ಕರ್ನಾಟಕ

karnataka

ETV Bharat / state

ಪ್ರಯಾಣಿಕರ ಗಮನಕ್ಕೆ; ದಸರಾ ಹಬ್ಬಕ್ಕೆ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ - Dasara Trains - DASARA TRAINS

ದಸರಾ ಹಬ್ಬದ ಪ್ರಯುಕ್ತ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ ಮಾಡುವ ಮೂಲಕ ನೈರುತ್ಯ ರೈಲ್ವೆ ಇಲಾಖೆಯು ಪ್ರಯಾಣಿಕರಿಗೆ ಗುಡ್‌ನ್ಯೂಸ್‌ ನೀಡಿದೆ.

Provision of temporary extra coaches for 34 trains for Dasara festival
ದಸರಾ ಹಬ್ಬಕ್ಕೆ 34 ರೈಲುಗಳಿಗೆ ತಾತ್ಕಾಲಿಕ ಹೆಚ್ಚುವರಿ ಬೋಗಿಗಳ ಜೋಡಣೆ (ETV Bharat)

By ETV Bharat Karnataka Team

Published : Sep 20, 2024, 5:23 PM IST

ಹುಬ್ಬಳ್ಳಿ:ದಸರಾ ಹಬ್ಬದ ಸಮಯದಲ್ಲಿ ಪ್ರಯಾಣಿಕರ ನಿರೀಕ್ಷಿತ ಹೆಚ್ಚುವರಿ ದಟ್ಟಣೆಯನ್ನು ಕಡಿಮೆಗೊಳಿಸುವ ಸಲುವಾಗಿ, ನೈಋತ್ಯ ರೈಲ್ವೆಯು 34 ರೈಲುಗಳಿಗೆ ತಾತ್ಕಾಲಿಕವಾಗಿ ಹೆಚ್ಚುವರಿ ಬೋಗಿಗಳನ್ನು ಜೋಡಿಸಲು ನಿರ್ಧರಿಸಲಾಗಿದೆ.

ಅಕ್ಟೋಬರ್ 4 ರಿಂದ 15 ರವರೆಗೆ (17301) ಮೈಸೂರು-ಬೆಳಗಾವಿ ಎಕ್ಸ್​ಪ್ರೆಸ್​, ಅಕ್ಟೋಬರ್ 1 ರಿಂದ 12 ರವರೆಗೆ ಬೆಳಗಾವಿ-ಮೈಸೂರು ಎಕ್ಸ್​ಪ್ರೆಸ್​ (17302), ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಚಾಮರಾಜನಗರ-ಮೈಸೂರು ಎಕ್ಸ್​ಪ್ರೆಸ್​ (06233/06234), ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಬಾಗಲಕೋಟ ಬಸವ ಎಕ್ಸ್​ಪ್ರೆಸ್​ (17307) ಮತ್ತು ಅಕ್ಟೋಬರ್ 3 ರಿಂದ 14 ರವರೆಗೆ ಬಾಗಲಕೋಟ - ಮೈಸೂರು ಬಸವ ಎಕ್ಸ್​ಪ್ರೆಸ್​ (17308), ಅಕ್ಟೋಬರ್ 1 ರಿಂದ 12 ರವರೆಗೆ ಎಸ್ಎಸ್ಎಸ್ ಹುಬ್ಬಳ್ಳಿ-ಮೈಸೂರು ಹಂಪಿ ಎಕ್ಸ್​ಪ್ರೆಸ್​ (16591), ಅಕ್ಟೋಬರ್ 4 ರಿಂದ 15 ರವರೆಗೆ ಮೈಸೂರು-ಎಸ್ಎಸ್ಎಸ್ ಹುಬ್ಬಳ್ಳಿ ಹಂಪಿ ಎಕ್ಸ್​ಪ್ರೆಸ್​ (16592), ಅಕ್ಟೋಬರ್ 2 ರಿಂದ 13 ರವರೆಗೆ ಮೈಸೂರು-ಪಂಢರಪುರ ಗೋಲಗುಂಬಜ್ ಎಕ್ಸ್​ಪ್ರೆಸ್​ (16535) ಮತ್ತು ಅಕ್ಟೋಬರ್ 3 ರಿಂದ 14 ರವರೆಗೆ ಪಂಢರಪುರ ಗೋಲಗುಂಬಜ್ ಎಕ್ಸ್​ಪ್ರೆಸ್​ (16536) ರೈಲುಗಳಿಗೆ ತಲಾ ಒಂದು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ.

ಅಕ್ಟೋಬರ್ 3 ರಿಂದ 12 ರವರೆಗೆ (16227) ಮೈಸೂರು-ತಾಳಗುಪ್ಪ ಎಕ್ಸ್​ಪ್ರೆಸ್​ ಮತ್ತು ಅಕ್ಟೋಬರ್ 4 ರಿಂದ 13 ರವರೆಗೆ ತಾಳಗುಪ್ಪ-ಮೈಸೂರು ಎಕ್ಸ್​ಪ್ರೆಸ್​ (16228) ರೈಲುಗಳಿಗೆ ತಲಾ ಎರಡು ಸ್ಲೀಪರ್ ಕ್ಲಾಸ್ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ.

ಅಕ್ಟೋಬರ್ 4 ರಿಂದ 13 ರವರೆಗೆ (06543/06544) ಮೈಸೂರು-ಚಾಮರಾಜನಗರ-ಮೈಸೂರು ಪ್ಯಾಸೆಂಜರ್ ಸ್ಪೆಷಲ್, ಅಕ್ಟೋಬರ್ 4 ರಿಂದ 13 ರವರೆಗೆ ತಾಳಗುಪ್ಪ-ಮೈಸೂರು ಕುವೆಂಪು ಎಕ್ಸ್​ಪ್ರೆಸ್​ (16221), ಅಕ್ಟೋಬರ್ 3 ರಿಂದ 12 ರವರೆಗೆ ಮೈಸೂರು-ತಾಳಗುಪ್ಪ ಕುವೆಂಪು ಎಕ್ಸ್​ಪ್ರೆಸ್​, ಅಕ್ಟೋಬರ್ 3 ರಿಂದ 12 ರವರೆಗೆ ಕೆಎಸ್ಆರ್ ಬೆಂಗಳೂರು-ಅರಸೀಕೆರೆ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ (06273/06274), ಅಕ್ಟೋಬರ್ 3 ರಿಂದ 12 ರವರೆಗೆ ಕೆಎಸ್ಆರ್ ಬೆಂಗಳೂರು - ಚನ್ನಪಟ್ಟಣ-ಕೆಎಸ್ಆರ್ ಬೆಂಗಳೂರು ಪ್ಯಾಸೆಂಜರ್ (06581/06582), ಅಕ್ಟೋಬರ್ 3 ರಿಂದ 12 ರವರೆಗೆ ಅರಸೀಕೆರೆ-ಮೈಸೂರು ಪ್ಯಾಸೆಂಜರ್ (06213), ಅಕ್ಟೋಬರ್ 5 ರಿಂದ 14 ರವರೆಗೆ ಮೈಸೂರು-ಅರಸೀಕೆರೆ ಪ್ಯಾಸೆಂಜರ್ (06214), ಅಕ್ಟೋಬರ್ 3 ರಿಂದ 12 ರವರೆಗೆ ಮೈಸೂರು-ಶಿವಮೊಗ್ಗ ಟೌನ್ ಎಕ್ಸ್​ಪ್ರೆಸ್​ (16225), ಅಕ್ಟೋಬರ್ 5 ರಿಂದ 14 ರವರೆಗೆ ಶಿವಮೊಗ್ಗ ಟೌನ್-ಮೈಸೂರು ಎಕ್ಸ್​ಪ್ರೆಸ್​ (16226), ಅಕ್ಟೋಬರ್ 3 ರಿಂದ 12 ರವರೆಗೆ ಶಿವಮೊಗ್ಗ ಟೌನ್-ಚಿಕ್ಕಮಗಳೂರು ಪ್ಯಾಸೆಂಜರ್ (07365), ಅಕ್ಟೋಬರ್ 5 ರಿಂದ 14 ರವರೆಗೆ ಚಿಕ್ಕಮಗಳೂರು-ಶಿವಮೊಗ್ಗ ಟೌನ್ ಪ್ಯಾಸೆಂಜರ್ (07366), ಅಕ್ಟೋಬರ್ 4 ರಿಂದ 13 ರವರೆಗೆ ಚಿಕ್ಕಮಗಳೂರು-ಯಶವಂತಪುರ-ಚಿಕ್ಕಮಗಳೂರು ಎಕ್ಸ್​ಪ್ರೆಸ್​ (16239/16240), ಅಕ್ಟೋಬರ್ 1 ರಿಂದ 12 ರವರೆಗೆ ಅರಸೀಕೆರೆ-ಮೈಸೂರು ಪ್ಯಾಸೆಂಜರ್ (06267), ಅಕ್ಟೋಬರ್ 4 ರಿಂದ 15 ರವರೆಗೆ ಮೈಸೂರು-ಅರಸೀಕೆರೆ ಪ್ಯಾಸೆಂಜರ್ (06268), ಅಕ್ಟೋಬರ್ 1 ರಿಂದ 12 ರವರೆಗೆ ಮೈಸೂರು-ಎಸ್ಎಂವಿಟಿ ಬೆಂಗಳೂರು ಪ್ಯಾಸೆಂಜರ್ (06269), ಅಕ್ಟೋಬರ್ 3 ರಿಂದ 14 ರವರೆಗೆ ಎಸ್ಎಂವಿಟಿ ಬೆಂಗಳೂರು-ಮೈಸೂರು (06270), ಅಕ್ಟೋಬರ್ 2 ರಿಂದ 13 ರವರೆಗೆ ಎಸ್ಎಂವಿಟಿ ಬೆಂಗಳೂರು-ಕರೈಕಲ್ ಎಕ್ಸ್​ಪ್ರೆಸ್​ (16529) ಮತ್ತು ಅಕ್ಟೋಬರ್ 3 ರಿಂದ 14 ರವರೆಗೆ ಕರೈಕಲ್-ಎಸ್ಎಂವಿಟಿ ಬೆಂಗಳೂರು ಎಕ್ಸ್​ಪ್ರೆಸ್​ ರೈಲುಗಳಿಗೆ ತಲಾ ಒಂದು ಸಾಮಾನ್ಯ ದ್ವಿತೀಯ ದರ್ಜೆ ಹೆಚ್ಚುವರಿ ಬೋಗಿಗಳನ್ನು ಜೋಡಿಸಲಾಗುತ್ತಿದೆ ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ. ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ:ಹಿರಿಯ ಸಾಹಿತಿ ಹಂ.ಪಾ.ನಾಗರಾಜಯ್ಯರಿಂದ ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ ಘೋಷಣೆ - Mysuru Dasara 2024

ABOUT THE AUTHOR

...view details