ಗಂಗಾವತಿ :ಹೈದರಾಬಾದ್ನಿಂದ ಬೆಳಗಾವಿಗೆ ಹೊರಟಿದ್ದ ಎಸ್ಆರ್ಎಸ್ ಸಂಸ್ಥೆಗೆ ಸೇರಿದ ಖಾಸಗಿ ಬಸ್ ಪಲ್ಟಿಯಾಗಿದೆ. ಗಂಗಾವತಿ ತಾಲ್ಲೂಕಿನ ಹೆಚ್ಅರ್ಜಿ ನಗರದಲ್ಲಿ ಗುರುವಾರ ಬೆಳಗಿನ ಜಾವ ಅಪಘಾತ ಸಂಭವಿಸಿದೆ. ಬಸ್ನಲ್ಲಿದ್ದ 35 ಜನರಿಗೆ ಗಾಯಗಳಾಗಿದ್ದು, ಅದೃಷ್ಡವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ಹೈದರಾಬಾದ್ನಿಂದ ಬೆಳಗಾವಿಗೆ ಹೊರಟಿದ್ದ ಖಾಸಗಿ ಬಸ್ ಪಲ್ಟಿ: 35 ಪ್ರಯಾಣಿಕರಿಗೆ ಗಾಯ - Bus overturned
ಗಂಗಾವತಿಯಲ್ಲಿ ಎಸ್ಅರ್ಎಸ್ ಬಸ್ ಪಲ್ಟಿಯಾಗಿದ್ದು, ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.
Published : Feb 29, 2024, 10:32 AM IST
ಹೆಚ್ಆರ್ಜಿ ನಗರದ ಹತ್ತಿರ ಹೋಗುವಾಗ ಎದುರಿಗೆ ಬಂದ ಬೋಲೆರೋ ವಾಹನಕ್ಕೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಚಾಲಕ ಬಸ್ ಅನ್ನು ಪಕ್ಕಕ್ಕೆ ಎಳೆದಾಗ ಪಲ್ಟಿಯಾಗಿದೆ ಎಂದು ಬೆಳಗಾವಿಗೆ ಹೊರಟಿದ್ದ ಪ್ರತ್ಯಕ್ಷದರ್ಶಿ ಇರ್ಫಾನ್ ಎಂಬ ಯುವಕ ಘಟನೆ ಬಗ್ಗೆ ತಿಳಿಸಿದ್ದಾನೆ. ಗಾಯಗೊಂಡ ಎಲ್ಲ ಪ್ರಯಾಣಿಕರನ್ನು ಗಂಗಾವತಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಈ ಪೈಕಿ ಲಕ್ಷ್ಮಮ್ಮ ಉಡುಚಪ್ಪ ಎಂಬ (65) ವೃದ್ಧೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಕೊಪ್ಪಳಕ್ಕೆ ದಾಖಲಿಸಲಾಗಿದೆ.
ಇದನ್ನೂ ಓದಿ :ಚಿಕ್ಕಮಗಳೂರು: ಅಯ್ಯಪ್ಪ ಭಕ್ತರಿದ್ದ ಬಸ್ ಪಲ್ಟಿ, 15 ಜನರಿಗೆ ಗಾಯ