ಬೆಂಗಳೂರು:ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪೊಲೀಸ್ ಸಬ್ ಇನ್ಸ್ಪೆಕ್ಟರ್ (ಪಿಎಸ್ಐ) ಪುರುಷ ಹಾಗೂ ಮಹಿಳಾ ನೇರ ನೇಮಕಾತಿ ಪರೀಕ್ಷೆ ಅ.3ರಂದು ನಡೆಯಲಿದ್ದು, ಮುನ್ನೆಚ್ಚರಿಕೆ ಕ್ರಮವಾಗಿ ಪರೀಕ್ಷಾ ಕೇಂದ್ರದ ಸುತ್ತಮುತ್ತ ನಿಷೇಧಾಜ್ಞೆ ವಿಧಿಸಲಾಗಿದೆ.
ನಾಡಿದ್ದು ಪಿಎಸ್ಐ ಪರೀಕ್ಷೆ: 48 ಪರೀಕ್ಷಾ ಕೇಂದ್ರದ ಸುತ್ತ ನಿಷೇಧಾಜ್ಞೆ - PSI Exam
ಅಕ್ಟೋಬರ್ 3ರಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪಿಎಸ್ಐ ಪರೀಕ್ಷೆ ನಡೆಯಲಿದೆ. ಹೀಗಾಗಿ, ಮುನ್ನೆಚ್ಚರಿಕೆ ಕ್ರಮವಾಗಿ ಹಲವು ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ವಿಧಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ETV Bharat)
Published : Oct 1, 2024, 11:03 PM IST
ನಗರದ 48 ಪರೀಕ್ಷಾ ಕೇಂದ್ರಗಳಲ್ಲಿ ಗುರುವಾರ ನಡೆಯುವ ಪಿಎಸ್ಐ ಪರೀಕ್ಷೆಯಲ್ಲಿ ಸಾವಿರಾರು ಉದ್ಯೋಗಾಕಾಂಕ್ಷಿಗಳು ಪರೀಕ್ಷೆ ಬರೆಯಲಿದ್ದಾರೆ. ಈ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆ ನಡೆಯದಂತೆ ಪರೀಕ್ಷಾ ಕೇಂದ್ರದ 200 ಮೀಟರ್ ಸುತ್ತಮುತ್ತ ನಿರ್ಬಂಧ ವಿಧಿಸಲಾಗಿದೆ. ಅಲ್ಲದೆ ಸುತ್ತಲಿನ ಜೆರಾಕ್ಸ್ ಅಂಗಡಿಗಳ ಮುಚ್ಚುವಂತೆ ನಿರ್ದೇಶಿಸಲಾಗಿದೆ ಎಂದು ನಗರ ಪೊಲೀಸ್ ಆಯುಕ್ತ ದಯಾನಂದ ಆದೇಶ ಹೊರಡಿಸಿದ್ದಾರೆ.
ಇದನ್ನೂ ಓದಿ :ಸೆಪ್ಟೆಂಬರ್ 28ರಂದು 402 ಪಿಎಸ್ಐ ಪರೀಕ್ಷೆ ಇಲ್ಲ: ಮತ್ತೆ ಮುಂದೂಡಿಕೆ - PSI Exam Postponed