ಕರ್ನಾಟಕ

karnataka

ETV Bharat / state

ವಕ್ಫ್‌ ಆಸ್ತಿ ರಕ್ಷಣೆ ಎಲ್ಲರ ಕರ್ತವ್ಯ, ರಾಜ್ಯದ ಪ್ರತಿ ಜಿಲ್ಲೆಯಲ್ಲೂ ವಕ್ಫ್‌ ಅದಾಲತ್: ಸಚಿವ ಜಮೀರ್ ಅಹ್ಮದ್​ - Zameer Ahmed reaction on waqf

ಒಂದೇ ಒಂದು ಇಂಚು ಜಾಗವನ್ನು ವಕ್ಫ್‌ ಬೋರ್ಡ್ ಸರ್ಕಾರದಿಂದ ಪಡೆದಿಲ್ಲ. ವಕ್ಫ್‌ ಆಸ್ತಿ ಸಮುದಾಯದ ಒಳಿತಿಗಾಗಿ ದಾನಿಗಳು ಕೊಟ್ಟಿರುವ ದಾನ ಆಗಿದೆ ಎಂದು ಸಚಿವ ಜಮೀರ್ ಅಹ್ಮದ್​ ತಿಳಿಸಿದರು.

ಜಿಲ್ಲಾ ವಕ್ಫ್‌ ಅಧ್ಯಕ್ಷರು ಹಾಗೂ ಅಧಿಕಾರಿಗಳ ಸಭೆ
ಜಿಲ್ಲಾ ವಕ್ಫ್‌ ಅಧ್ಯಕ್ಷರು ಹಾಗೂ ಅಧಿಕಾರಿಗಳ ಸಭೆ (ETV Bharat)

By ETV Bharat Karnataka Team

Published : Sep 6, 2024, 5:17 PM IST

ಬೆಂಗಳೂರು:ವಕ್ಫ್‌ ಆಸ್ತಿ ದೇವರ ಆಸ್ತಿ. ಇದರ ಸಂರಕ್ಷಣೆ ಎಲ್ಲರ ಕರ್ತವ್ಯ ಎಂದು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್‌ ಸಚಿವ ಜಮೀರ್ ಅಹ್ಮದ್​ ತಿಳಿಸಿದ್ದಾರೆ. ವಿಕಾಸಸೌಧ ಸಮ್ಮೇಳನ ಸಭಾಂಗಣದಲ್ಲಿಂದು ಜಿಲ್ಲಾ ವಕ್ಫ್‌ ಅಧ್ಯಕ್ಷರು ಹಾಗೂ ಅಧಿಕಾರಿಗಳ ಸಭೆ ನಡೆಸಿದ ಅವರು, ವಕ್ಫ್‌ ಆಸ್ತಿ ಸಂರಕ್ಷಣೆ ಕೇವಲ ಸಚಿವ ಅಥವಾ ರಾಜ್ಯಾಧ್ಯಕ್ಷರ ಜವಾಬ್ದಾರಿ ಮಾತ್ರವಲ್ಲ. ಜಿಲ್ಲಾಧ್ಯಕ್ಷರು ಹಾಗೂ ಅಧಿಕಾರಿಗಳ ಹೊಣೆಗಾರಿಕೆಯೂ ಹೌದು ಎಂದು ಹೇಳಿದರು.

ಜಿಲ್ಲಾ ವಕ್ಫ್‌ ಅಧ್ಯಕ್ಷರು ಹಾಗೂ ಅಧಿಕಾರಿಗಳ ಸಭೆ (ETV Bharat)

ವಕ್ಫ್‌ ಆಸ್ತಿ ಸರ್ಕಾರ ಕೊಟ್ಟಿದ್ದು, ಅದು ಸರ್ಕಾರಕ್ಕೆ ಸೇರಿದ್ದು ಎಂಬ ಭಾವನೆ ಇದೆ. ಒಂದೇ ಒಂದು ಇಂಚು ಜಾಗವನ್ನು ವಕ್ಫ್‌ ಬೋರ್ಡ್ ಸರ್ಕಾರದಿಂದ ಪಡೆದಿಲ್ಲ. ವಕ್ಫ್‌ ಆಸ್ತಿ ಸಮುದಾಯದ ಒಳಿತಿಗಾಗಿ ದಾನಿಗಳು ಕೊಟ್ಟಿರುವ ದಾನ ಆಗಿದೆ. ಕಬರಸ್ಥಾನ ಹೊರತು ಪಡಿಸಿದರೆ ಸರ್ಕಾರದಿಂದ ನಮಗೆ ಬೇರೆ ಯಾವುದೇ ಜಾಗ ಕೊಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.

ವಕ್ಫ್‌ ಬೋರ್ಡ್ ವತಿಯಿಂದ 15 ಜಿಲ್ಲೆಗಳಲ್ಲಿ ಮಹಿಳಾ ಕಾಲೇಜು ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ಅದೇ ರೀತಿ ತಾಲೂಕು ಮತ್ತು ಜಿಲ್ಲೆಗಳಲ್ಲಿ ವಕ್ಫ್‌ ಬೋರ್ಡ್ ವತಿಯಿಂದ ಆಸ್ಪತ್ರೆ ನಿರ್ಮಾಣಕ್ಕೂ ಚಿಂತನೆ ಇದೆ. ಜಿಲ್ಲಾ ಮಟ್ಟದಲ್ಲಿ ವಕ್ಫ್‌ ಅದಾಲತ್ ನಡೆಸುತ್ತಿರುವುದರಿಂದ ಹಲವಾರು ಸಮಸ್ಯೆ ಬಗೆಹರಿದಿದ್ದು, ರಾಜ್ಯದ ಪ್ರತಿ ಜಿಲ್ಲೆಯಲ್ಲೂ ನಡೆಸಲಾಗುವುದು ಎಂದು ತಿಳಿಸಿದರು.

ಜಿಲ್ಲಾ ವಕ್ಫ್‌ ಅಧ್ಯಕ್ಷರು ಹಾಗೂ ಅಧಿಕಾರಿಗಳ ಸಭೆ (ETV Bharat)

ಸಭೆಯಲ್ಲಿ ಮಾತನಾಡಿದ ಜಿಲ್ಲಾಧ್ಯಕ್ಷರು, ತಮ್ಮ ಜಿಲ್ಲೆಗಳ ಸಮಸ್ಯೆ ಹೇಳಿಕೊಂಡರು. ಕಾಲೇಜು ಹಾಗೂ ಆಸ್ಪತ್ರೆ ನಿರ್ಮಾಣಕ್ಕೆ ಜಾಗ ಕೊಡಲು ದಾನಿಗಳು ಸಿದ್ದ ಇರುವ ಬಗ್ಗೆಯೂ ಸಭೆಯ ಗಮನಕ್ಕೆ ತಂದರು. ಇದೇ ಸಂದರ್ಭದಲ್ಲಿ ಒಂದು ವರ್ಷ ಪೂರೈಸಿದ ರಾಜ್ಯ ವಕ್ಫ್‌ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ ಅವರನ್ನು ಸನ್ಮಾನಿಸಲಾಯಿತು. ಒಂದು ವರ್ಷದ ಸಾಧನೆ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಾಯಿತು.

ಪರಿಷತ್ ಸದಸ್ಯ ಅಬ್ದುಲ್ ಜಬ್ಬಾರ್, ಸದಸ್ಯರಾದ ಯಾಕೊಬ್, ಮೌಲನಾ ಶಾಫಿ ಸಾದಿ, ರಿಯಾಜ್, ಅಸೀಫ್, ವಸತಿ ಇಲಾಖೆ ಕಾರ್ಯದರ್ಶಿ ನವೀನ್ ರಾಜ್ ಸಿಂಗ್, ಸಿಇಒ ಜಿಲಾನಿ ಮೊಕಾಶಿ ಈ ವೇಳೆ ಉಪಸ್ಥಿತರಿದ್ದರು.

ಇದನ್ನೂ ಓದಿ:ಮಹತ್ವಾಕಾಂಕ್ಷೆಯ ಎತ್ತಿನಹೊಳೆ ಯೋಜನೆಯ ಮೊದಲ ಹಂತ ಲೋಕಾರ್ಪಣೆಗೊಳಿಸಿದ ಸಿಎಂ - yettinahole project inauguration

ABOUT THE AUTHOR

...view details