ಕರ್ನಾಟಕ

karnataka

ETV Bharat / state

ತ್ರಿವೇಣಿ ಸಂಗಮದಲ್ಲಿ ಮೂರು ದಿನ ಕುಂಭಮೇಳ ; ಸುತ್ತೂರು ಸ್ವಾಮೀಜಿ ನೇತೃತ್ವದಲ್ಲಿ ಪೂರ್ವಭಾವಿ ಸಭೆ - KUMBHA MELA

2025 ರ ಫೆಬ್ರವರಿ 10, 11 ಹಾಗೂ 12ನೇ ತಾರೀಖಿನಂದು ಟಿ. ನರಸೀಪುರ ಬಳಿಯ ತ್ರಿವೇಣಿ ಸಂಗಮದಲ್ಲಿ ಮೂರು ದಿನಗಳ ಕಾಲ 12ನೇ ಮಹಾ ಕುಂಭಮೇಳ ನಡೆಯುತ್ತಿದೆ.

suttur-swamiji
ಸುತ್ತೂರು ಶ್ರೀ ಹಾಗೂ ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ಸೇರಿದಂತೆ ಇತರ ಸ್ವಾಮೀಜಿ (ETV Bharat)

By ETV Bharat Karnataka Team

Published : Dec 26, 2024, 7:59 PM IST

ಮೈಸೂರು : ಮುಂದಿನ ವರ್ಷ ಫೆಬ್ರವರಿ ತಿಂಗಳಿನಲ್ಲಿ ಮೂರು ದಿನ ಜಿಲ್ಲೆಯ ಟಿ. ನರಸೀಪುರ ಬಳಿಯ ತ್ರಿವೇಣಿ ಸಂಗಮದಲ್ಲಿ ಮಹಾಕುಂಭ ಮೇಳ ನಡೆಯಲಿದೆ. ಈ ಹಿನ್ನೆಲೆ ಇಂದು ಮೈಸೂರಿನ ಸುತ್ತೂರು ಶಾಖಾ ಮಠದಲ್ಲಿ ಸ್ವಾಮೀಜಿಗಳ ನೇತೃತ್ವದಲ್ಲಿ ಕುಂಭಮೇಳ ಪೂರ್ವಭಾವಿ ಸಭೆ ನಡೆಯಿತು.

ಸುತ್ತೂರು ಶ್ರೀ ಹಾಗೂ ಆದಿಚುಂಚನಗಿರಿಯ ನಿರ್ಮಲಾನಂದನಾಥ ಸ್ವಾಮೀಜಿ ನೇತೃತ್ವದಲ್ಲಿ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕಾಂತ್‌ ರೆಡ್ಡಿ, ಎಸ್. ಪಿ ವಿಷ್ಣುವರ್ಧನ್‌ ಸೇರಿದಂತೆ ಜಿಲ್ಲೆಯ ಹಲವು ಉನ್ನತಾಧಿಕಾರಿಗಳ ನೇತೃತ್ವದಲ್ಲಿ ಕುಂಭಮೇಳದ ಪೂರ್ವಭಾವಿ ಸಭೆ ನಡೆಯಿತು.

ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಹಾಗೂ ನಿರ್ಮಲಾನಂದನಾಥ ಸ್ವಾಮೀಜಿ ಮಾತನಾಡಿದರು (ETV Bharat)

ಪ್ರತಿ ಮೂರು ವರ್ಷಕ್ಕೊಮ್ಮೆ ಮಹಾಕುಂಭಮೇಳ ನಡೆಯಬೇಕು. ಆದರೆ ಕೊರೊನಾದಿಂದಾಗಿ ರದ್ದಾಗಿದ್ದ ಮಹಾ ಕುಂಭಮೇಳ 6 ವರ್ಷದ ಬಳಿಕ 2025ರ ಫೆಬ್ರವರಿ ತಿಂಗಳ 10, 11 ಮತ್ತು 12ನೇ ತಾರೀಖಿನಂದು 12ನೇ ಮಹಾ ಕುಂಭಮೇಳ ನಡೆಯುತ್ತಿದೆ.

ಕುಂಭಮೇಳದ ಧಾರ್ಮಿಕ ಕಾರ್ಯಕ್ರಮಗಳು :ಫೆ. 10 ರಂದು ಪ್ರಾತಃ ಕಾಲದಲ್ಲಿ ಸಂಕಲ್ಪ, ಗಣಪತಿ ಹೋಮ, ಅಗಸ್ತ್ಯ ದೇವಾಲಯದಲ್ಲಿ ರುದ್ರಾಭಿಷೇಕ, ಸಂಜೆ ಧಾರ್ಮಿಕ ಸಭೆ ಹಾಗೂ ಸಾಂಸ್ಕೃತಿಕಾ ಕಾರ್ಯಕ್ರಮಗಳು ಜರುಗಲಿವೆ.

ಫೆ. 11 ರಂದು ಆಶ್ಲೇಷ ಪ್ರಾತಃ ಪುಣ್ಯ ನವಗ್ರಹ ಹೋಮ, ಸುದರ್ಶನ ಹೋಮ, ಧಾರ್ಮಿಕ ಸಭೆ ನಡೆಯಲಿದೆ. ನಂತರ ಸಂತರ ಹಾಗೂ ಮಹಾ ಮಂಡಲೇಶ್ವರರ ಸಂಗಮ ಕ್ಷೇತ್ರ ಪ್ರವೇಶವಾಗಲಿದೆ. ಅನಂತರ ವಾರಣಾಸಿ ಮಾದರಿಯಲ್ಲಿ ದೀಪಾರತಿ ಜರುಗಲಿದೆ.

ಫೆ.12 ಚಂಡಿಕಾ ಹೋಮ, ಪೂರ್ಣಾಹುತಿ, ತ್ರಿವೇಣಿ ಸಂಗಮದಲ್ಲಿ ಸಪ್ತ ಪವಿತ್ರ ನದಿಗಳಿಂದ ತಂದ ತೀರ್ಥ ಸಂಯೋಜನೆ, ಪುಣ್ಯಸ್ನಾನ, ಧರ್ಮಸಭೆ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿವೆ.

ದಕ್ಷಿಣ ಭಾರತದ ಮಹಾ ಕುಂಭಮೇಳಕ್ಕೆ ಜಿಲ್ಲಾಡಳಿತ ಹಾಗೂ ಸರ್ಕಾರದಿಂದಲೂ ಸಕಲ ಸಿದ್ಧತೆ ನಡೆದಿದೆ. ಪೊಲೀಸ್ ಭದ್ರತೆ, ಮೂಲ ಸೌಕರ್ಯಗಳಾದ ಕುಡಿಯುವ ನೀರು, ಸ್ವಚ್ಛತೆ, ವೇದಿಕೆ ನಿರ್ಮಾಣ ಸೇರಿದಂತೆ ಹಲವು ವಿಚಾರಗಳ ಚರ್ಚೆಯಾಗಿದೆ.

ಸುತ್ತೂರು ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ ಮನವಿ : ಕುಂಭಮೇಳಕ್ಕೆ ಎಲ್ಲಾ ಸಿದ್ಧತೆ ಮಾಡಿಕೊಳ್ಳಬೇಕಿದೆ. ಸಚಿವರ ನೇತೃತ್ವದಲ್ಲಿ ಮತ್ತೊಂದು ಸಭೆ ನಡೆಸಲಾಗುತ್ತದೆ. ಕುಂಭಮೇಳ ನಡೆಯುವ ಸ್ಥಳದಲ್ಲಿ ಶಾಶ್ವತ ಕಾಮಗಾರಿಗಳು ಆಗಬೇಕಿವೆ. ಇದರ ಬಗ್ಗೆ ಸರ್ಕಾರದ ಗಮನಕ್ಕೆ ತರಬೇಕಿದೆ. ಕುಂಭಮೇಳ ಯಶಸ್ವಿಗೆ ಅಧಿಕಾರ ಪಾತ್ರ ದೊಡ್ಡದು. ಸಾರ್ವಜನಿಕರು ಕೂಡ ಇದಕ್ಕೆ ಕೈ ಜೋಡಿಸಬೇಕಿದೆ ಎಂದು ಮನವಿ ಮಾಡಿದರು.

ನಿರ್ಮಲಾನಂದನಾಥ ಸ್ವಾಮೀಜಿ ಹೇಳಿದ್ದೇನು ?ಜಗತ್ತಿನ ಎಲ್ಲಾ ನಾಗರೀಕತೆಗಳು ಬೆಳೆದಿದ್ದು ನದಿ ಪಾತ್ರದಲ್ಲೆ. ಈ ಬಾರಿ 12ನೇ ಮಹಾ ಕುಂಭಮೇಳ ನಡೆಯುತ್ತಿದೆ. ನಮ್ಮ ಹಿರಿಯರು, ದಾರ್ಶನಿಕರು ನಮಗೆ ದಾರಿ ಹಾಕಿಕೊಟ್ಟಿದ್ದಾರೆ. ಈ ಕುಂಭಮೇಳಕ್ಕೆ ಎಲ್ಲಾ ಸರ್ಕಾರಗಳು ಸಹಕಾರ ನೀಡುತ್ತಾ ಬಂದಿವೆ. ಕುಂಭಮೇಳಕ್ಕೆ ಆಗಮಿಸುವ ಜನರು, ದಾರ್ಶನಿಕರು, ಸ್ವಾಮೀಜಿಗಳ ನುಡಿಗಳನ್ನ ಆಲಿಸಬೇಕು. ಎಲ್ಲರೂ ಭಕ್ತಿ ಮಾರ್ಗದಲ್ಲಿ ಸಾಗಬೇಕು. ಎಲ್ಲಾ ‌ಮಠದ ಸ್ವಾಮೀಜಿಗಳು ಜವಾಬ್ದಾರಿ ತೆಗೆದುಕೊಂಡಿದ್ದೇವೆ. ಇದರ ಜೊತೆ‌ಗೆ ಸರ್ಕಾರ ಕೂಡಾ ಕೈ ಜೋಡಿಸುತ್ತದೆ ಎಂದು ತಿಳಿಸಿದರು.

ಇದನ್ನೂ ಓದಿ :ಅಕ್ಟೋಬರ್ 14 ರಿಂದ 16 ರ ವರೆಗೆ ತ್ರಿವೇಣಿ ಸಂಗಮದಲ್ಲಿ ಅದ್ಧೂರಿ ಮಹಾ ಕುಂಭಮೇಳ - Triveni Sangam

ABOUT THE AUTHOR

...view details