ಕರ್ನಾಟಕ

karnataka

ETV Bharat / state

ರಾಜ್ಯಪಾಲರ ಪ್ರಾಸಿಕ್ಯೂಷನ್ ಅನುಮತಿ: ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದ ಸಿಎಂ ಸಿದ್ದರಾಮಯ್ಯ - CM SIDDARAMAIAH - CM SIDDARAMAIAH

ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ರಾಜ್ಯದ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ದೂರಿದರು.

PROSECUTION AGAINST CM SIDDARAMAIAH  MUDA SCAM  BENGALURU
ಸಿಎಂ ಸಿದ್ದರಾಮಯ್ಯ (ETV Bharat)

By ETV Bharat Karnataka Team

Published : Aug 17, 2024, 2:18 PM IST

Updated : Aug 17, 2024, 4:04 PM IST

ಸಿಎಂ ಸಿದ್ದರಾಮಯ್ಯ (ETV Bharat)

ಬೆಂಗಳೂರು:ಮಾನ್ಯ ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದು, ಅವರ ಈ ನಿರ್ಣಯ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ಷಡ್ಯಂತ್ರವಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ, ಕಬ್ಬನ್ ಉದ್ಯಾನವನ, ಬೆಂಗಳೂರು ಮತ್ತು ರಾಜ್ಯದ ಎಲ್ಲಾ ಇಲಾಖೆಗಳ ವೃಂದ ಸಂಘಗಳ ವತಿಯಿಂದ ಇಂದು ಅರಮನೆ ಮೈದಾನದ ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದ ನಂತರ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಸಂವಿಧಾನ ಬಾಹಿರ ನಿರ್ಣಯದ ವಿರುದ್ಧ ಕಾನೂನು ಹೋರಾಟ ಮಾಡುತ್ತೇವೆ. ಕರ್ನಾಟಕ ರಾಜ್ಯದ ಚುನಾಯಿತ ಸರ್ಕಾರವನ್ನು ಅಭದ್ರಗೊಳಿಸುವ ದೊಡ್ಡ ಷಡ್ಯಂತ್ರವನ್ನು ಮಾಡಲಾಗಿದೆ ಎಂದು ದೂರಿದರು.

ಬಿಜೆಪಿ, ಜೆಡಿಎಸ್ ಹಾಗೂ ರಾಜ್ಯದ ಕೆಲ ಮುಖಂಡರು ಈ ಷಡ್ಯಂತ್ರ ಕೈಗೊಂಡಿದ್ದಾರೆ. ಉತ್ತರಾಖಂಡ, ಜಾರ್ಖಂಡ್, ನವದೆಹಲಿಯಲ್ಲಿ ಮಾಡಿದಂತೆ ಕರ್ನಾಟಕದಲ್ಲಿಯೂ ಷಡ್ಯಂತ್ರ ಮಾಡಿದ್ದಾರೆ. ಮೇಲ್ನೋಟಕ್ಕೆ ನನ್ನ ಮೇಲೆ ಯಾವುದೇ ಪ್ರಕರಣವಿಲ್ಲ ರಾಜ್ಯಪಾಲರ ನಿರ್ಣಯ ಸಂವಿಧಾನ ಬಾಹಿರವಾಗಿದ್ದು, ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದನ್ನು ಪ್ರಶ್ನಿಸಿ ಕಾನೂನು ಹೋರಾಟ ಮಾಡಲಾಗುವುದು ಎಂದು ತಿಳಿಸಿದರು.

ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ:ತನ್ನ ವಿರುದ್ಧ ದೂರು ಬಂದ ದಿನವೇ ಶೋಕಾಸ್ ನೋಟಿಸ್​ ನೀಡಲಾಗಿತ್ತು. ರಾಜ್ಯಪಾಲರ ಈ ನಡೆಯನ್ನು ನಿರೀಕ್ಷಿಸಲಾಗಿತ್ತು. ಶಾಸಕರು, ಸಂಪುಟ ಸಚಿವರು, ಪಕ್ಷದ ವರಿಷ್ಠರೆಲ್ಲರೂ ನನ್ನ ಪರವಾಗಿದ್ದಾರೆ. ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಾಗಿದ್ದಾರೆ. ಇದು ರಾಜಕೀಯ ಪಿತೂರಿಯಾಗಿದ್ದು, ನಾನು ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ರಾಜ್ಯಪಾಲರನ್ನು ರಾಜಕೀಯ ದಾಳವಾಗಿ ಬಳಸಿಕೊಳ್ಳುತ್ತಿದ್ದಾರೆ. ಬಿಜೆಪಿಯವರಿಗೆ ನನ್ನ ರಾಜೀನಾಮೆ ಕೇಳಲು ಯಾವುದೇ ನೈತಿಕತೆ ಇಲ್ಲ. ಕಾಂಗ್ರೆಸ್ ಸರ್ಕಾರ ಹಾಗೂ ಗ್ಯಾರಂಟಿ ಯೋಜನೆಗಳ ಯಶಸ್ಸನ್ನು ಅವರಿಗೆ ಸಹಿಸಲಾಗುತ್ತಿಲ್ಲ. ಕೇಂದ್ರ ಸರ್ಕಾರ ಸಾಮಾಜಿಕ ನ್ಯಾಯ ಹಾಗೂ ಗ್ಯಾರಂಟಿ ಯೋಜನೆಗಳ ವಿರುದ್ಧವಾಗಿದೆ . ಬಿಜೆಪಿಯವರ ಈ ನಿಲುವಿಗೆ ಈಗ ಜೆಡಿಎಸ್ ನವರೂ ಬೆಂಬಲ ನೀಡಿದ್ದಾರೆ ಎಂದರು.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಮುರುಗೇಶ್ ನಿರಾಣಿ, ಶಶಿಕಲಾ ಜೊಲ್ಲೆ , ಜನಾರ್ದನ ರೆಡ್ಡಿ ಯವರ ವಿರುದ್ಧ ದೂರು ನೀಡಲಾಗಿದ್ದರೂ, ಇದುವರೆಗೆ ಯಾವುದೇ ಕ್ರಮವಾಗಿಲ್ಲ. ಹೆಚ್.ಡಿ. ಕುಮಾರಸ್ವಾಮಿಯವರ ಮೇಲೆ ಅನಧಿಕೃತ ಗಣಿಗಾರಿಕೆ ಪರವಾನಗಿ ನೀಡಿರುವ ವಿರುದ್ಧ ತನಿಖೆ ನಡೆಸಲು ಲೋಕಾಯುಕ್ತ ಅನುಮತಿ ಕೋರಿದ್ದರೂ ಯಾವುದೇ ಕ್ರಮವಾಗಿಲ್ಲ ಎಂದು ಹೇಳಿದರು.

ಓದಿ:ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ; ಕಾಂಗ್ರೆಸ್​ ನಾಯಕರು ಹೇಳುವುದೇನು? - CM Siddaramaiah Prosecution

Last Updated : Aug 17, 2024, 4:04 PM IST

ABOUT THE AUTHOR

...view details