ಬೆಂಗಳೂರು:ಮುಡಾ ಹಗರಣದ ಕುರಿತು ಸಿಎಂ ಸಿದ್ದರಾಮಯ್ಯ ವಿರುದ್ಧ ತನಿಖೆ ನಡೆಸಲು ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲರು ಅನುಮತಿ ನೀಡಿರುವ ಹಿನ್ನೆಲೆ ಸಿದ್ದರಾಮಯ್ಯನವರ ಬೆಂಬಲಿಗರು, ಅಭಿಮಾನಿ ಸಂಘಗಳು ರಾಜ್ಯಾದ್ಯಂತ ಪ್ರತಿಭಟನೆ ನಡೆಸುವ ಸಾಧ್ಯತೆಯಿದೆ. ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡುತ್ತಿದ್ದಂತೆಯೇ ನಿನ್ನೆ ಕಾಂಗ್ರೆಸ್‌ನ ಕೆಲ ಕಾರ್ಯಕರ್ತರು, ಬೆಂಬಲಿಗರು ರಾಜಭವನದ ಮುಂದೆ ಪ್ರತಿಭಟನೆ ಮಾಡಿದ್ದರು. ನಾಳೆಯೂ ಸಹ ರಾಜ್ಯಾದ್ಯಂತ ಪ್ರತಿಭಟನೆಗೆ ಸಜ್ಜಾಗುತ್ತಿರುವುದಾಗಿ ರಾಜ್ಯ ಗುಪ್ತಚರ ಇಲಾಖೆ ಮಾಹಿತಿ ನೀಡಿದೆ ಎಂಬ ವಿಚಾರ ಪೊಲೀಸ್ ಮೂಲಗಳಿಂದ ತಿಳಿದು ಬಂದಿದೆ.
ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್‌ಗೆ ಆಕ್ರೋಶ; ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಸೂಚನೆ - Police Security - POLICE SECURITY
ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದರಿಂದ ಅಭಿಮಾನಿ ಸಂಘಗಳು ರೋಡ್ಗೆ ಇಳಿದು ಆಕ್ರೋಶ ವ್ಯಕ್ತಪಡಿಸುವ ಸಾಧ್ಯತೆಯಿದ್ದು, ರಾಜ್ಯಾದಂತ ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಸೂಚಿಸಲಾಗಿದೆ.
ಕಟ್ಟೆಚ್ಚರ ವಹಿಸುವಂತೆ ಪೊಲೀಸರಿಗೆ ಸೂಚನೆ (ETV Bharat)
Published : Aug 18, 2024, 10:35 AM IST
ಪ್ರತಿಭಟನೆ ಯಾವುದೇ ಕ್ಷಣದಲ್ಲಿಯಾದರೂ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟುಮಾಡುವ ಸಾಧ್ಯತೆ ಇರುವುದರಿಂದ ರಾಜ್ಯಾದ್ಯಂತ ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ. ಬೆಂಗಳೂರು ಸೇರಿದಂತೆ ಎಲ್ಲಾ ಜಿಲ್ಲೆಗಳಲ್ಲಿ ಪೊಲೀಸರು ಹೆಚ್ಚಿನ ಭದ್ರತೆ ವಹಿಸುವಂತೆ ಎಚ್ಚರಿಸಲಾಗಿದೆ. ಪ್ರತಿಭಟನೆಯ ಮಾಹಿತಿ ಪಡೆದು, ಯಾವುದೇ ರೀತಿಯಲ್ಲಿಯೂ ಶಾಂತಿಭಂಗವಾಗದಂತೆ ಎಚ್ಚರ ವಹಿಸುವಂತೆ ಎಲ್ಲಾ ಜಿಲ್ಲೆಗಳ ಪೊಲೀಸರಿಗೆ ಹಿರಿಯ ಅಧಿಕಾರಿಗಳು ಸೂಚಿದ್ದಾರೆ.