ಕರ್ನಾಟಕ

karnataka

ETV Bharat / state

ಮಾ.18ರಂದು ಶಿವಮೊಗ್ಗಕ್ಕೆ ಪ್ರಧಾನಿ ಮೋದಿ: ಮಲೆನಾಡ ಹೆಬ್ಬಾಗಿಲಿನಿಂದಲೇ ಚುನಾವಣಾ ರಣಕಹಳೆ

ಪ್ರಧಾನಿ ನರೇಂದ್ರ ಮೋದಿ ಅವರು ಮಾ.18ರಂದು ಶಿವಮೊಗ್ಗಕ್ಕೆ ಆಗಮಿಸಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದ್ದಾರೆ.

Etv Bharat
Etv Bharat

By ETV Bharat Karnataka Team

Published : Mar 12, 2024, 10:30 PM IST

ಮಾ.18ರಂದು ಶಿವಮೊಗ್ಗ ನಗರಕ್ಕೆ ಪ್ರಧಾನಿ ಮೋದಿ: ಮಲೆನಾಡ ಹೆಬ್ಬಾಗಿಲಿನಿಂದಲೇ ಚುನಾವಣಾ ರಣಕಹಳೆ

ಶಿವಮೊಗ್ಗ: ಪ್ರಧಾನಿ ನರೇಂದ್ರ ಮೋದಿ ಅವರು ಮಾ.18ರಂದು ಮಧ್ಯಾಹ್ನ 2ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸಲಿದ್ದು, ಅಲ್ಲಮ್ಮಪ್ರಭು ಮೈದಾನದಲ್ಲಿ ರಾಜ್ಯದ ಮೊದಲ ಚುನಾವಣಾ ಪ್ರಚಾರದ ಭಾಷಣ ಮಾಡಲಿದ್ದಾರೆ ಎಂದು ಸಂಸದ ಬಿ.ವೈ. ರಾಘವೇಂದ್ರ ತಿಳಿಸಿದರು. ಇಂದು ನಗರದ ಫ್ರೀಡಂ ಪಾರ್ಕ್‌ನಲ್ಲಿ ನರೇಂದ್ರ ಮೋದಿ ಅವರು ಆಗಮಿಸುವ ಹಿನ್ನೆಲೆಯಲ್ಲಿ ವೇದಿಕೆಯ ನಿರ್ಮಾಣಕ್ಕಾಗಿ ಭೂಮಿ ಪೂಜೆ ನೆರವೇರಿಸಿ ನಂತರ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು.

ನರೇಂದ್ರ ಮೋದಿ ಅವರು ಜಗಮೆಚ್ಚಿದ ಪ್ರಧಾನಿ ಆಗಿದ್ದಾರೆ. ಭ್ರಷ್ಟಚಾರ ಮುಕ್ತ ಆಡಳಿತ ನೀಡಿದ್ದಾರೆ. 3ನೇ ಬಾರಿಗೆ ಎನ್‍ಡಿಎ ನೇತೃತ್ವ ವಹಿಸಿಕೊಂಡು ಈ ಬಾರಿಯ ಚುನಾವಣೆ ಎದುರಿಸಲು ಸಿದ್ದರಾಗಿದ್ದಾರೆ. ಅವರ ಚುನಾವಣಾ ಪ್ರಚಾರ ಶಿವಮೊಗ್ಗದಿಂದಲೇ ಆರಂಭವಾಗುತ್ತಿರುವುದು ಹೆಮ್ಮೆಯ ವಿಷಯವಾಗಿದೆ. ಮದ್ಯ ಕರ್ನಾಟಕದ ಶಿವಮೊಗ್ಗ, ಚಿತ್ರದುರ್ಗ, ದಾವಣೆಗೆರೆ, ಚಿಕ್ಕಮಗಳೂರು - ಉಡುಪಿ ಲೋಕಸಭಾ ಕ್ಷೇತ್ರಗಳನ್ನು ಗಮನದಲ್ಲಿಟ್ಟುಕೊಂಡು ಚುನಾವಣಾ ಸಾರ್ವಜನಿಕ ಸಭೆ ಶಿವಮೊಗ್ಗದಲ್ಲಿ ನಡೆಯಲಿದೆ ಎಂದರು.

4 ಲೋಕಸಭಾ ಕ್ಷೇತ್ರದಿಂದಲೂ ಮುಖಂಡರು, ಜನಪ್ರತಿನಿಧಿಗಳು ಆಗಮಿಸುತ್ತಾರೆ. ಸುಮಾರು 3 ರಿಂದ 4 ಲಕ್ಷ ಜನ ಸೇರುವ ನಿರೀಕ್ಷೆ ಇದೆ. ಈ ಫ್ರೀಡಂ ಪಾರ್ಕ್‍ನಲ್ಲಿ ಸುಮಾರು 2.5 ಲಕ್ಷ ಕುರ್ಚಿಗಳನ್ನು ಹಾಕಬಹುದಾಗಿದೆ. ಉಳಿದಂತೆ ಫ್ರೀಡಂ ಪಾರ್ಕ್‍ನ ಅಕ್ಕಪಕ್ಕ ದೊಡ್ಡ ಎಲ್‍ಇಡಿ ಟಿವಿಗಳನ್ನು ಅಳವಡಿಸಿ ಮೋದಿ ಭಾಷಣ ನೋಡಲು ಅವಕಾಶ ಕಲ್ಪಿಸಲಾಗುವುದು. ಈಗಾಗಲೇ ವೇದಿಕೆ ಸೇರಿದಂತೆ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.

ಮೋದಿ ಗ್ಯಾರಂಟಿಗಳ ಬಗ್ಗೆ ಕಾಂಗ್ರೆಸ್ ಟೀಕೆ ಮಾಡುತ್ತಿದೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಮೋದಿಯೇ ನಮ್ಮ ದೊಡ್ಡ ಗ್ಯಾರಂಟಿ. ಅವರು ಹಲವು ಗ್ಯಾರಂಟಿಗಳನ್ನು ಈಗಾಗಲೇ ನೀಡಿದ್ದಾರೆ. ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ಸ್ಥಾಪನೆ. 370ರ ವಿಧಿಯನ್ನು ತೆಗೆದು ಹಾಕಿರುವುದು ಇಡೀ ದೇಶದಲ್ಲಿ ಅಭಿವೃದ್ಧಿಪಡಿಸುತ್ತಿದ್ದಾರೆ. ಇದೀಗ ಪೌರತ್ವ ಕಾಯ್ದೆಯನ್ನು ಜಾರಿ ಮಾಡಿ ಅಲ್ಪಸಂಖ್ಯಾತ ಹಿಂದುಗಳಿಗೆ ಭಾರತದಲ್ಲಿ ಪೌರತ್ವ ನೀಡಿದ್ದಾರೆ. ಆ ಮೂಲಕ ಬಾಂಗ್ಲಾದೇಶ, ಪಾಕಿಸ್ತಾನ , ಅಫ್ಘಾನಿಸ್ತಾನದಲ್ಲಿ ಅಲ್ಪಸಂಖ್ಯಾತರಾಗಿರುವ, 2014ರ ಡಿ.31ಕ್ಕೂ ಮೊದಲು ಭಾರತಕ್ಕೆ ವಲಸೆ ಬಂದಿರುವ ಹಿಂದೂ, ಸಿಖ್​, ಬೌದ್ಧ, ಜೈನ, ಪಾರ್ಸಿ ಹಾಗೂ ಕೈಸ್ತರಿಗೆ ಭಾರತ ಪೌರತ್ವ ನೀಡಬಹುದಾಗಿದೆ. ಇದೊಂದು ಮಹತ್ವದ ಹೆಜ್ಜೆ ಎಂದು ಹೇಳಿದರು.

ಅಡಿಕೆ ಆಮದು ಬಗ್ಗೆ ಪ್ರತಿಕ್ರಿಯಿಸಿ, ಅಂತಾರಾಷ್ಟ್ರೀಯ ವ್ಯಾಪಾರ ಒಪ್ಪಂದದ ಹೊರತಾಗಿಯೂ ಕಳ್ಳ ಸಾಗಾಣಿಕೆ ತಡೆಯಲು ಈಗಾಗಲೇ ನಾವು ನಮ್ಮ ರಾಜ್ಯಾಧ್ಯಕ್ಷರ ಗಮನಕ್ಕೆ ತಂದು ಅವರ ಮೂಲಕ ಅಮಿತ್ ಶಾ ಅವರ ಗಮನಕ್ಕೂ ತಂದಿದ್ದೇವೆ. ಕಳ್ಳ ಸಾಗಾಣಿಗೆ ತಡೆಯಲು ಎಲ್ಲ ಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳುತ್ತದೆ. ಅಡಕೆ ಬೆಳೆಗಾರರ ರಕ್ಷಣೆಯೆ ನಮ್ಮ ಗುರಿಯಾಗಿದೆ ಎಂದರು. ಈ ವೇಳೆ ದಾವಣಗೆರೆ, ಚಿತ್ರದುರ್ಗದ ಬಿಜೆಪಿಯ ಶಾಸಕರುಗಳು, ಜಿಲ್ಲಾಧ್ಯಕ್ಷರು ಹಾಜರಿದ್ದರು.

ಇದನ್ನೂ ಓದಿ:ಲೋಕಸಭಾ ಚುನಾವಣೆಗೆ ಜೆಡಿಎಸ್ ಸಿದ್ಧತೆ: ಕುಣಿಗಲ್‌ - ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಮುಖಂಡರ ಸಭೆ ನಡೆಸಿದ ದೇವೇಗೌಡರು

ABOUT THE AUTHOR

...view details