ಮೈಸೂರು: "ಮಳೆಗಾಲ ಆಗಿರುವುದರಿಂದ ಸಾಮಾನ್ಯವಾಗಿ ಡೆಂಗ್ಯೂ ಪ್ರಕರಣಗಳು ಹೆಚ್ಚಾಗುತ್ತವೆ. ಆದ್ದರಿಂದ ಡೆಂಗ್ಯೂ ಪ್ರಕರಣಗಳ ನಿಯಂತ್ರಣಕ್ಕೆ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ" ಎಂದು ಮೈಸೂರಿನಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.
ಸಚಿವ ದಿನೇಶ್ ಗುಂಡೂರಾವ್ (ETV Bharat) ನಗರದಲ್ಲಿಂದು ಮಾಧ್ಯಮಗಳ ಜತೆ ಮಾತನಾಡಿದ ಅವರು, ಚಿಕ್ಕಮಗಳೂರು ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಡೆಂಗ್ಯೂ ಪ್ರಕರಣಗಳು ವರದಿಯಾಗಿವೆ. ಆದರೂ ಡೆಂಗ್ಯೂ ಪೀಡಿತರಲ್ಲಿ ಸಾವಿನ ಪ್ರಮಾಣ ಕಡಿಮೆ ಇದೆ. ಡೆಂಗ್ಯೂ ನಿಯಂತ್ರಣಕ್ಕೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇದರ ನಡುವೆ ಜನರು ಸಹ ಮುನ್ನೆಚ್ಚರಿಕೆ ವಹಿಸಬೇಕು. ನೀರು ನಿಂತರೆ ಡೆಂಗ್ಯೂ ಹರಡುವ ಸೊಳ್ಳೆಗಳು ಹೆಚ್ಚಾಗುತ್ತವೆ. ಹಾಗಾಗಿ ಮನೆಯ ಮುಂದೆ ನೀರು ನಿಲ್ಲದಂತೆ ನೋಡಿಕೊಳ್ಳಬೇಕು. ಆ ಮೂಲಕ ಸಾರ್ವಜನಿಕರು ಡೆಂಗ್ಯೂ ನಿಯಂತ್ರಣಕ್ಕೆ ಸಹಕರಿಸಬೇಕು" ಎಂದು ಸಚಿವರು ಮನವಿ ಮಾಡಿದರು.
ಬೈ ಎಲೆಕ್ಷನ್ ಗೆಲುವು ನಮ್ಮ ಗುರಿ:"ಡಿ.ಕೆ. ಶಿವಕುಮಾರ್ಗೆ ಈಗ ಚನ್ನಪಟ್ಟಣ ನೆನಪಾಯಿತಾ ಎಂಬ ಹೆಚ್.ಡಿ. ಕುಮಾರಸ್ವಾಮಿ ಆರೋಪಕ್ಕೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಿ.ಕೆ. ಸುರೇಶ್ ಸಂಸದರಾಗಿ ಒಳ್ಳೆಯ ಕೆಲಸ ಮಾಡಿದ್ದಾರೆ. ಚುನಾವಣೆ ಬಂದಾಗ ತಂತ್ರಗಾರಿಕೆ ಮಾಡುವುದು ಸಾಮಾನ್ಯ. ಬೈ ಎಲೆಕ್ಷನ್ ನಡೆಯುವ ಮೂರು ಕಡೇ ಉಸ್ತುವಾರಿಗಳನ್ನು ನೇಮಕ ಮಾಡಲಾಗಿದೆ. ಅವರು ಕ್ಷೇತ್ರದ ಮತದಾರರ ಅಭಿಪ್ರಾಯ ಸಂಗ್ರಹಿಸಿ, ಯಾರು ಅಭ್ಯರ್ಥಿಯಾಗಬೇಕು ಎಂಬುದನ್ನು ಜನಾಭಿಪ್ರಾಯದ ಮೂಲಕ ಸಂಗ್ರಹಿಸುತ್ತಾರೆ. ಗೆಲ್ಲುವ ಅಭ್ಯರ್ಥಿಯನ್ನು ಆಯ್ಕೆ ಮಾಡುತ್ತೇವೆ. ಬೈ ಎಲೆಕ್ಷನ್ ನಡೆಯುವ ಮೂರು ಕ್ಷೇತ್ರಗಳನ್ನು ಗೆಲ್ಲಬೇಕೆಂಬುದು ನಮ್ಮ ಗುರಿ" ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿಕೆ ನೀಡಿದರು.
ಇದನ್ನೂ ಓದಿ:ಡಯಾಲಿಸಿಸ್ ತಡವಾದರೆ ಜೀವಕ್ಕೆ ಕುತ್ತು; ರೋಗಿಗಳ ಆರೋಗ್ಯ ಸುಧಾರಣೆಯತ್ತ ಗುರಿನೆಟ್ಟ ಸರ್ಕಾರ - kidney dialysis