ಮೈಸೂರು: ಎರಡು ಬಾರಿ ಸಂಸದರಾಗಿ ಮೈಸೂರು ಮತ್ತು ಕೊಡಗು ಜಿಲ್ಲೆಗೆ ಒಳ್ಳೆ ಕೆಲಸ ಮಾಡಿರುವ ಸಂಸದ ಪ್ರತಾಪ್ ಸಿಂಹಗೆ ಈ ಬಾರಿಯೂ ಟಿಕೆಟ್ ನೀಡಬೇಕೆಂದು ಆಗ್ರಹಿಸಿ ಅವರ ಅಭಿಮಾನಿಗಳು ಮೈಸೂರು ನಗರದ ರಿಂಗ್ ರಸ್ತೆಯ ಇಲವಾಲ ಫ್ಲೈ ಓವರ್ ಬಳಿ ಬೃಹತ್ ಪ್ರತಿಭಟನೆ ನಡೆಸಿದರು.
ಈ ಬಾರಿ ಸಂಸದ ಪ್ರತಾಪ್ ಸಿಂಹ ಟಿಕೆಟ್ ಕೈ ತಪ್ಪಲಿದೆ ಎಂಬ ವರದಿಯ ಹಿನ್ನೆಲೆಯಲ್ಲಿ ಪ್ರತಾಪ್ ಸಿಂಹ ಅಭಿಮಾನಿಗಳು ಈ ಬಾರಿಯೂ ಇವರಿಗೆ ಟಿಕೆಟ್ ನೀಡಬೇಕು, ಯಾವುದೇ ಕಾರಣಕ್ಕೂ ಬಿಜೆಪಿ ಹೈಕಮಾಂಡ್ ಬೇರೆಯವರಿಗೆ ಟಿಕೆಟ್ ನೀಡಬಾರದು. ಕಳೆದ 10 ವರ್ಷಗಳಿಂದ ಮೈಸೂರು ಬೆಂಗಳೂರು ಹೈವೇ, ಮೈಸೂರು ವಿಮಾನ ನಿಲ್ದಾಣ, ಮೈಸೂರು ರೈಲ್ವೇ ನಿಲ್ದಾಣ ಅಭಿವೃದ್ಧಿ, ರಿಂಗ್ ರಸ್ತೆ ಸೇರಿದಂತೆ ಹಲವಾರು ಅಭಿವೃದ್ಧಿ ಕೆಲಸವನ್ನು ಸಂಸದ ಪ್ರತಾಪ್ ಸಿಂಹ ಮಾಡಿದ್ದಾರೆ. ಇಂತಹ ವ್ಯಕ್ತಿಗೆ ಈ ಬಾರಿ ಟಿಕೆಟ್ ಸಿಗುವುದಿಲ್ಲ ಎಂಬ ವಿಚಾರ ಸರಿಯಿಲ್ಲ. ಕೂಡಲೇ ಬಿಜೆಪಿ ಹೈಕಮಾಂಡ್ ಪ್ರತಾಪ್ ಸಿಂಹಗೆ ಟಿಕೆಟ್ ನೀಡಬೇಕು, ಇಲ್ಲದೆ ಇದ್ದರೆ ಪ್ರಬಲ ಸಮುದಾಯ ತನ್ನದೇ ನಿರ್ಣಯ ಕೈಗೊಳ್ಳಲಿದೆ ಎಂದು ಅಭಿಮಾನಿಗಳು ಎಚ್ಚರಿಕೆಯ ಸಂದೇಶ ರವಾನಿಸಿದರು.