for Chaturthi Prasada

ಗಣೇಶ ಚತುರ್ಥಿ ಹಿನ್ನೆಲೆ ಪೆಂಡಾಲ್​​ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಿಗೆ ಪಡೆಯಬೇಕು ಎಂದಿರುವ ಸರ್ಕಾರದ ವಿರುದ್ಧ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರಾಜ್ಯ ಸರ್ಕಾರದ ಪ್ರಸಾದಕ್ಕೆ ಪರವಾನಗಿ ಆದೇಶಕ್ಕೆ  ಸಚಿವ ಪ್ರಹ್ಲಾದ್​ ಜೋಶಿ ವಿರೋಧ
ರಾಜ್ಯ ಸರ್ಕಾರದ ಪ್ರಸಾದಕ್ಕೆ ಪರವಾನಗಿ ಆದೇಶಕ್ಕೆ ಸಚಿವ ಪ್ರಹ್ಲಾದ್​ ಜೋಶಿ ವಿರೋಧ (ETV Bharat)

By ETV Bharat Karnataka Team

Published : Sep 7, 2024, 8:25 AM IST

Updated : Sep 7, 2024, 9:23 AM IST

ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ (ETV Bharat)

ಹುಬ್ಬಳ್ಳಿ:ಗಣೇಶ ಪೆಂಡಾಲ್​​ಗಳಲ್ಲಿ ಪ್ರಸಾದ ಸಿದ್ಧಪಡಿಸಲು ಆಹಾರ ಸುರಕ್ಷತಾ ಇಲಾಖೆ ಪರವಾನಿಗೆ ಪಡೆಯಬೇಕು ಎಂದಿರುವ ರಾಜ್ಯ ಸರ್ಕಾರದ ಆದೇಶಕ್ಕೆ ಕೇಂದ್ರ ಸಚಿವ ಪ್ರಹ್ಲಾದ್​ ಜೋಶಿ ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ನಿನ್ನೆ ಮಾತನಾಡಿ‌ದ ಅವರು, ರಾಜ್ಯ ಆಹಾರ ಇಲಾಖೆ ಹುಚ್ಚರ ರೀತಿಯಲ್ಲಿ ಇಂಥ ಆದೇಶ ಹೊರಡಿಸಿದೆ ಅಷ್ಟೇ. ಎಂಪ್ಯಾನಲ್ ಆದವರಿಂದಲೇ ಪ್ರಸಾದ ತಯಾರಿಸಬೇಕು ಎಂದಿರುವ ರಾಜ್ಯ ಸರ್ಕಾರದ ಈ ಸೂಚನೆ ಸರಿಯಲ್ಲ. ಗಣೇಶ ಹಬ್ಬದ ವೇಳೆ ದೇಶಾದ್ಯಂತ, ರಾಜ್ಯಾದ್ಯಂತ ಬಹಳ ಧಾರ್ಮಿಕ ಕಾರ್ಯಕ್ರಮಗಳು ನಡೆಯುತ್ತವೆ. ಆಹಾರ ಸುರಕ್ಷತಾ ಕ್ರಮ ಕೈಗೊಳ್ಳುವುದು ಸರಿ. ಆದರೆ, ಹೀಗೆ ಹುಚ್ಚರ ರೀತಿ ಅಲ್ಲ ಎಂದು ರಾಜ್ಯ ಸರ್ಕಾರವನ್ನು ಟೀಕಿಸಿದ್ದಾರೆ.

ಹಿಂದೂ ಹಬ್ಬಕ್ಕೆ ತೊಂದರೆ ಕೊಡಲೆಂದೇ ಈ ಕ್ರಮ: ರಾಜ್ಯದಲ್ಲಿ ಹಿಂದೂ ಹಬ್ಬಕ್ಕೆ ತೊಂದರೆ ಕೊಡಲೆಂದೇ ರಾಜ್ಯ ಸರ್ಕಾರದಿಂದ ಇಂಥ ಆದೇಶ ಹೊರ ಬಿದ್ದಿದೆ. ಗಣೇಶ ಪ್ರತಿಷ್ಠಾಪನೆ ಮಾಡುವ ಸಂಘಟಕರು ಇದಕ್ಕೆ ಕಿವಿಗೊಡಬೇಕಿಲ್ಲ. ಎಲ್ಲಾದರೂ ದುರುದ್ದೇಶದಿಂದ ಪ್ರಸಾದದಲ್ಲಿ ವಿಷ ಬೆರೆಸುವಂತ ಪ್ರಕರಣ ನಡೆದರೆ ಕ್ರಿಮಿನಲ್​ ಕೇಸ್ ದಾಖಲಿಸಲಿ. ಆದರೆ ಸರ್ಕಾರವೇ ಹೀಗೆ ದುರುದ್ದೇಶ ಇಟ್ಟುಕೊಂಡು ಆದೇಶ ಹೊರಡಿಸಿದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ.

ಹಿಂದೂ ಹಬ್ಬದಲ್ಲಷ್ಟೇ ಆಹಾರ ಸುರಕ್ಷೆ ನೆನಪಾಗುತ್ತೆದೆಯೇ?: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹಿಂದೂಗಳ ಹಬ್ಬ ಬಂದಾಗ ಮಾತ್ರ ಆಹಾರ ಸುರಕ್ಷತಾ ನಿಯಮ ಇರೋದು ನೆನಪಾಗುತ್ತದೆಯೇ? ಎಂದ ಸಚಿವ ಜೋಶಿ ಇಫ್ತಿಯಾರ್ ಕೂಟ ಇದ್ದಾಗ ಇಂಥ ಆದೇಶ ಹೊರಡಿಸಿ ನೋಡೋಣ ಎಂದು ಸವಾಲು ಹಾಕಿದರು.

ಸ್ವಚ್ಛತೆ, ಶುಚಿತ್ವ ಕಾಪಾಡಿಕೊಳ್ಳಿ: ಗಣೇಶ ಪೆಂಡಾಲ್​ಗಳಲ್ಲಿ ಪ್ರಸಾದ ತಯಾರಿಕೆ ವೇಳೆ ಸ್ವಚ್ಛತೆ, ಶುಚಿತ್ವ ಕಾಪಾಡಿಕೊಳ್ಳಬೇಕು. ಅಗತ್ಯ ಬಿದ್ದರೆ ರಾಜ್ಯ ಸರ್ಕಾರದ ಈ ಆದೇಶ ಧಿಕ್ಕರಿಸಿ ಎಂದು ಕರೆ ಕೊಟ್ಟರು.

ಇದನ್ನೂ ಓದಿ:ಶ್ರೀ ಸತ್ಯಗಣಪತಿ ದೇವಸ್ಥಾನದಲ್ಲಿ ವೈಭವದ ಗಣೇಶೋತ್ಸವ; 36 ವಿಧದ ಹಣ್ಣು - ಹೂವುಗಳಿಂದ ಅಲಂಕಾರ - Sathyaganapati Temple

Last Updated : Sep 7, 2024, 9:23 AM IST

ABOUT THE AUTHOR

...view details