ಬೆಂಗಳೂರು: ರಾಜ್ಯಸಭಾ ಚುನಾವಣೆ ಹಿನ್ನೆಲೆ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್.ಟಿ. ಸೋಮಶೇಖರ್ ಅಡ್ಡಮತದಾನ ಮಾಡಿರುವ ಹಿನ್ನೆಲೆ ಅವರ ಮನೆ ಮುಂದೆ ಪ್ರತಿಭಟನೆ ನಡೆಯುವ ಸಾಧ್ಯತೆಯಿದೆ. ಈ ಹಿನ್ನೆಲೆ ಶಾಸಕ ಸೋಮಶೇಖರ್ ಮನೆಗೆ ಪೊಲೀಸರು ಬಿಗಿ ಭದ್ರತೆ ಒದಗಿಸಿದ್ದಾರೆ.
ಬಿಟಿಎಂ ಬಡಾವಣೆಯಲ್ಲಿರುವ ಸೋಮಶೇಖರ್ ಮನೆಗೆ ಭದ್ರತೆ ಒದಗಿಸಲಾಗಿದೆ. ಇಂದು ನಡೆದ ಚುನಾವಣೆಯಲ್ಲಿ ಸೋಮಶೇಖರ್ ಬಿಜೆಪಿ ಅಭ್ಯರ್ಥಿಯನ್ನು ಬಿಟ್ಟು ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದರು. ಈ ಹಿನ್ನೆಲೆ ಬಿಜೆಪಿ ಕಾರ್ಯಕರ್ತರು ಸೋಮಶೇಖರ್ ವಿರುದ್ಧ ಪ್ರತಿಭಟನೆ ನಡೆಸಿ ಮನೆಗೆ ಮುತ್ತಿಗೆ ಹಾಕುವ ಸಾಧ್ಯತೆಯಿದೆ. ಈ ಹಿನ್ನೆಲೆ ಮುಂಜಾಗ್ರತ ಕ್ರಮವಾಗಿ ಎಸ್ಟಿಎಸ್ ಮನೆ ಮುಂದೆ ಬಿಗಿ ಪೊಲೀಸ್ ಭದ್ರತೆ ಒದಗಿಸಲಾಗಿದೆ.