ಬೆಂಗಳೂರು: 545 ಪೊಲೀಸ್ ಸಬ್‌ಇನ್ಸ್‌ಪೆಕ್ಟರ್ ಹುದ್ದೆಗಳ ಭರ್ತಿಗೆ (ಪಿಎಸ್ಐ) ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ನಡೆಸಿದ್ದ ಪರೀಕ್ಷೆಯ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ರಾಜ್ಯ ಗೃಹ ಇಲಾಖೆ ಪ್ರಕಟಿಸಿದೆ.
ಪಿಎಸ್ಐ ನೇರ ನೇಮಕಾತಿ ಕುರಿತಂತೆ 2021ರಲ್ಲಿ ಗೃಹ ಇಲಾಖೆಯು ಅಧಿಸೂಚನೆ ಹೊರಡಿಸಿತ್ತು. 2022ರ ನ.3ರಂದು ಪರೀಕ್ಷೆ ನಡೆದಿತ್ತು. ನೇಮಕಾತಿಯಲ್ಲಿ ಅಕ್ರಮ ಕಂಡುಬಂದ ಕಾರಣ ನೇಮಕಾತಿಯಾಗಿದ್ದ 545 ಮಂದಿಯ ತಾತ್ಕಾಲಿಕ ಪಟ್ಟಿಯನ್ನು ಸರ್ಕಾರ ರದ್ದುಗೊಳಿಸಿತ್ತು. ಇದನ್ನು ಪ್ರಶ್ನಿಸಿ ಅಭ್ಯರ್ಥಿಗಳು ಹೈಕೋರ್ಟ್ ಮೊರೆ ಹೋಗಿದ್ದರು. ವಿಚಾರಣೆ ನಡೆಸಿದ ನ್ಯಾಯಾಲಯ ಅರ್ಜಿ ವಜಾಗೊಳಿಸಿ ಮರುಪರೀಕ್ಷೆ ನಡೆಸುವಂತೆ ಆದೇಶಿಸಿತ್ತು.