ವಿಜಯನಗರ/ಬೀದರ್: ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಅಂಬೇಡ್ಕರ್ ಕುರಿತು ನೀಡಿದ ಹೇಳಿಕೆ ಖಂಡಿಸಿ ಸಂವಿಧಾನ ಸಂರಕ್ಷಣಾ ಸಮಿತಿ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಇಂದು ವಿಜಯನಗರ ಬಂದ್‌ಗೆ ಕರೆ ನೀಡಿದ್ದವು. ಹೀಗಾಗಿ, ಹೊಸಪೇಟೆ ಬಸ್ ನಿಲ್ದಾಣ ಖಾಲಿ ಖಾಲಿಯಾಗಿತ್ತು.
ಇದೇ ರೀತಿ, ಬೀದರ್‌ನಲ್ಲಿ ಬಂದ್‌ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಪ್ರತಿಭಟನೆಯ ಸ್ಥಳಗಳಲ್ಲಿ ವ್ಯಾಪಾರ-ವಹಿವಾಟು ಸಂಪೂರ್ಣ ಸ್ಥಗಿತವಾಗಿತ್ತು. ಜಿಲ್ಲೆಯಾದ್ಯಂತ ನಡೆಯುತ್ತಿರುವ ಪ್ರತಿಭಟನೆಯ ಹಿನ್ನೆಲೆಯಲ್ಲಿ ಕರ್ನಾಟಕ ರಸ್ತೆ ಸಾರಿಗೆ ಬಸ್‌ಗಳ ಸಂಚಾರ ಸ್ಥಗಿತವಾಗಿದೆ. ಬಹುತೇಕ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಅಮಿತ್ ಶಾ ಹೇಳಿಕೆ ಖಂಡಿಸಿ ಪ್ರತಿಭಟನೆ (ETV Bharat) "ಪೊಲೀಸ್ ಇಲಾಖೆ ಈಗಾಗಲೇ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಿದೆ. ಶಾಲಾ-ಕಾಲೇಜುಗಳು ಮತ್ತು ಬಸ್ ಸಂಚಾರದ ಸಮಯದಲ್ಲಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ರಕ್ಷಣೆ ನೀಡುತ್ತೇವೆ. ಜಿಲ್ಲೆಯ ವಿವಿಧೆಡೆ 102 ಸಿಸಿಟಿವಿ ಕ್ಯಾಮೆರಾಗಳನ್ನು ಅಳವಡಿಸಿ, ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ನಿಗಾ ವಹಿಸಲಾಗುತ್ತಿದೆ" ಎಂದು ಎಸ್ಪಿ ಎಲ್.ಹರಿಬಾಬು ದೂರವಾಣಿ ಮೂಲಕ ತಿಳಿಸಿದರು.
ಪರೀಕ್ಷೆ ಮುಂದೂಡಿಕೆ: ವಿಜಯನಗರ ಶ್ರೀಕೃಷ್ಣ ದೇವರಾಯ ವಿಶ್ವವಿದ್ಯಾಲಯ ಮೌಲ್ಯಮಾಪನ ಕುಲಸಚಿವ ಡಾ.ರಮೇಶ್ ಓಲೇಕಾರ್ ಅವರು ಪದವಿ ಕಾಲೇಜು ವಿದ್ಯಾರ್ಥಿಗಳ ಸೆಮಿಸ್ಟರ್ ಪರೀಕ್ಷೆ ಮುಂದೂಡಿ ಆದೇಶ ಹೊರಡಿಸಿದ್ದಾರೆ. ಇಂದಿನ ಪರೀಕ್ಷೆ ಜನವರಿ 14ರಂದು ನಡೆಯುತ್ತದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ:ಹುಬ್ಬಳ್ಳಿ-ಧಾರವಾಡ ಬಂದ್: ಬೆಳಗ್ಗೆಯಿಂದಲೇ ದಲಿತ ಸಂಘಟನೆಗಳ ಪ್ರತಿಭಟನೆ - HUBBALLI DHARWAD BANDH